ಸುಪ್ರೀಂ ಕೋರ್ಟ್ (ಇಂದಿರಾ ಸಹಾನಿ ಪ್ರಕರಣದ) ತೀರ್ಪಿನ ಪ್ರಕಾರ ಒಟ್ಟು ಮೀಸಲಾತಿ ಶೇ.ಐವತ್ತನ್ನು ಮೀರುವಂತಿಲ್ಲ. ಈ ಮಿತಿಯನ್ನು ಮೀರದೆ ಎಸ್ ಸಿ/ಎಸ್ ಟಿ ಮೀಸಲಾತಿಯನ್ನು ಒಟ್ಟು ಶೇ.ಆರರಷ್ಟು ಹೆಚ್ಚಿಸಲು ಹೇಗೆ ಸಾಧ್ಯ? ಇದರ ಬಗ್ಗೆ ತನ್ನ ನಿಲುವನ್ನು ರಾಜ್ಯ ಸರ್ಕಾರ ಸ್ಪಷ್ಟಪಡಿಸಬೇಕು, ಎಂದು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು.
ಸಮಾಜದಲ್ಲಿ ಸಾಮಾಜಿಕ ಮತ್ತು ಆರ್ಥಿಕ ಅಸಮಾನತೆ ಇರುವುದರಿಂದ ಮೀಸಲಾತಿ ಅಗತ್ಯವಿದೆ, ಮತ್ತು ಅದರ ಫಲಾನುಭವಿಗಳು ಇದು ಅಗತ್ಯವೆಂದು ಭಾವಿಸುವವರೆಗೂ ಮುಂದುವರಿಯಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಸೋಮವಾರ ಹೇಳಿದೆ.
ಬಿಜೆಪಿ-ಆರ್ಎಸ್ಎಸ್ ದಲಿತರು ಮತ್ತು ಹಿಂದುಳಿದ ವರ್ಗಗಳನ್ನು ವಿರೋಧಿಸುತ್ತವೆ. ಯಾವುದೇ ಕಾರಣಕ್ಕೂ ದಲಿತರ ಪ್ರಗತಿಯನ್ನು ಬಯಸುವುದಿಲ್ಲ. ಮೀಸಲಾತಿಯನ್ನು ಕೊನೆಗೊಳಿಸಲು ಅವರು ಯೋಜಿತ ಪಿತೂರಿ ನಡೆಸಿದ್ದಾರೆ ಎಂದು ಕಾಂಗ್ರೆಸ್ ನಾಯಕ ಪಿ.ಎಲ್ ಪುನಿಯಾ ಹೇಳಿದ್ದಾರೆ.
ಮರಾಠರಿಗೆ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲಾತಿ ನೀಡುವ ಮಹಾರಾಷ್ಟ್ರ ಸರ್ಕಾರದ ನಿರ್ಧಾರವನ್ನು ಬಾಂಬೆ ಹೈಕೋರ್ಟ್ ಇಂದು ಎತ್ತಿಹಿಡಿದಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. ಆದಾಗ್ಯೂ ಸರ್ಕಾರವು ಉಲ್ಲೇಖಿಸಿದ ಶೇಕಡಾ 16 ರ ಮೀಸಲಾತಿ ಪ್ರಮಾಣವನ್ನು ಕಡಿತಗೊಳಿಸಿ, ಇದು ಸಮರ್ಥನೀಯ ಅಲ್ಲ ಎಂದು ಕೋರ್ಟ್ ಹೇಳಿದೆ.
ಕೇಂದ್ರ ಸರ್ಕಾರವು ಮೇಲ್ಜಾತಿ ಬಡವರಿಗೆ ನೀಡಿರುವ ಶೇ 10ರಷ್ಟು ಮೀಸಲಾತಿ ನಿರ್ಧಾರಕ್ಕೆ ತಡೆಯಾಜ್ಞೆ ನೀಡಲು ಸುಪ್ರೀಂ ನಿರಾಕರಿಸಿದೆ. ಮುಂದಿನ ವಿಚಾರಣೆಯನ್ನು ಮಾರ್ಚ್ 28 ಕ್ಕೆ ಮುಂದೂಡಿದೆ.
ಮಹಾರಾಷ್ಟ್ರದ ಮರಾಠ ಸಮುದಾಯವು ಕೇಂದ್ರ ಸರ್ಕಾರವು ಮೇಲ್ಜಾತಿ ಬಡವರಿಗೆ ನೀಡಿರುವ ಶೇ.10 ರಷ್ಟು ಮೀಸಲಾತಿ ಮರಾಠ ಸಮುದಾಯಕ್ಕೆ ಅನ್ವಯವಾಗುವುದಿಲ್ಲ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತಿಳಿಸಿದ್ದಾರೆ.
ಸಂವಿಧಾನದ 124ನೇ ತಿದ್ದುಪಡಿಯ ಪ್ರಕಾರ ಮೇಲ್ವರ್ಗದವರಿಗೂ ಉದ್ಯೋಗದಲ್ಲಿ ಶೇ. 10 ಮೀಸಲಾತಿ ನೀಡುವ ಮಸೂದೆಯನ್ನು ಸಂಸತ್ತಿನಲ್ಲಿ ಜ. 9ರಂದು ಅನುಮೋದಿಸಲಾಗಿತ್ತು. ಅದರನ್ವಯ ನೂತನ ಮೀಸಲಾತಿ ತಿದ್ದುಪಡಿ ಕಾಯ್ದೆ ಫೆ. 1ರಿಂದ ಜಾರಿಯಾಗುತ್ತಿದೆ.
ಶನಿವಾರದಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಸಮಾರೋಪ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಮಾತನಾಡಿದ ನರೇಂದ್ರ ಮೋದಿ "ಇದು ಅಟಲ್ ಜಿ ಇಲ್ಲದ ಮೊದಲ ರಾಷ್ಟ್ರೀಯ ಸಮಾವೇಶವಾಗಿದೆ" ಎಂದರು.
ಮೇಲ್ಜಾತಿಯ ಆರ್ಥಿವಾಗಿ ಹಿಂದುಳಿದವರಿಗೆ ಶೇ.10 ಮೀಸಲಾತಿ ಘೋಷಿಸಿದ ಬೆನ್ನಲ್ಲೇ, ಉನ್ನತ ಶಿಕ್ಷಣ ಸಂಸ್ಥೆಗಳ ಸೀಟುಗಳನ್ನು ಶೇ.10ರಷ್ಟು ಹೆಚ್ಚಿಸಲಾಗುವುದು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
General Reservation Qouta: ಆರ್ಥಿಕವಾಗಿ ಹಿಂದುಳಿದಿರುವ ಮೇಲ್ವರ್ಗದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ. 10 ರಷ್ಟು ಮೀಸಲಾತಿ ಒದಗಿಸುವ ಮಸೂದೆ ಲೋಕಸಭೆಯಲ್ಲಿಂದು ಮಂಡನೆಯಾಯಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.