ಈ ಹಿಂದೆ ಎಂದಿರನ್(ರೋಬೊಟ್) ಚಿತ್ರ ನಿರ್ದೇಶಿಸಿ ಹಾಲಿವುಡ್ ಮಟ್ಟದಲ್ಲಿ ಸಾಕಷ್ಟು ಹೆಸರು ಮಾಡಿದ್ದ ಶಂಕರ್ ಅವರೇ ಈ ಚಿತ್ರವನ್ನೂ ನಿರ್ದೇಶಿಸುತ್ತಿರುವುದು ಸಿನಿಪ್ರಿಯರಲ್ಲಿ ಮತ್ತಷ್ಟು ಕುತೂಹಲ ಮೂಡಿಸಿದೆ.
ಕಾಲಾ ಚಿತ್ರ ಇಂದು ಬಿಡುಗಡೆಯಾಗುತ್ತಿರುವ ಹಿನ್ನೆಲೆಯಲ್ಲಿ ಕನ್ನಡಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಬೆಂಗಳೂರಿನ ಪ್ರಮುಖ ಚಿತ್ರಮಂದಿರಗಳ ಬಳಿ ಬಿಗಿ ಪೋಲಿಸ್ ಭದ್ರತೆ ಒದಗಿಸಲಾಗಿದೆ.
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ವಿರೋಧಿ ಹೇಳಿಕೆಗಳನ್ನು ನೀಡುತ್ತಿರುವ ತಮಿಳು ನಟ ರಜನಿಕಾಂತ್ ಹಾಗೂ ಕಮಲ್ ಹಾಸನ್ ಸಿನಿಮಾಗಳ ಪ್ರದರ್ಶನವನ್ನು ರಾಜ್ಯದಲ್ಲಿ ನಿಷೇಧಿಸಲು ನಿರ್ಧರಿಸಲಾಗಿದೆ.
ಕೊಚಡೈಯ್ಯನ್ ಚಿತ್ರದ ಹಕ್ಕು ಮಾರಾಟಕ್ಕೆ ಸಂಬಂಧಿಸಿದಂತೆ ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರ ಪತ್ನಿ ಲತಾ ರಜನಿಕಾಂತ್ ಅವರಿಗೆ 6.20 ಕೋಟಿ ರೂ. ಪಾವತಿಸುವಂತೆ ಸುಪ್ರೀಂ ಆದೇಶಿಸಿದೆ.
ತಮಿಳುನಾಡು ರಾಜಕೀಯ ಪ್ರವೇಶಿಸುವ ನಿರ್ಧಾರ ಪ್ರಕಟಿಸಿರುವ ನಟ ಕಮಲ್ ಹಾಸನ್, ಭಾನುವಾರ ರಜನಿಕಾಂತ್ ಅವರ ನಿವಾಸದಲ್ಲಿ ಭಾನುವಾರ ಭೇಟಿಯಾಗಿ ಮುಂದಿನ ನಡೆಯ ಕುರಿತು ಸಮಾಲೋಚನೆ ನಡೆಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.