ಪಾಕಿಸ್ತಾನದ ಬಾಲಕೋಟ್ ನ ಉಗ್ರರ ನೆಲೆಯ ಮೇಲೆ ಭಾರತೀಯ ವಾಯುಸೇನೆ ದಾಳಿ ಹತ್ಯೆಯಾಗಿರುವ ಉಗ್ರರ ಸಂಖ್ಯೆ ವಿಚಾರ ಈಗ ಸಾಕಷ್ಟು ಗೊಂದಲಕ್ಕೆ ಕಾರಣವಾಗಿದೆ. ಒಂದು ಕಡೆ ಕೇಂದ್ರ ಸಚಿವ ಎಸ್.ಎಸ್. ಅಹ್ಲುವಾಲಿಯಾ ವಾಯುಸೇನೆ ದಾಳಿಯಲ್ಲಿ ಯಾವುದೇ ರೀತಿಯ ಹಾನಿಯಾಗಿಲ್ಲ ಎಂದು ಹೇಳಿದ್ದರು ಇದಾದ ಬೆನ್ನಲ್ಲೇ ಅಮಿತ್ ಷಾ ಗುಜಾರಾತಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಾ ಸುಮಾರು 250 ಕ್ಕೂ ಅಧಿಕ ಉಗ್ರರು ವಾಯುಸೇನೆಯ ದಾಳಿಯಲ್ಲಿ ಹತ್ಯೆಯಾಗಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.
ಪಾಕಿಸ್ತಾನದ ಬಾಲಕೋಟ್ ನ ಉಗ್ರರ ನೆಲೆಯ ಮೇಲೆ ಭಾರತೀಯ ವಾಯುಸೇನೆ ದಾಳಿ ಮಾಡಿದ್ದಕ್ಕೆ 250 ಕ್ಕೂ ಅಧಿಕ ಉಗ್ರರು ಹತ್ಯೆಯಾಗಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಷಾ ಹೇಳಿದ್ದಾರೆ. ಅವರ ಹೇಳಿಕೆಯೂ ಕೇಂದ್ರ ಸಚಿವ ಎಸ್.ಎಸ್. ಅಹ್ಲುವಾಲಿಯಾ ಅವರ ಹೇಳಿಕೆಯ ನಂತರ ಬಂದಿದೆ.
ರಾವಲ್ಪಿಂಡಿ ಜೈಶ್ ಎ ಮೊಹಮ್ಮದ್ ಮುಖ್ಯಸ್ಥ ಅಜ್ಹರ್ ತವರು ಜಿಲ್ಲೆಯಾಗಿದ್ದು, ಅಜ್ಹರ್ ಪ್ರಸ್ತುತ ರಾವಲ್ಪಿಂಡಿಯ ಮಿಲಿಟರಿ ಆಸ್ಪತ್ರೆಯೊಳಗೆ ರಕ್ಷಣೆ ಪಡೆಯುತ್ತಿದ್ದಾನೆ ಎಂದು ನಂಬಲಾಗಿದೆ.
ಪಾಕಿಸ್ತಾನದ ಮೇಲೆ ಭಾರತೀಯ ವಾಯುಪಡೆ ದಾಳಿ: ಭಾರತೀಯ ವಾಯುಪಡೆಯ ಯುದ್ಧ ವಿಮಾನ ಮಿರಾಜ್ 2000 ಉಗ್ರಗಾಮಿ ಶಿಬಿರವನ್ನು ಗುರಿಯಾಗಿರಿಸಿ ಬಾಲಾಕೋಟ್, ಮುಜಫರಾಬಾದ್ ಮತ್ತು ಚಕೋಟಿಗಳಲ್ಲಿ ಬಾಂಬ್ ದಾಳಿ ನಡೆಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.