ಹರ್ಯಾಣ ದಲ್ಲಿ ವಿಧಾನಸಭೆ ಚುನಾವಣೆ ಇರುವ ಹಿನ್ನಲೆಯಲ್ಲಿ ಕಾಂಗ್ರೆಸ್ ಮತ್ತು ಬಿಎಸ್ಪಿ ಮೈತ್ರಿಗೆ ಮುಂದಾಗಿವೆ. ಅಕ್ಟೋಬರ್ ತಿಂಗಳಲ್ಲಿ ಚುನಾವಣೆ ಇರುವ ಹಿನ್ನಲೆಯಲ್ಲಿ ಕಾಂಗ್ರೆಸ್ ಈಗ ಬಿಎಸ್ಪಿ ಜೊತೆ ಮೈತ್ರಿ ಮಾಡಿಕೊಳ್ಳುವ ವಿಚಾರವಾಗಿ ಈಗ ಊಹಾಪೋಹಗಳು ಕೇಳಿ ಬಂದಿವೆ.
ಸೋಮವಾರದಂದು ನಡೆಯುವ ವಿಶ್ವಾಸಮತಯಾಚನೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ರಾಜ್ಯದಲ್ಲಿನ ಏಕೈಕ ಬಿಎಸ್ಪಿ ಶಾಸಕ ಎನ್.ಮಹೇಶ್ ಹೇಳಿದ್ದಾರೆ. ಇದರಿಂದಾಗಿ ಸಮ್ಮಿಶ್ರ ಸರ್ಕಾರ ಈಗ ತೀವ್ರ ಸಂಕಷ್ಟಕ್ಕೆ ಸಿಲುಕಿದೆ.
ಲೋಕಸಭಾ ಚುನಾವಣೆಯಲ್ಲಿ ಪಕ್ಷವು ಅತಿಹೆಚ್ಚು ಮುಸ್ಲಿಂ ಮತಗಳನ್ನು ಪಡೆದುಕೊಂಡಿರುವುದಾಗಿ ಸಭೆಯಲ್ಲಿ ತಿಳಿಸಿದ ಮಾಯಾವತಿ ಅವರು, ಈ ಕಾರಣಕ್ಕಾಗಿ, ಮುಸ್ಲಿಂ ಮತದಾರರನ್ನು ಪಕ್ಷಕ್ಕೆ ಸೆಳೆಯಲು ಪದಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಎಸ್ಪಿ ಅಧಿಕಾರಕ್ಕೆ ಬಂದರೆ ಎನ್.ಮಹೇಶ್ ಅವರನ್ನ ಮುಖ್ಯಮಂತ್ರಿ ಮಾಡುತ್ತೇನೆ ಎಂದು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಹೇಳಿದರು.
ಉತ್ತರಪ್ರದೇಶದಲ್ಲಿ ಈಗಾಗಲೇ ಎಸ್ಪಿ-ಬಿಎಸ್ಪಿ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದು, ಸೀಟು ಹಂಚಿಕೆ ಮಾಡಿಕೊಂಡಿವೆ. ಈ ಪ್ರಕಾರ ಉತ್ತರಪ್ರದೇಶದ 80 ಲೋಕಸಭಾ ಸ್ಥಾನಗಳಲ್ಲಿ ಬಿಎಸ್ಪಿ 38, ಎಸ್ಪಿ 37 ಸ್ಥಾನಗಳನ್ನು ಹಂಚಿಕೊಂಡಿದ್ದು, ಮಥುರಾ, ಮುಜಾಫರ್ ಪುರ ಹಾಗೂ ಬಾಗಪತ್ ಕ್ಷೇತ್ರಗಳನ್ನು ಆರ್ ಎಲ್ ಡಿ ಪಕ್ಷಕ್ಕೆ ಬಿಟ್ಟುಕೊಟ್ಟಿವೆ.
ಲೋಕಸಭಾ ಚುನಾವಣೆಗೂ ಮುನ್ನ ಮೈತ್ರಿ ಘೋಷಣೆ ಮಾಡಿಕೊಂಡಿರುವ ಎಸ್ಪಿ ಮತ್ತು ಬಿಎಸ್ಪಿ ಪಕ್ಷಗಳು ಈ ಬಾರಿ ಸಾರ್ವತ್ರಿಕ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ನೀಡುವ ವಿಶ್ವಾಸ ವ್ಯಕ್ತಪಡಿಸಿವೆ.
ಅಖಿಲೇಶ್ ಯಾದವ್ ಮತ್ತು ಮಾಯಾವತಿ ಉತ್ತರಪ್ರದೇಶದ ಲಕ್ನೋದಲ್ಲಿರುವ ಪಂಚತಾರಾ ಹೋಟೆಲ್ ವೊಂದರಲ್ಲಿನ ನಾಳೆ ಪತ್ರಿಕಾಗೋಷ್ಠಿ ನಡೆಸಿ ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿನ ಮೈತ್ರಿ ವಿಚಾರವಾಗಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.
ಮೇಲ್ಜಾತಿಯ ಆರ್ಥಿವಾಗಿ ಹಿಂದುಳಿದವರಿಗೆ ಶೇ.10 ಮೀಸಲಾತಿ ಘೋಷಿಸಿದ ಬೆನ್ನಲ್ಲೇ, ಉನ್ನತ ಶಿಕ್ಷಣ ಸಂಸ್ಥೆಗಳ ಸೀಟುಗಳನ್ನು ಶೇ.10ರಷ್ಟು ಹೆಚ್ಚಿಸಲಾಗುವುದು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಕೇಂದ್ರ ಮತ್ತು ಹಲವು ರಾಜ್ಯಗಳಲ್ಲಿರುವ ಬಿಜೆಪಿ ಸರ್ಕಾರಗಳು ವಿವಿಧ ತಂತ್ರಗಳ ಮೂಲಕ ತಮ್ಮ ವೈಪಲ್ಯವನ್ನು ಮರೆಮಾಚಲು ಯತ್ನಿಸುತ್ತಿವೆ ಎಂದು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಬಿಜೆಪಿ ವಿರುದ್ಧ ಕಿಡಿ ಕಾರಿದರು.ಅಲ್ಲದೆ ರಾಜಕೀಯ ಲಾಭಕ್ಕಾಗಿ ವಾಜಪೇಯಿಯವರ ಸಾವನ್ನು ಬಿಜೆಪಿ ಬಳಸಿಕೊಳ್ಳುತ್ತಿದೆ ಎಂದು ಟೀಕಿಸಿದರು.
ಕಾಂಗ್ರೆಸ್ ಹಿಡಿತದಲ್ಲಿರುವ ಕ್ಷೇತ್ರಗಳಲ್ಲಿ ಬಿಎಸ್ಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಜೆಡಿಎಸ್ ತಂತ್ರ ರೂಪಿಸಿದೆ. ದಲಿತರ ಪಕ್ಷ ಎಂದೇ ಹೆಸರಾಗಿರುವ ಬಿಎಸ್ಪಿ ಅಭ್ಯರ್ಥಿಗಳಿರುವಲ್ಲಿ ಕಾಂಗ್ರೆಸ್'ಗೆ ಹಿನ್ನಡೆಯಾಗುವ ಸಾಧ್ಯತೆ ಇದೆ.
ಗೋರಖ್ಪುರ್ ಮತ್ತು ಫುಲ್ಪುರ್ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ಮೊದಲ ಬಾರಿಗೆ ಝೀ ನ್ಯೂಸ್ ಕಾಂಕ್ಲವೇ ಜೊತೆ ಮಾತನಾಡಿದ ಅಖಿಲೇಶ್ ಯಾದವ್ ತಮ್ಮ ಮತ್ತು ಬಹುಜನ ಪಕ್ಷದ ಮೈತ್ರಿಕೂಟವನ್ನು ಮುರಿಯಲು ಸಾದ್ಯವಿಲ್ಲ ಎಂದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.