ಓಡಿಸ್ಸಾದ ಬೆರ್ಹಾಂಪುರದ ಬಿಜು ಜನತಾದಳದ ಸಂಸದ ಚಂದ್ರಶೇಖರ್ ಸಾಹು ಅವರು ಪಕ್ಷದ ಕಾರ್ಯಕರ್ತರೊಬ್ಬರಿಗೆ ಕಪಾಳಮೋಕ್ಷ ಮಾಡುತ್ತಿರುವ ದೃಶ್ಯ ಈಗ ಕ್ಯಾಮರಾದಲ್ಲಿ ಸೆರೆಯಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ವೈರಲ್ ಆಗಿರುವ ಈ ವಿಡಿಯೋ ಈಗ ವಿವಾದ ಸೃಷ್ಟಿಸಿದೆ.
ನಾಲ್ಕನೇ ಹಂತದ ಮತದಾನ ಬಿರುಸಿನಿಂದ ಸಾಗಿದ ಬೆನ್ನಲ್ಲೇ ನವೀನ್ ಪಟ್ನಾಯಕ್ ನೇತೃತ್ವದ ಬಿಜು ಜನತಾದಳ(ಬಿಜೆಡಿ) ಈಗ ಬಿಜೆಪಿ ಮತಗಟ್ಟೆ ಕೇಂದ್ರವನ್ನು ವಶಪಡಿಸಿಕೊಂಡಿದೆ ಎಂದು ಆರೋಪಿಸಿ ಒಡಿಸ್ಸಾದ ಮುಖ್ಯ ಚುನಾವಣಾ ಅಧಿಕಾರಿಗೆ ದೂರು ನೀಡಿದೆ.
ಯಾವುದೇ ಕಾರಣಕ್ಕೂ ಬಿಜೆಡಿ ಮಹಾಘಟಬಂಧನ್ ಗೆ ಸೇರುವುದಿಲ್ಲ. ನಮ್ಮ ಪಕ್ಷದ ತತ್ವ ಮತ್ತು ಸಿದ್ಧಾಂತಗಳಿಗೆ ನಾವು ಬದ್ಧರಾಗಿದ್ದು, ಪಕ್ಷವು ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳಿಂದ ಸಮಾನ ಅಂತರ ಕಾಯ್ದುಕೊಳ್ಳಲಿದೆ ಎಂದು ನವೀನ್ ಪಟ್ನಾಯಕ್ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.