ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗ್ರಾಮೀಣ ಪಶ್ಚಿಮ ಬಂಗಾಳವನ್ನು ಮಲವಿಸರ್ಜನೆ ಮುಕ್ತ (ಒಡಿಎಫ್) ಎಂದು ಘೋಷಿಸಿದ್ದಾರೆ ಮತ್ತು ತೃಣಮೂಲ ಕಾಂಗ್ರೆಸ್ ಸರ್ಕಾರವು ಈಗ ಘನತ್ಯಾಜ್ಯ ನಿರ್ವಹಣೆಯತ್ತ ಗಮನ ಹರಿಸಲಿದೆ ಎಂದು ಹೇಳಿದರು.
ಮಮತಾ ಬ್ಯಾನರ್ಜಿಯ ಸಹಚರರು ಹಾಗೂ ತೃಣಮೂಲ ಕಾಂಗ್ರೆಸ್ನ ನಾಯಕರು ಹೊರಗಿನ ಗೂಂಡಾಗಳಿಗೆ ಆಶ್ರಯ ನೀಡುತ್ತಿದ್ದಾರೆ. ಇದನ್ನೆಲ್ಲ ತಿಳಿದಿದ್ದರೂ ಪೊಲೀಸರು ದೀದಿಯ ಸೇನೆಯಂತೆ ಕೆಲಸ ಮಾಡುತ್ತಿದ್ದಾರೆ ಎಂದು ಅರ್ಜುನ್ ಸಿಂಗ್ ಆರೋಪಿಸಿದ್ದಾರೆ.
ಚಿನ್ನ ಮತ್ತು ತಾಮ್ರದ ಸರ, ಉಂಗುರ, ಕಿವಿಯೋಲೆ, ಗೆಜ್ಜೆ, ಬ್ರಾಸ್ಲೇಟ್, ವಾಚ್ ಸೇರಿದಂತೆ 1.5 ಕೆ.ಜಿ. ತುಕಡ ಆಭರಣಗಳು ಮತ್ತು 5 ಹಾಗೂ 10 ರೂ. ಮೌಲ್ಯದ ಒಟ್ಟು 90 ನಾಣ್ಯಗಳನ್ನು ಆಕೆಯ ಹೊಟ್ಟೆಯಿಂದ ಹೊರತೆಗೆಯಲಾಗಿದೆ.
ಸಿಪಿಎಂ, ಕಾಂಗ್ರೆಸ್ ಮತ್ತು ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಪಶ್ಚಿಮ ಬಂಗಾಳದ 107 ಶಾಸಕರು ಶೀಘ್ರದಲ್ಲೇ ಬಿಜೆಪಿಗೆ ಸೇರಲಿದ್ದಾರೆ ಎಂದು ಬಿಜೆಪಿ ನಾಯಕ ಮುಕುಲ್ ರಾಯ್ ಹೇಳಿದ್ದಾರೆ.
ಶನಿವಾರದಂದು ಪಶ್ಚಿಮ ಬಂಗಾಳ ಪೊಲೀಸರು ನಗರದಲ್ಲಿ ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳನ್ನು ಒಳಗೊಂಡ ಹಿಂಸಾಚಾರದ ಹಿನ್ನಲೆಯಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ 112 ತುಣುಕುಗಳ ಲೈವ್ ಬಾಂಬ್, ಆರು ದೇಶ ನಿರ್ಮಿತ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ ಮತ್ತು ನಿರ್ದಿಷ್ಟ ಮತ್ತು ತಡೆಗಟ್ಟುವ ವಿಭಾಗಗಳ ಅಡಿಯಲ್ಲಿ 399 ಜನರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಇತರ ರಾಜ್ಯಗಳಲ್ಲಿ ಅನೇಕ ಹಿಂಸಾಚಾರಗಳು ನಡೆದಿದ್ದರೂ ಪಶ್ಚಿಮ ಬಂಗಾಳವನ್ನು ಸಂಸತ್ತಿನಲ್ಲಿ ಅನಗತ್ಯವಾಗಿ ಗುರಿಯಾಗಿಸಲಾಗುತ್ತಿದೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮಂಗಳವಾರ ಹೇಳಿದೆ.
ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ, ಪೊಲೀಸ್ ಅಧಿಕಾರಿಗಳು ತಮ್ಮ ಮಾತುಗಳನ್ನು ಕೇಳುತ್ತಿಲ್ಲ ಎಂಬ ಇತ್ತೀಚಿನ ಹೇಳಿಕೆಯ ವಿರುದ್ಧ ಪಶ್ಚಿಮ ಬಂಗಾಳ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ವಾಗ್ಧಾಳಿ ನಡೆಸಿದ್ದಾರೆ.
ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಬಂಡೆಲ್ ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕಿ ನೀತು ರಾಮ್ ಅವರ ಪತಿ ದಿಲೀಪ್ ರಾಮ್ ಅವರನ್ನು ಅಪರಿಚಿತ ದುಷ್ಕರ್ಮಿಗಳು ಶನಿವಾರ ಗುಂಡಿಕ್ಕಿ ಕೊಂದಿದ್ದಾರೆ.ರೈಲ್ವೆ ನಿಲ್ದಾಣದ ಐದನೇ ಪ್ಲಾಟ್ಫಾರ್ಮ್ನಲ್ಲಿ ಈ ಘಟನೆ ಸಂಭವಿಸಿದೆ.
"ಮಮತಾ ಬ್ಯಾನರ್ಜಿ ಆಡಳಿತದಲ್ಲಿ ಗ್ರ್ಯಾಂಡ್ ಟ್ರಂಕ್ ರಸ್ತೆ ಸೇರಿದಂತೆ ಇತರ ಪ್ರಮುಖ ರಸ್ತೆಗಳನ್ನು ಶುಕ್ರವಾರ ನಮಾಜ್ ವೇಳೆ ಬಂದ್ ಮಾಡಲಾಗುತ್ತದೆ. ಇದರಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ" ಎಂದು ಬಿಜೆಪಿ ಯುವ ಮೋರ್ಚಾ ತಿಳಿಸಿದೆ.
ಪಶ್ಚಿಮ ಬಂಗಾಳದಲ್ಲಿ ವೈದ್ಯರ ಪ್ರತಿಭಟನೆಯ ದಿನಗಳ ನಂತರ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಬೇಡಿಕೆಗಳಿಗೆ ಒಪ್ಪಿಕೊಂಡು ವೈದ್ಯರನ್ನು ಕೆಲಸಕ್ಕೆ ಮರಳುವಂತೆ ಮನವಿ ಮಾಡಿಕೊಂಡಿದ್ದಾರೆ'ಸಾವಿರಾರು ಜನರು ವೈದ್ಯಕೀಯ ಚಿಕಿತ್ಸೆಗಾಗಿ ಕಾಯುತ್ತಿದ್ದಾರೆ ಆದ್ದರಿಂದ ಎಲ್ಲ ವೈದ್ಯರು ಕೆಲಸಕ್ಕೆ ಮರಳಬೇಕೆಂದು ಮನವಿ ಮಾಡುತ್ತೇನೆ' ಎಂದು ಮಮತಾ ಹೇಳಿದರು.
ರಾಜ್ಯಪಾಲರ ನಿರ್ಧಾರವನ್ನು ಸ್ವಾಗತಿಸಿರುವ ಪಶ್ಚಿಮ ಬಂಗಾಳ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್, ಈ ಕೆಲಸವನ್ನು ರಾಜ್ಯ ಸರ್ಕಾರ ಮೊದಲೇ ಮಾಡಬೇಕಿತ್ತು. ಈ ಜವಾಬ್ದಾರಿಯನ್ನು ರಾಜ್ಯ ಸರ್ಕಾರ ನಿಭಾಯಿಸಬೇಕಿತ್ತು ಎಂದು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.