ಎರಡನೇ ಮಹಡಿಯಿಂದ ಕೆಳಗೆ ಬಿದ್ದ ಮಗುವೊಂದು ಅದೃಷ್ಟವಶಾತ್ ರಸ್ತೆಯಲ್ಲಿ ಚಲಿಸುತ್ತಿದ್ದ ರಿಕ್ಷಾ ಸೀಟಿನ ಮೇಲೆ ಬಿದ್ದ ಪರಿಣಾಮ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಧ್ಯಾನ್ ಚಂದ್ರ ಟ್ರೋಫಿಯಲ್ಲಿ ಆಡಲು ಇಟಾರ್ಸಿಯಿಂದ ಹೋಶಂಗಾಬಾದ್ಗೆ ಪ್ರಯಾಣಿಸುತ್ತಿದ್ದ ಹಾಕಿ ಆಟಗಾರರಿದ್ದ ಕಾರು ರಾಷ್ಟ್ರೀಯ ಹೆದ್ದಾರಿ 69ರಲ್ಲಿ ರೈಸಲ್ಪುರ್ ಗ್ರಾಮದ ಬಳಿ ಅಪಘಾತಕ್ಕೀಡಾದ ಕಾರಣ ಈ ದುರ್ಘಟನೆ ಸಂಭವಿಸಿದೆ.
ಚಹಾ ತಯಾರಿಸುವಾಗ, ಮಗ ಗೊತ್ತಿಲ್ಲದೆ ಚಹಾ ಎಲೆಗಳ ಬದಲಿಗೆ, ಚಹಾದ ಎಲೆಗಳಂತೆ ಕಾಣುವ ಕೆಲವು ವಸ್ತುವನ್ನು ಚಹಾದಲ್ಲಿ ಬೆರೆಸಿದ್ದಾನೆ. ತಂದೆ ಮತ್ತು ಮಗ ಇಬ್ಬರೂ ಈ ಚಹಾವನ್ನು ಸೇವಿಸಿದ ಬಳಿಕ ಅವರು ವಾಂತಿ ಮಾಡಲು ಪ್ರಾರಂಭಿಸಿದರು.
ರಾಜಸ್ಥಾನದ ಕೋಟಾ, ಬುಂಡಿ, ಬಾರನ್, ಜ್ಹಾಲಾವರ್ ಮತ್ತು ಚಿತ್ತೋರ್ಗರ್ ಜಿಲ್ಲೆಗಳಲ್ಲಿ ಪ್ರವಾಹದಂತಹ ಪರಿಸ್ಥಿತಿಯನ್ನು ಸೃಷ್ಟಿಯಾಗಿದ್ದು, ಚಂಬಲ್ ನದಿಯಲ್ಲಿ ನೀರಿನ ಮಟ್ಟ ಏರಿಕೆಯಿಂದಾಗಿ ಹಲವು ಗ್ರಾಮಗಳು ಮುಳುಗಡೆಯಾಗಿವೆ.
ಮಧ್ಯಪ್ರದೇಶದ ದಿಂಡೋರಿಯಲ್ಲಿ ವೃತ್ತಿಯಲ್ಲಿ ವಕೀಲನಾಗಿರುವ ವ್ಯಕ್ತಿಯೊಬ್ಬ ಕಳೆದ ನಲವತ್ತು ವರ್ಷಗಳಿಂದ ಗಾಜುಗಳನ್ನು ತಿನ್ನುವ ಹವ್ಯಾಸ ರೂಡಿಸಿಕೊಂಡಿದ್ದಾನೆ. ವೃತ್ತಿಯಲ್ಲಿ ವಕೀಲರಾಗಿರುವ ದಯಾರಾಮ್ ಸಾಹು ಎನ್ನುವ ವ್ಯಕ್ತಿ ಬಾಲ್ಯದಿಂದಲೂ ಗಾಜಿನ ಬಲ್ಬ್ಗಳು, ಮದ್ಯದ ಬಾಟಲಿಗಳು ಮತ್ತು ಇತರ ವಸ್ತುಗಳನ್ನು ತಿನ್ನುವ ರೂಡಿ ಬೆಳೆಸಿಕೊಂಡಿದ್ದಾನೆ.
ಪೂರ್ವ ರಾಜಸ್ಥಾನದ ಕೆಲವು ಪ್ರದೇಶಗಳಲ್ಲಿ ಭಾನುವಾರ ವ್ಯಾಪಕ ಮಳೆಯಾಗಲಿದ್ದು, ಪಶ್ಚಿಮ ಮಧ್ಯಪ್ರದೇಶ ಮತ್ತು ಗುಜರಾತ್ ರಾಜ್ಯಗಳ ಪ್ರತ್ಯೇಕ ಸ್ಥಳಗಳಲ್ಲಿ ಸೋಮವಾರ ಭಾರೀ ಮಳೆಯಾಗಲಿದೆ ಎಂದು ಐಎಂಡಿ ತಿಳಿಸಿದೆ.
ಶನಿವಾರ ಸಂಜೆಯಿಂದ ರಾಜ್ಯದ ಕೆಲವು ಭಾಗಗಳಲ್ಲಿ ನಿರಂತರ ಮಳೆಯಿಂದಾಗಿ ಸೋಮವಾರ ಮಧ್ಯಪ್ರದೇಶದ 11 ಜಿಲ್ಲೆಗಳ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಭಾರತ ಹವಾಮಾನ ಇಲಾಖೆ (ಐಎಂಡಿ) ಸೋಮವಾರ ರಾಜ್ಯದ ಕನಿಷ್ಠ 32 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಯಾವುದೇ ನಾಯಕ ಅಥವಾ ಸರ್ಕಾರದೊಂದಿಗೆ ಯಾರಿಗಾದರೂ ಸಮಸ್ಯೆ ಇದ್ದರೆ ಅದನ್ನು ಅವರು ಪಕ್ಷದೊಳಗಿನ ಸೂಕ್ತ ವೇದಿಕೆಗೆ ಕೊಂಡೊಯ್ಯಬೇಕು, ಅವರ ಸಮಸ್ಯೆಗಳಿಗೆ ಖಂಡಿತವಾಗಿಯೂ ಪರಿಹಾರ ಸಿಗುತ್ತದೆ ಎಂದು ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.