ನ್ಯಾಯಮೂರ್ತಿ ಆರ್.ಬಾನುಮತಿ, ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಮತ್ತು ನ್ಯಾಯಮೂರ್ತಿ ಹೃಷಿಕೇಶ ರಾಯ್ ಅವರಿದ್ದ ತ್ರಿಸದಸ್ಯ ಪೀಠ ಜಾಮೀನು ನೀಡಿ ಆದೇಶ ಹೊರಡಿಸಿದ್ದು, 1 ಲಕ್ಷ ರೂ.ಗಳ ವೈಯಕ್ತಿಕ ಬಾಂಡ್ ಮತ್ತು ಪ್ರತಿ ವಿಚಾರಣೆಗೆ ಖುದ್ದಾಗಿ ಹಾಜರಾಗುವಂತೆ ಷರತ್ತು ವಿಧಿಸಿದೆ.
ಮಾಜಿ ಹಣಕಾಸು ಸಚಿವ ಮತ್ತು ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ, ಅವರ ಪುತ್ರ ಕಾರ್ತಿ, ಪೀಟರ್ ಮುಖರ್ಜಿಯಾ, ಇಂದ್ರಾಣಿ ಮುಖರ್ಜಿಯಾ ಮತ್ತು ಇತರ 10 ಆರೋಪಿಗಳ ವಿರುದ್ಧ ಸಿಬಿಐ ಶುಕ್ರವಾರ ಚಾರ್ಜ್ ಶೀಟ್ ಸಲ್ಲಿಸಿದೆ.
ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರ ಜಾಮೀನು ಅರ್ಜಿ, ಪಿಎಂಸಿ ಬ್ಯಾಂಕಿನಲ್ಲಿ ಹಣ ವಿತ್ ಡ್ರಾ ನಿಷೇಧ, ಅಸ್ಸಾಂನಲ್ಲಿ ಎನ್ಆರ್ ಸಿ ಜಾರಿ, ಸಂತ ರವಿದಾಸ್ ದೇವಾಲಯ ನೆಲಸಮ ಸೇರಿದಂತೆ ನಾಲ್ಕು ಪ್ರಮುಖ ಪ್ರಕರಣಗಳನ್ನು ಶುಕ್ರವಾರ ಸುಪ್ರೀಂಕೋರ್ಟ್ ವಿಚಾರಣೆ ನಡೆಸಲಿದೆ.
ಪಿ.ಚಿದಂಬರಂ ಮತ್ತು ಪುತ್ರ ಕಾರ್ತಿ ಚಿದಂಬರಂಗೆ ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ನ್ಯಾಯಾಲಯ ಸೆ.5ರಂದು ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಇದೀಗ ಜಾಮೀನು ರದ್ಧತಿ ಕೋರಿ ಜಾರಿ ನಿರ್ದೇಶನಾಲಯ ಗುರುವಾರ ಅರ್ಜಿ ಸಲ್ಲಿಸಿದೆ.
ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರ ನ್ಯಾಯಾಂಗ ಬಂಧನವನ್ನು ಅಕ್ಟೋಬರ್ 17 ರವರೆಗೆ ದೆಹಲಿ ನ್ಯಾಯಾಲಯ ವಿಸ್ತರಿಸಿದೆ, ಇದನ್ನುಸಿಬಿಐ ತನಿಖೆ ನಡೆಸುತ್ತಿದ್ದು. ಅವರ ನ್ಯಾಯಾಂಗ ಬಂಧನವನ್ನು ವಿಸ್ತರಿಸಲು ಅದು ಅರ್ಜಿ ಸಲ್ಲಿಸಿತ್ತು.
ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ದಾಖಲಾಗಿದ್ದ ದೆಹಲಿಯ ತಿಹಾರ್ ಜೈಲಿನಲ್ಲಿ ಮನೆಯಲ್ಲಿ ಬೇಯಿಸಿದ ಆಹಾರಬೇಕೆಂದು ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ದೆಹಲಿ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಆರೋಗ್ಯದ ಕಾರಣದಿಂದಾಗಿ ಅವರು ಈ ಮನವಿಯನ್ನು ಕೋರ್ಟ್ ಗೆ ಮಾಡಿದ್ದಾರೆ ಎಂದು ಮೂಲಗಳು ಹೇಳಿವೆ.
ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರು ಬಿಡುಗಡೆಯಾದರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಎಂದು ದೆಹಲಿ ಹೈಕೋರ್ಟ್ ಇಂದು ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದೆ. ಈ ಪ್ರಕರಣದಲ್ಲಿ ಸಿಬಿಐ ಅವರನ್ನು ವಿಚಾರಣೆ ಮುಗಿಸಿದ ನಂತರ ಚಿದಂಬರಂ ಸೆಪ್ಟೆಂಬರ್ 5 ರಿಂದ ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ.
ಐಎನ್ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಹಾರ್ ಜೈಲಿನಲ್ಲಿ ದಾಖಲಾದ ಹಿರಿಯ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಅವರು, ತಮಿಳು ಜನರು ಒಗ್ಗೂಡಿ ಒಂದೇ ಧ್ವನಿಯಲ್ಲಿ ಮಾತನಾಡಿದರೆ, ಎಲ್ಲರೂ ತಮ್ಮ ಭಾಷೆ ಮತ್ತು ಸಂಸ್ಕೃತಿಯ ಶ್ರೇಷ್ಠತೆಯನ್ನು ಅಂಗೀಕರಿಸುತ್ತಾರೆ ಎಂದು ಹೇಳಿದರು.
ಹೂಸ್ಟನ್ ನಲ್ಲಿ ನಡೆದ ಹೌಡಿ ಮೋದಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಭಾರತದಲ್ಲಿ ಎಲ್ಲವು ಚೆನ್ನಾಗಿದೆ ಎಂದು ಹೇಳಿದ್ದರು. ವಿಶೇಷವೆಂದರೆ ಭಾರತ ಮೇ ಸಬ್ ಅಚ್ಚಾ ಹೈ ಎನ್ನುವ ಹೇಳಿಕೆಯನ್ನು ಅವರು ಎಂಟು ಭಾಷೆಗಳಲ್ಲಿ ಹೇಳಿದ್ದರು.
ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಸೆಪ್ಟೆಂಬರ್ 5 ರಿಂದ ತಮಗೆ ತಿಹಾರ್ ಜೈಲಿನಲ್ಲಿ ಅವರಿಗೆ ಕುರ್ಚಿ, ದಿಂಬು ಇಲ್ಲ ಇದರಿಂದಾಗಿ ತಮಗೆ ಬೆನ್ನು ನೋವು ಬಂದಿದೆ ಎಂದು ಕೋರ್ಟ್ಗೆ ದೂರು ನೀಡಿದ್ದಾರೆ.
"ಈ ಬಾರಿಯ ಹುಟ್ಟುಹಬ್ಬ ಎಂದಿನಂತಿಲ್ಲ. ನಾವು ನಿಮ್ಮನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇವೆ. ನಮ್ಮೊಂದಿಗೆ ಕೇಕ್ ಕತ್ತರಿಸಲು ನೀವು ಮನೆಗ್ ಬರಬೇಕು ಎಂದು ನಾವು ಆಶಿಸುತ್ತೇವೆ" ಎಂದು ಕಾರ್ತಿ ತನ್ನ ತಂದೆಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.
ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರು ತಮ್ಮ ತಿಹಾರ್ ಜೈಲುವಾಸವನ್ನು ಕೊನೆಗೊಳಿಸಲು ಕಾನೂನು ಹೋರಾಟ ಮಾಡಿದರೂ ಜಾಮೀನು ಪಡೆಯಲು ವಿಫಲರಾಗಿದ್ದಾರೆ. ಈ ಹಿನ್ನಲೆಯಲ್ಲಿ ಅವರು ಈಗ ಸೋಮವಾರದಂದು ತಿಹಾರ ಜೈಲಿನಲ್ಲೇ 74 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.
ಸುಮಾರು 600 ರಿಂದ 700 ಕೈದಿಗಳನ್ನು ಹೊಂದಿರುವ ತಿಹಾರ್ನ ಜೈಲಿನ ಸಂಖ್ಯೆ 7ರ 2ನೇ ವಾರ್ಡಿನ 15ನೇ ಸೆಲ್ನಲ್ಲಿ ಚಿದಂಬರಂ ಅವರನ್ನು ಇರಿಸಲಾಗಿದೆ. ಈ ಹಿಂದೆ ಚಿದು ಪುತ್ರ ಕಾರ್ತಿ ಚಿದಂಬರಂ ಅವರನ್ನೂ ಸಹ ಇದೇ ಜೈಲಿನಲ್ಲಿರಿಸಲಾಗಿತ್ತು.
ಪಿ.ಚಿದಂಬರಂ ಮತ್ತು ಅವರ ಪುತ್ರ ಕಾರ್ತಿ ಚಿದಂಬರಂ ಅವರಿಗೆ 1 ಲಕ್ಷ ರೂ.ಗಳ ವೈಯಕ್ತಿಕ ಬಾಂಡ್ ಮತ್ತು ತಲಾ 1 ಲಕ್ಷ ಮೊತ್ತದ ಶ್ಯೂರಿಟಿಯೊಂದಿಗೆ ನ್ಷಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ.
ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಪಿ ಚಿದಂಬರಂ ಮತ್ತು ಅವರ ಪುತ್ರ ಕಾರ್ತಿ ಅವರ ಪಾತ್ರವನ್ನು ಬಹಿರಂಗಪಡಿಸಿದ ಇಂದ್ರಾಣಿ ಮುಖರ್ಜಿಯಾ ಮಾಜಿ ಕೇಂದ್ರ ಸಚಿವರ ಬಂಧನದಿಂದ ತಮಗೆ ಸಂತೋಷವಾಗಿದೆ ಎಂದು ಹೇಳಿದ್ದಾರೆಂದು ಮಾಧ್ಯಮಗಳು ವರದಿ ಮಾಡಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.