ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮಧ್ಯಂತರ ಬಜೆಟ್ ಮಂಡಿಸುತ್ತಿರುವ ವಿತ್ತ ಸಚಿವ ಪಿಯೂಷ್ ಗೋಯಲ್ ಪಿಂಚಣಿದಾರರಿಗಾಗಿ 'ಪ್ರಧಾನ ಮಂತ್ರಿ ಶ್ರಮ ಯೋಗಿ ಮಂಧನ್' ಎಂಬ ಬೃಹತ್ ಯೋಜನೆಯನ್ನು ಘೋಷಿಸಿದರು.
ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಮಂಡಿಸಲಾಗುತ್ತಿರುವ ಮಧ್ಯಂತರ ಬಜೆಟ್ ನಲ್ಲಿ ವಿವಿಧ ವಲಯಗಳಿಗೆ ದೊಡ್ಡ ಘೋಷಣೆ ಮಾಡುವ ಸಾಧ್ಯತೆಯಿದೆ- ಇವುಗಳಲ್ಲಿ ಕೃಷಿ, ಬ್ಯಾಂಕಿಂಗ್, ರಿಯಲ್ ಎಸ್ಟೇಟ್ ಮತ್ತು ರೈಲ್ವೆ ವಲಯಗಳು ಮುಖ್ಯವಾಗಿವೆ.
ಇತ್ತೀಚೆಗಷ್ಟೇ ಹಣಕಾಸು ಇಲಾಖೆಯ ಹೊಣೆಗಾರಿಕೆಯನ್ನು ಹೆಚ್ಚುವರಿಯಾಗಿ ವಹಿಸಿಕೊಂಡಿರುವ ರೈಲ್ವೆ ಸಚಿವ ಪಿಯೂಷ್ ಗೋಯಲ್ ಕೇಂದ್ರ ಸರ್ಕಾರದ ಕಡೆಯ ಬಜೆಟ್ ಅನ್ನು ಶುಕ್ರವಾರ ಮಂಡಿಸಲಿದ್ದಾರೆ.
ವಿತ್ತ ಸಚಿವ ಅರುಣ್ ಜೇಟ್ಲಿ ನ್ಯೂಯಾರ್ಕ್ ಆಸ್ಪತ್ರೆಯೊಂದರಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವುದರಿಂದ ಮಧ್ಯಂತರ ಬಜೆಟ್ಗೆ ಒಂಬತ್ತು ದಿನಗಳ ಮೊದಲು ರೈಲ್ವೇ ಸಚಿವ ಪಿಯೂಷ್ ಗೋಯೆಲ್ ಅವರಿಗೆ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಇಲಾಖೆಯ ಹೆಚ್ಚುವರಿ ಜವಾಬ್ದಾರಿ ವಹಿಸಲಾಗಿದೆ.
ಫೆಬ್ರವರಿ 1 ರಂದು ಕೇಂದ್ರ ಸರ್ಕಾರ ಮಧ್ಯಂತರ ಬಜೆಟ್ ಮಂಡಿಸುತ್ತಿದ್ದು, ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸರ್ಕಾರವು ಫೆಬ್ರವರಿ 1 ರಂದು 4 ತಿಂಗಳ ಮಧ್ಯಂತರ ಬಜೆಟ್ ಮಂಡಿಸಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.