ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜೀವನಚರಿತ್ರೆ ಕುರಿತ ಚಲನಚಿತ್ರದಲ್ಲಿ ಮೋದಿ ಪಾತ್ರ ನಿರ್ವಹಿಸಿದ್ದ ಬಾಲಿವುಡ್ ನಟ ವಿವೇಕ್ ಒಬೆರಾಯ್ ಲೋಕಸಭಾ ಚುನಾವಣೆಯ ಬಳಿಕ ಮೋದಿ ಮತ್ತೆ ಪ್ರಧಾನಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಜೀವನ ಆಧಾರಿತ ಸಿನಿಮಾದಲ್ಲಿ ಮೋದಿಯವರ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಬಾಲಿವುಡ್ ನಟ ವಿವೇಕ್ ಒಬೆರಾಯ್ ಗೆ ಈಗ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಸ್ಥಾನ ಲಭಿಸಿದೆ.
ಎರಡು ತಿಂಗಳ ಹಿಂದೆಯೇ ಚಿತ್ರದ ನಿರ್ಮಾಪಕರು ಪ್ರಧಾನಿ ನರೇಂದ್ರ ಮೋದಿ ಅವರ ಜೀವನಚರಿತ್ರೆಯಲ್ಲಿ ಪ್ರಧಾನಿ ಮೋದಿ ಅವರ ಪಾತ್ರದಲ್ಲಿ ನಟ ವಿವೇಕ್ ಒಬೆರಾಯ್ ಅವರ ಹೆಸರು ಘೋಷಿಸಿದ್ದರು. ಅಂದಿನಿಂದ ಸಾಮಾಜಿಕ ಜಾಲತಾಣಗಳಲ್ಲಿ ಬೆಳ್ಳಿ ಪರದೆ ಮೇಲೆ ಪ್ರಧಾನಿ ಮೋದಿ ಲುಕ್ ಹೇಗೆ ಇರಲಿದೆ ಎನ್ನುವ ಕೂತೂಹಲ ಮೂಡಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.