ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಅಲ್ಲದೆ, ಜಾಮೀನು ಅರ್ಜಿ ವಿಚಾರಣೆಯನ್ನು ಬುಧವಾರ ಮಧ್ಯಾಹ್ನ 3 ಗಂಟೆಗೆ ಕೋರ್ಟ್ ಮುಂದೂಡಿದೆ.
ಸೆಪ್ಟೆಂಬರ್ 12 ರಂದು ದೆಹಲಿಯಲ್ಲಿ ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರ ಮಗಳ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದೆ. ಡಿಕೆ ಶಿವಕುಮಾರ್ ಅವರು ತಮ್ಮ ಮಗಳೊಂದಿಗೆ ಜುಲೈ 2017 ರಲ್ಲಿ ವ್ಯಾಪಾರ ಒಪ್ಪಂದಕ್ಕಾಗಿ ಸಿಂಗಾಪುರಕ್ಕೆ ಪ್ರಯಾಣಿಸಿರುವುದು ಈಗ ತನಿಖಾ ಸಂಸ್ಥೆಯ ಕಣ್ಣಿಗೆ ಬಿದ್ದಿದೆ ಎನ್ನಲಾಗಿದೆ.
ಕಳೆದ ನಾಲ್ಕು ದಿನಗಳಿಂದ ಸುದೀರ್ಘ ವಿಚಾರಣೆ ನಡೆಸಿದ ಬಳಿಕ, ಡಿ.ಕೆ.ಶಿವಕುಮಾರ್ ಅವರು ತನಿಖೆಗೆ ಸಹಕರಿಸುತ್ತಿಲ್ಲ ಎಂಬ ಕಾರಣ ನೀಡಿ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.