Manglore University : ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಬಿ.ವಿ.ಕಕ್ಕಿಲ್ಲಾಯ ಪ್ರತಿಷ್ಠಾನದಿಂದ ಇಂದು ಆಯೋಜಿಸಲ್ಪಟ್ಟ ಉಪನ್ಯಾಸ ಕಾರ್ಯಕ್ರಮಕ್ಕೆ ಎಬಿವಿಪಿ ವಿರೋಧ ವ್ಯಕ್ತಪಡಿಸಿದ ಘಟನೆ ನಡೆಯಿತು.
ಸಂತ್ರಸ್ತ ಯುವಕನನ್ನು ಬಂಟ್ವಾಳ ತಾಲೂಕಿನ ಮಂಜುನಾಥ್ ಎಂದು ಗುರುತಿಸಲಾಗಿದ್ದು, ಹಲ್ಲೆ ಸಂಬಂಧ ಆತ ಪಂದೇಶ್ವರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ. ಈ ಸಂಬಂಧ ಮೊಯಿದೀನ್ ಸಫ್ವಾನ್, ಅಬ್ದುಲ್ ರಹೀಮ್ ಸಾದ್ ಮತ್ತು ಓರ್ವ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ.
ಶಾಂತಿ, ಅಹಿಂಸೆ ಮತ್ತು ಕೋಮು ಸೌಹಾರ್ದತೆಯ ಸಂದೇಶವನ್ನು ಸಾರುವ ಉದ್ದೇಶದಿಂದ ಮಂಗಳೂರಿನ ಗರೋಡಿ ಪ್ರದೇಶದ ದೇವಾಲಯವೊಂದರಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆಗೆ ಪ್ರಾರ್ಥನೆ ಸಲ್ಲಿಸುತ್ತಾರೆ.
ಚಾರ್ಮಾಡಿ ಘಾಟಿಯಲ್ಲಿ ಐದು ಜೆಸಿಬಿ ಹಾಗೂ ಹಿಟಾಚಿಗಳಿಂದ ಮಣ್ಣು ತೆರವುಗೊಳಿಸುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ಗುರುವಾರ ಮಳೆ ಕಡಿಮೆಯಾಗಿದ್ದರಿಂದ ಕಾಮಗಾರಿ ವೇಗ ಪಡೆದಿದ್ದು, ಕೆಲ ಪ್ರದೇಶಗಳಲ್ಲಿ ಮಣ್ಣು ತೆಗೆಯುವ ಸಂದರ್ಭ ಮತ್ತೆ ಕುಸಿತವಾಗುತ್ತಿದೆ.
ಆತನ ಮನದೊಳಗಿದ್ದ ಆ ಸತ್ಯಗಳೆಲ್ಲಾ ಹೊರಕ್ಕೆ ಬರಬೇಕು, ಆತನ ಈ ಅಕಾಲಿಕ ಸಾವಿಗೆ ಕಾರಣಗಳ ಕಂಡು ಹಿಡಿಯಲೇ ಬೇಕು. ಯಾವ ವ್ಯಕ್ತಿಗಳಿಂದ, ಸಂಘಗಳಿಂದ, ಸಂಸ್ಥೆಗಳಿಂದ, ಇಲಾಖೆಗಳಿಂದ ಆತ ನೊಂದಿದ್ದ, ಆತ ಈ ನಿರ್ಧಾರ ತಳೆದಿದ್ದ ಎಂಬ ಸತ್ಯ ಹೊರ ಬರಬೇಕಾಗಿದೆ- ಬಳ್ಳಾರಿ ಐಜಿಪಿ ಎಂ. ನಂಜುಂಡಸ್ವಾಮಿ
ವಿ.ಜಿ.ಸಿದ್ಧಾರ್ಥ ಅವರ ಸಾವಿಗೆ ಐಟಿ ಇಲಾಖೆಯ ಕಿರುಕುಳ ಕಾರಣವಾಗಿರಬಹುದೆಂಬ ಸಂಶಯ ಹುಟ್ಟಿಸುವಂತಿದೆ ಅವರು ಕೊನೆಯಲ್ಲಿ ಬರೆದಿರುವ ಪತ್ರದಲ್ಲಿನ ವಿವರಗಳು. ಕಳೆದ ಐದು ವರ್ಷಗಳಲ್ಲಿ ಐಟಿ ಇಲಾಖೆಯ ಕಾರ್ಯನಿರ್ವಹಣೆ ಈ ಸಂಶಯವನ್ನು ಇನ್ನಷ್ಟು ಪುಷ್ಠೀಕರಿಸುತ್ತದೆ- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಪ್ರಸಿದ್ಧ ಕಾಫಿ ಸಂಸ್ಥೆಯ ಮಾಲೀಕ(CCD Owner) ಮತ್ತು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಳಿಯ ವಿ.ಜಿ. ಸಿದ್ಧಾರ್ಥ್ ಸೋಮವಾರ ಸಂಜೆಯಿಂದ ಕಾಣೆಯಾಗಿದ್ದಾರೆ. ಅವರ ಹಠಾತ್ ಕಣ್ಮರೆಯಿಂದ ಇಡೀ ಕುಟುಂಬದಲ್ಲಿ ನೀರವ ಮೌನ ಆವರಿಸಿದೆ.
ಭಯೋತ್ಪಾದನೆಯನ್ನು ಬೆಂಬಲಿಸುತ್ತಿರುವ ನೆರೆಯ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆಯನ್ನು ರವಾನಿಸಿದ್ದೇವೆ. ನಮ್ಮ ಸೈನಿಕರು ಮತ್ತು ವಾಯು ಸೇನೆಯ ಪೈಲಟ್ ಗಳು ಧೈರ್ಯವಾಗಿ ಉಗ್ರರನ್ನು ಹೊಡೆದುರುಳಿಸುತ್ತಿದ್ದಾರೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಮಂಗಳೂರಿನ ಕೇಂದ್ರ ಮೈದಾನದಲ್ಲಿ ಶನಿವಾರ ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಬಿಜೆಪಿ ಕ್ಲಸ್ಟರ್ ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಭಾಗವಹಿಸಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.