ಅಪಘಾತದಲ್ಲಿ ಮೃತಪಟ್ಟ 8 ಜನರಲ್ಲಿ 5 ಜನರು ಒಂದೇ ಕುಟುಂಬಕ್ಕೆ ಸೇರಿದವರು. ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಸಾವಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಭಗವಾನ್ ರಾಮನ ಹುಟ್ಟಿನಿಂದ ಪಟ್ಟಾಭಿಷೇಕದವರೆಗಿನ ದೃಶ್ಯಗಳನ್ನು ತಯಾರಿಸಲಾಗಿದ್ದು, ಇವುಗಳನ್ನು ಅಯೋಧ್ಯೆಯ ಬೀದಿಗಳಲ್ಲಿ ತೋರಿಸಲಾಗುತ್ತಿದೆ. ಸರ್ಕಾರವು ಈ ಸಂಪೂರ್ಣ ಕಾರ್ಯಕ್ರಮವನ್ನು ರಾಜ್ಯ ಜಾತ್ರೆ ಎಂದು ಘೋಷಿಸಿದೆ, ಇದರಿಂದಾಗಿ ಅದು ಇನ್ನೂ ಸುಗಮ ವೇಗದಲ್ಲಿ ನಡೆಯುತ್ತಿದೆ.
ಉತ್ತರಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ಇದುವರೆಗೆ 93 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೆ, ಭಾನುವಾರ 14 ಮಂದಿ, ಶನಿವಾರ 25 ಮಂದಿ ಸಾವನ್ನಪ್ಪಿರುವುದಾಗಿ ಸರ್ಕಾರದ ವರದಿಗಳು ತಿಳಿಸಿವೆ.
ಉತ್ತರ ಪ್ರದೇಶದಲ್ಲಿ ಕಳೆದ ನಾಲ್ಕು ದಿನಗಳಲ್ಲಿ ಸುಮಾರು 73 ಜನರು ಸಾವನ್ನಪ್ಪಿದ್ದಾರೆ, ಈ ವಾರ ಹಲವಾರು ಪ್ರದೇಶಗಳಲ್ಲಿ ಸರಾಸರಿಗಿಂತ ಹೆಚ್ಚಿನ ಮಳೆಯಾಗಿದೆ. ಪೂರ್ವ ಉತ್ತರ ಪ್ರದೇಶದ ಹೆಚ್ಚಿನ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಅಕ್ರಮವಾಗಿ ಒಳನುಗ್ಗುವವರ ಬಗ್ಗೆ ಸರ್ಕಾರ ಕಟ್ಟುನಿಟ್ಟಾಗಿದೆ ಎಂದು ಸಿಎಂ ಯೋಗಿ ಆದಿತ್ಯನಾಥ್ ಹೇಳಿಕೆಗೆ ಉತ್ತರ ಪ್ರದೇಶದ ಇಂಧನ ಸಚಿವ ಶ್ರೀಕಾಂತ್ ಶರ್ಮಾ ಪ್ರತಿಕ್ರಿಯಿಸಿದ್ದಾರೆ. ಈ ವಿಷಯವು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿರುವುದರಿಂದ ರಾಜ್ಯದಲ್ಲಿ ಕೂಡ ಎನ್ಆರ್ಸಿ ಬಗ್ಗೆ ಕೆಲಸ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.
1 ಟ್ರಿಲಿಯನ್ ಡಾಲರ್ ಆರ್ಥಿಕತೆಯ ಗುರಿಯನ್ನು ಸಾಧಿಸಲು ಸಹಾಯ ಮಾಡುವ ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಲಕ್ನೋದ ಐಐಎಂನೊಂದಿಗೆ ಮಾರ್ಗಸೂಚಿಯನ್ನು ರೂಪಿಸಲಾಗುತ್ತಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾನುವಾರ ಹೇಳಿದ್ದಾರೆ.
ಉತ್ತರಪ್ರದೇಶದ ಸಚಿವರ ಸಂಬಳ ಮತ್ತು ವಿವಿಧ ಕಾಯ್ದೆ -1981ರ ಅಡಿಯಲ್ಲಿ ಎಲ್ಲ ಸಚಿವರ ಆದಾಯ ತೆರಿಗೆಯನ್ನು ರಾಜ್ಯ ಸರ್ಕಾರದ ನಿಧಿಯಿಂದ ಈವರೆಗೆ ಪಾವತಿಸಲಾಗುತ್ತಿತ್ತು. ಆದರೆ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸೂಚನೆಯಂತೆ ಈಗ ಎಲ್ಲ ಸಚಿವರು ತಮ್ಮ ಆದಾಯ ತೆರಿಗೆಯನ್ನು ತಾವೇ ಪಾವತಿಸಲು ನಿರ್ಧರಿಸಲಾಗಿದೆ.
ಕಬ್ಬಿನ ಆಯುಕ್ತ ಮನೀಶ್ ಚೌಹಾಣ್ ಅವರನ್ನು ಆಹಾರ ಮತ್ತು ಲಾಜಿಸ್ಟಿಕ್ಸ್ ವಿಭಾಗದ ಆಯುಕ್ತರನ್ನಾಗಿ ಮಾಡಲಾಗಿದೆ ಮತ್ತು ಅವರ ಸ್ಥಾನದಲ್ಲಿ ಕಬ್ಬು ಅಭಿವೃದ್ಧಿ ಮತ್ತು ಅಬಕಾರಿ ಮುಖ್ಯ ಕಾರ್ಯದರ್ಶಿ ಸಂಜಯ್ ಭೂಸ್ರೆಡ್ಡಿ ಅವರನ್ನು ನೇಮಿಸಲಾಗಿದೆ.
ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಸುಮಾರು ಎರಡೂವರೆ ವರ್ಷಗಳ ನಂತರ ಮೊದಲ ಬಾರಿಗೆ ಉತ್ತರ ಪ್ರದೇಶ ಸರ್ಕಾರದಲ್ಲಿ ಸಂಪುಟ ಪುನರ್ರಚನೆ ಮಾಡಲಾಗುತ್ತಿದೆ.
ಉತ್ತರಪ್ರದೇಶ ಕ್ಯಾಬಿನೆಟ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಐವರು ಮಂತ್ರಿಗಳಾದ - ಹಣಕಾಸು ಸಚಿವ ರಾಜೇಶ್ ಅಗರ್ವಾಲ್, ಸಾರಿಗೆ ಸಚಿವ ಸ್ವತಂತ್ರ ದೇವ್ ಸಿಂಗ್, ಅರ್ಚನ ಪಾಂಡೆ, ಅನುಪಮ ಜೈಸ್ವಾಲ್ ಮತ್ತು ಧರಂಪಾಲ್ ಸಿಂಗ್ ಅವರ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ.
ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜ್ಯ ಸರ್ಕಾರದ ಯೋಜನೆಗಳಿಗೆ ಸಂಬಂಧಿಸಿದಂತೆ ಕೆಲವು ಅಂಕಿಅಂಶಗಳನ್ನು ಕೇಳಿದ್ದರುಜಿಲ್ಲಾ ಮ್ಯಾಜಿಸ್ಟ್ರೇಟ್ ಈ ಅಂಕಿಅಂಶಗಳನ್ನು ಮಂಡಿಸಿದರು, ಆದರೆ ಕೆಲ ಜಿಲ್ಲಾಧಿಕಾರಿಗಳು ಸರ್ಕಾರಕ್ಕೆ ತಪ್ಪಾದ ಅಂಕಿ ಅಂಶಗಳನ್ನು ಮಂಡಿಸಿರುವುದಕ್ಕೆ ಯೋಗಿ ಸರ್ಕಾರ ಅಸಮಾಧಾನ ವ್ಯಕ್ತಪಡಿಸಿದೆ.
ಕೇಂದ್ರ ಸಚಿವ ಅಮಿತ್ ಶಾ ಈಗ ಕೊನೆಗೂ ಉತ್ತರ ಪ್ರದೇಶದ ಮುಖ್ಯಮಂತ್ರಿಯನ್ನಾಗಿ ಯೋಗಿ ಆದಿತ್ಯನಾಥ್ ಅವರನ್ನು ಆಯ್ಕೆ ಮಾಡಿದ್ದರ ಹಿಂದಿನ ರಹಸ್ಯವನ್ನು ವಿವರಿಸಿದ್ದಾರೆ. ಲಖನೌದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಅಮಿತ್ ಶಾ ಈ ವಿಚಾರವನ್ನು ಬಹಿರಂಗಪಡಿಸಿದರು. ಈ ವೇಳೆ ಸಿಎಂ ಯೋಗಿ ಆದಿತ್ಯನಾಥ್ ಕೂಡ ವೇದಿಕೆ ಮೇಲೆ ಉಪಸ್ಥಿತರಿದ್ದರು.
ಯೋಗಿ ಆದಿತ್ಯನಾಥ್ ಅವರು 2017 ರಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿನಿಂದ ಈವರೆಗೂ ಉತ್ತರ ಪ್ರದೇಶ ಸರ್ಕಾರ ಒಟ್ಟು 76 ಪ್ರಕರಣಗಳನ್ನು ಹಿಂತೆಗೆದುಕೊಂಡಿದೆ ಎಂಬುದು ಗಮನಿಸಬೇಕಾದ ಅಂಶ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.