ಕ್ರಿಕೆಟ್ ಆಡಳಿತದಲ್ಲಿ ಅಪಾರ ಅನುಭವ ಹೊಂದಿರುವ ಸೌರವ್ ಗಂಗೂಲಿ ಅವರನ್ನು ನೂತನ ಬಿಸಿಸಿಐ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದರಿಂದ ಭಾರತದ ಕ್ರಿಕೆಟ್ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ ಎಂದು ಮುಖ್ಯ ಕೋಚ್ ರವಿಶಾಸ್ತ್ರಿ ಅಭಿಪ್ರಾಯಪಟ್ಟಿದ್ದಾರೆ.
ಅನಿಲ್ ಕುಂಬ್ಳೆ ಅವರನ್ನು 2016 ರಲ್ಲಿ ಭಾರತೀಯ ಕ್ರಿಕೆಟ್ ತಂಡದ ಕೋಚ್ ಆಗಿ ನೇಮಕ ಮಾಡಿದ ನಂತರ ಸೌರವ್ ಗಂಗೂಲಿ ಹಾಗೂ ರವಿಶಾಸ್ತ್ರಿ ಜೊತೆಯಾಗಿ ಕಾಣಿಸಿಕೊಂಡಿಲ್ಲ, ಆ ಸಮಯದಲ್ಲಿ ಮೂರು ಸದಸ್ಯರ ಉನ್ನತ-ಶಕ್ತಿಯ ಕ್ರಿಕೆಟ್ ಸಲಹಾ ಸಮಿತಿಯ (ಸಿಎಸಿ) ಭಾಗವಾಗಿದ್ದ ಶಾಸ್ತ್ರಿ ಮತ್ತು ಗಂಗೂಲಿ ಅವರು ನೇಮಕಾತಿ ಬಗ್ಗೆ ಭಿನ್ನಾಭಿಪ್ರಾಯ ಹೊಂದಿದ್ದರು.
ದಕ್ಷಿಣ ಆಫ್ರಿಕಾ ವಿರುದ್ಧದ ಭಾರತದ ಮೂರನೇ ಟಿ 20 ಅಂತಾರಾಷ್ಟ್ರೀಯ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ, ಈ ಹಿನ್ನಲೆಯಲ್ಲಿ ಭಾರತ ತಂಡದ ಅಭ್ಯಾಸದ ಸಂದರ್ಭದಲ್ಲಿ ಭಾರತ ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್ ಹಾಗೂ ಪ್ರಸಕ್ತ ಕೋಚ್ ರವಿಶಾಸ್ತ್ರಿ ಮುಖಾಮುಖಿಯಾಗಿದ್ದಾರೆ.
ಕಪಿಲ್ ದೇವ್ ನೇತೃತ್ವದ ಕ್ರಿಕೆಟ್ ಸಲಹಾ ಸಮಿತಿಯು ಶುಕ್ರವಾರದಂದು ರವಿಶಾಸ್ತ್ರಿ ಅವರನ್ನು ಭಾರತೀಯ ಪುರುಷರ ತಂಡದ ಮುಖ್ಯ ಕೋಚ್ ಆಗಿ ಮರು ನೇಮಕ ಮಾಡಿತು. ಈಗಾಗಲೇ ವಿರಾಟ್ ಕೊಹ್ಲಿ ಶಾಸ್ತ್ರಿ ಅವರನ್ನು ಬೆಂಬಲಿಸಿದ ಹಿನ್ನಲೆಯಲ್ಲಿ ಈ ನಿರ್ಧಾರವನ್ನು ನಿರೀಕ್ಷಿಸಲಾಗಿತ್ತು ಎನ್ನಲಾಗಿದೆ.
ನವದೆಹಲಿ: ಸುಪ್ರೀಂಕೋರ್ಟ್ ನೇಮಕ ಮಾಡಿದ ನಿರ್ವಾಹಕರ ಸಮಿತಿ (ಸಿಒಎ) ಭಾರತದ ವಿಶ್ವಕಪ್ ಪ್ರದರ್ಶನದ ವಿಚಾರವಾಗಿ ನಾಯಕ ವಿರಾಟ್ ಕೊಹ್ಲಿ ಮತ್ತು ಮುಖ್ಯ ಕೋಚ್ ರವಿಶಾಸ್ತ್ರಿ ಅವರನ್ನು ವಿಚಾರಣೆಗೆ ಒಳಪಡಿಸಲಿದೆ. ಅಲ್ಲದೆ, ಮುಂದಿನ ವರ್ಷದ ವಿಶ್ವ ಟಿ 20 ಗಾಗಿ ಮಾರ್ಗಸೂಚಿಯನ್ನು ಪರಿಶೀಲನೆ ನಡೆಸಲಿದೆ ಎಂದು ಹೇಳಿದೆ.
ಭಾರತದ ಮುಖ್ಯ ಕೋಚ್ ರವಿಶಾಸ್ತ್ರಿ ಈಗ ಮಾಜಿ ನಾಯಕ ಧೋನಿ ಹಾಗೂ ಹಾಲಿ ನಾಯಕ ವಿರಾಟ್ ಕೊಹ್ಲಿ ಅವರನ್ನು ಹೋಲಿಕೆ ಮಾಡುತ್ತಾ ಇಬ್ಬರು ವಿಭಿನ್ನ ವ್ಯಕ್ತಿತ್ವದವರು, ಆದರೆ ಇಬ್ಬರು ಚಾಂಪಿಯನ್ಸಗಳು ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.