ಉಭಯ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಬಾಂಧವ್ಯವನ್ನು ಹೆಚ್ಚಿಸುವ ಪ್ರಧಾನಿ ಮೋದಿ ಪ್ರಯತ್ನಕ್ಕೆ ಯುಎಇಯ ಅತ್ಯುನ್ನತ ನಾಗರಿಕ ಪ್ರಶಸ್ತಿ 'ಆರ್ಡರ್ ಆಫ್ ಜಾಯೆದ್' ನ್ನು ನೀಡಿ ಗೌರವಿಸಲಾಯಿತು.ಈ ಹಿಂದೆ ಈ ಪ್ರಶಸ್ತಿಯನ್ನು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ರಾಣಿ ಎಲಿಜಬೆತ್ II ಮತ್ತು ಚೀನಾದ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಸೇರಿದಂತೆ ಹಲವಾರು ವಿಶ್ವ ನಾಯಕರಿಗೆ ನೀಡಲಾಗಿದೆ.
ಮಾಜಿ ಹಣಕಾಸು ಸಚಿವ ಹಾಗೂ ಹಿರಿಯ ಬಿಜೆಪಿ ನಾಯಕ ಅರುಣ್ ಜೈಟ್ಲಿ ಶನಿವಾರದಂದು ಮೃತಪಟ್ಟಿರುವುದರಿಂದ ಸದ್ಯ ವಿದೇಶದಲ್ಲಿರುವ ಪ್ರಧಾನಿ ಮೋದಿಗೆ ಪ್ರವಾಸವನ್ನು ರದ್ದುಗೊಳಿಸಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಫೆಬ್ರವರಿಯಲ್ಲಿ ನಡೆದ ಬಾಲಕೋಟ್ ವೈಮಾನಿಕ ದಾಳಿಯ ನಂತರ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಪಾಕ್ ವಾಯುಪ್ರದೇಶದ ಮೂಲಕ ದ್ವಿಪಕ್ಷೀಯ ಸಭೆಗಾಗಿ ಫ್ರಾನ್ಸ್ಗೆ ಪ್ರಯಾಣ ಬೆಳೆಸಿದರು.
ಡಿಜಿಟಲ್ ಇಂಡಿಯಾವನ್ನು "ಜನರ ಚಳುವಳಿ" ಎಂದು ಕರೆದ ಪ್ರಧಾನಿ ನರೇಂದ್ರ ಮೋದಿ, ಇದು ಜನರಿಗೆ ಅಧಿಕಾರ ನೀಡಿದೆ, ಭ್ರಷ್ಟಾಚಾರವನ್ನು ಗಮನಾರ್ಹವಾಗಿ ಕಡಿಮೆ ಮಾಡಿದೆ ಮತ್ತು ಬಡವರಿಗೆ ಅನುಕೂಲವಾಗುವಂತೆ ಸಾರ್ವಜನಿಕ ಸೇವಾ ವಿತರಣೆಯನ್ನು ಸುಧಾರಿಸಿದೆ ಎಂದು ಹೇಳಿದರು.
ಬುಧವಾರದಂದು ರಾಜ್ಯಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣಕ್ಕೆ ಧನ್ಯವಾದಗಳನ್ನು ಅರ್ಪಿಸಿ ಮಾತನಾಡಿದ ಪ್ರಧಾನಿ ಮೋದಿ ಚುನಾವಣೆಯಲ್ಲಿ ಇವಿಎಂಗಳನ್ನು ದೂರುವ ಬದಲು ಚುನಾವಣಾ ಪ್ರಕ್ರಿಯೆಯಲ್ಲಿನ ಸುಧಾರಣೆಗೆ ಮೆಚ್ಚುಗೆ ವ್ಯಕ್ತಪಡಿಸಬೇಕು ಎಂದು ಹೇಳಿದರು.
ದೇಶದ ನಿಧಾನಗತಿಯ ಆರ್ಥಿಕ ಬೆಳವಣಿಗೆಯ ಕುಸಿತದ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಲ್ಲಿ 40ಕ್ಕೂ ಅಧಿಕ ಅರ್ಥಶಾಸ್ತ್ರಜ್ಞರು ಮತ್ತು ಇತರ ತಜ್ಞರನ್ನು ಭೇಟಿ ಮಾಡಿ ಸಭೆ ನಡೆಸಿದರು.
ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಅಧ್ಯಕ್ಷ ಮೈಥಿಪ್ರಲಾ ಸಿರಿಸೇನೊಂದಿಗೆ ದ್ವೀಪಕ್ಷಿಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ಕೊಲೊಂಬೋದ ಅಧ್ಯಕ್ಷೀಯ ಕಚೇರಿ ತಿಳಿಸಿದೆ.
ಮೋದಿ ಅವರ ಕ್ಯಾಬಿನೆಟ್ನಲ್ಲಿ, ಉತ್ತರಪ್ರದೇಶದ 10 ಸಂಸದರು ಸೇರ್ಪಡೆಗೊಂಡಿದ್ದಾರೆ. ಇದರ ನಂತರ ಮಹಾರಾಷ್ಟ್ರದ ಏಳು ಮತ್ತು ಬಿಹಾರದ ಆರು ಪ್ರತಿನಿಧಿಗಳು ಹೊಸ ಕ್ಯಾಬಿನೆಟ್ನಲ್ಲಿ ಸ್ಥಾನ ಪಡೆದಿದ್ದಾರೆ.
ಗುರುವಾರದಂದು ಪ್ರಧಾನಿ ಮೋದಿ ಪ್ರಮಾಣವಚನ ಸ್ವೀಕರಿಸುತ್ತಿರುವ ಹಿನ್ನಲೆಯಲ್ಲಿ ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿರುವ ಚಾಯ್ ವಾಲಾ ಜನರಿಗೆ ಉಚಿತವಾಗಿ ಚಹಾ ವಿತರಿಸಿ ತಮ್ಮ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.
ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪರಸ್ಪರ ಟೀಕಾಪ್ರಹಾರ ನಡೆಸಿದ್ದ ಮೋದಿ ಮತ್ತು ಮಮತಾ ಬ್ಯಾನರ್ಜೀ ಈಗ ಅದಕ್ಕೆಲ್ಲ ತಾತ್ಕಾಲಿಕ ವಿರಾಮ ಬಿದ್ದಂತಾಗಿದೆ.ಪ್ರಧಾನಿ ಮೋದಿ ಈಗ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜೀಯವರನ್ನು ತಮ್ಮ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ್ದಾರೆ. ಇದಕ್ಕೆ ಅವರು ಒಪ್ಪಿಗೆ ನೀಡಿ ಬರುವದಾಗಿ ಹೇಳಿದ್ದಾರೆ.
ಖಾಸಗಿ ಚಾನಲ್ ಗೆ ನೀಡಿರುವ ಸಂದರ್ಶನದಲ್ಲಿ ಪ್ರಧಾನಿ ಮೋದಿ 1987-88ರಲ್ಲಿ ಡಿಜಿಟಲ್ ಕ್ಯಾಮೆರಾ ಮೂಲಕ ಹಿರಿಯ ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾಣಿಯವರ ಫೋಟೋವೊಂದನ್ನು ತೆಗೆದು ಅದನ್ನು ಇ-ಮೇಲ್ ಮೂಲಕ ಕಳಿಸಿರುವುದಾಗಿ ಮೋದಿ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.