Geetha shivarajkumar: ಈ ಹಿಂದೆ ಯಡಿಯೂರಪ್ಪ ವಿರುದ್ಧ ಸ್ಪರ್ಧಿಸಿದ್ದ ಗೀತಾ ಶಿವರಾಜ್ ಕುಮಾರ್, ಈ ಬಾರಿ ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ ಅವರ ಎದುರು ಕಣ್ಣಕ್ಕಿಳಿಯಲು ಸಜ್ಜಾಗಿದ್ದಾರೆ ಎನ್ನಲಾಗುತ್ತಿದೆ..
ಮುಂಜಾನೆ ತಾಳಿಕಟ್ಟಿಸಿಕೊಂಡ ನವವಿವಾಹಿತ ಪರೀಕ್ಷಾ ಕೊಠಡಿಗೆ ಬಂದು ಡಿಗ್ರಿ ಪರೀಕ್ಷೆ ಬರೆಯುವ ಮೂಲಕ ಅಚ್ಚರಿ ಮೂಡಿಸಿದ್ದಾಳೆ. ಶಿವಮೊಗ್ಗ ಭರ್ಮಪ್ಪ ನಗರದ ಸತ್ಯವತಿ ಎಂಬ ಯುವತಿ ತನ್ನ ಪ್ರಿಯಕರನೊಂದಿಗೆ ಬೈಕ್ ನಲ್ಲಿ ಪರೀಕ್ಷಾ ಕೊಠಡಿಗೆ ಬಂದು ಪರೀಕ್ಷೆ ಬರೆದಿದ್ದಾಳೆ.
ಶುಕ್ರವಾರ ರಸ್ತೆ ಗುಂಡಿಗಳಲ್ಲಿ ಸಸಿ ನೆಟ್ಟು, ತಮ್ಮ ಕೈಯಲ್ಲಿ ಫಲಕಗಳನ್ನು ಹಿಡಿದುಕೊಂಡು ರಾಜ್ಯದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ವಿದ್ಯಾರ್ಥಿಗಳು, ಶೀಘ್ರವೇ ಈ ಸಮಸ್ಯೆಗೆ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.
ಶಿವಮೊಗ್ಗ ನಗರದಲ್ಲಿ 32 ಕಿ.ಮೀ. ಹೊರವರ್ತುಲ ರಸ್ತೆ ನಿರ್ಮಾಣ ಕಾರ್ಯಕ್ಕೆ ಶೀಘ್ರವೇ ಚಾಲನೆ ನೀಡಲಾಗುವುದು. ಈಗಾಗಲೇ ಶೇ.30ರಷ್ಟು ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇನ್ನುಳಿದ ಭೂಸ್ವಾಧೀನ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು.
ಅತಿವೃಷ್ಟಿಯಿಂದ ಹಾನಿಗೀಡಾದ ಹಾಗೂ ಸಂಪೂರ್ಣ ಬಿದ್ದು ಹೋಗಿರುವ ಮನೆಗಳ ಸಂಖ್ಯೆ, ರಸ್ತೆ, ಸೇತುವೆ, ಕಟ್ಟಡಗಳ ಸೇರಿದಂತೆ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಉಂಟಾಗಿರುವ ಹಾನಿಯ ಬಗ್ಗೆ ಸಮರ್ಪಕವಾದ ಸಮೀಕ್ಷೆ ನಡೆಸಬೇಕು. ಕೃಷಿ ಹಾಗೂ ತೋಟಗಾರಿಕೆ ಪ್ರದೇಶ ಹಾಗೂ ಬೆಳೆಗಳಿಗೆ ಹಾನಿಯ ಕುರಿತು ನೆರೆ ನೀರು ಖಾಲಿಯಾದ ಬಳಿಕ ನಿಖರವಾಗಿ ಅಂದಾಜಿಸಬೇಕು- ಅಧಿಕಾರಿಗಳಿಗೆ ಸಿಎಂ ಸೂಚನೆ
ಕಂದಾಯ ಇಲಾಖೆ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಮಳೆ ಕಡಿಮೆಯಾದ ಬಳಿಕ, ನಾಲ್ಕೈದು ದಿನಗಳಲ್ಲಿ ಈ ಭಾಗದಲ್ಲಿ ಸರ್ವೇ ಮಾಡಿ ವರದಿ ನೀಡಲಿದ್ದಾರೆ. ಬಳಿಕ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ವರದಿಯನ್ನು ಆಧರಿಸಿ ವಿಶೇಷ ಪ್ಯಾಕೇಜ್ ಘೋಷಿಸಲಾಗುವುದು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ರಾಜ್ಯದಲ್ಲಿ ಪ್ರವಾಹದಿಂದಾಗಿ ಸುಮಾರು 50,000 ಕೋಟಿ ರೂ.ಗಳಷ್ಟು ನಷ್ಟ ಉಂಟಾಗಿದೆ. ಹಾಗಾಗಿ ಕೂಡಲೇ ಕೇಂದ್ರ ಸರ್ಕಾರ 10,000 ಕೋಟಿ ರೂ.ಗಳ ಆರ್ಥಿಕ ನೇರವು ಬಿಡುಗಡೆ ಮಾಡಬೇಕೆಂದು ಮನವಿ ಮಾಡುತ್ತೇನೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಕಳೆದ ಎರಡು ಮೂರು ದಿನಗಳಿಂದನಿರಂತರ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಎನ್.ದಯಾನಂದ್ ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.