ಮನಿ ಲಾಂಡರಿಂಗ್ ಪ್ರಕರಣದ ವಿಚಾರವಾಗಿ ಬಂಧನದಲ್ಲಿರುವ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನಡೆಸಿದ ದೆಹಲಿ ಹೈಕೋರ್ಟ್ ಈಗ ಅಂತಿಮ ತೀರ್ಪನ್ನು ಕಾಯ್ದಿರಿಸಿದೆ.
ದಸರಾ ಹಬ್ಬದ ಕಾರಣದಿಂದಾಗಿ ಮುಂದೂಡಲಾಗಿದ್ದ ವಿಚಾರಣೆಯನ್ನು ಇಂದಿಗೆ ಮುಂದೂಡಿತ್ತು. ಆದರೆ ಇಂದು ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ ಮತ್ತೆ ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಿದೆ.
ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರು ಬಿಡುಗಡೆಯಾದರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಎಂದು ದೆಹಲಿ ಹೈಕೋರ್ಟ್ ಇಂದು ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದೆ. ಈ ಪ್ರಕರಣದಲ್ಲಿ ಸಿಬಿಐ ಅವರನ್ನು ವಿಚಾರಣೆ ಮುಗಿಸಿದ ನಂತರ ಚಿದಂಬರಂ ಸೆಪ್ಟೆಂಬರ್ 5 ರಿಂದ ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ.
ಇತ್ತೀಚೆಗೆ ಚೆನ್ನೈನಲ್ಲಿ ತಮ್ಮ ಮಕ್ಕಳ್ ನೀದಿಮೈಯ್ಯಂ ಪಕ್ಷದ ಪರವಾಗಿ ಉಪಚುನಾವಣೆ ರ್ಯಾಲಿ ಉದ್ದೇಶಿಸಿ ಮಾತನಾಡುತ್ತಾ, "ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಒಬ್ಬ ಹಿಂದೂ ಆಗಿದ್ದ. ಆತನ ಹೆಸರು ನಾಥೂರಾಮ್ ಗೋಡ್ಸೆ' ಎಂದು ಕಮಲ್ ಹಾಸನ್ ಹೇಳಿದ್ದರು.
1984ರ ಸಿಖ್ ವಿರೋಧಿ ಗಲಭೆ ಪ್ರಕರಣದಲ್ಲಿ ಅಪರಾಧಿ ಎಂದು ಸಾಬಿತಾಗಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಮಾಜಿ ನಾಯಕ ಸಜ್ಜನ್ ಕುಮಾರ್ ಸೇರಿದಂತೆ ಮೂವರು ಸೋಮವಾರ ನ್ಯಾಯಾಲಯಕ್ಕೆ ಶರಣಾಗಿದ್ದಾರೆ.
2010 ರಲ್ಲಿ ದೌಲಾ ಕುವಾನ್ ದಲ್ಲಿ ನಡೆದ 30 ವರ್ಷದ ಮಿಜೊರಾಮ್ ನ ಮಹಿಳಾ ಬಿಪಿಓ ಉದ್ಯೋಗಿಯ ಅತ್ಯಾಚಾರ ಪ್ರಕರಣದಲ್ಲಿ ಐದು ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಈಗ ಈ ತೀರ್ಪನ್ನು ಆರೋಪಿಗಳ ಮೇಲ್ಮನವಿಯನ್ನು ವಜಾಗೊಳಿಸುವ ಮೂಲಕ ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.