ವೈಯಕ್ತಿಕ ಕೆಲಸದ ಮೇಲೆ ಚೆನ್ನೈಗೆ ಹೋಗಿದ್ದೆ. ಅಲ್ಲಿ ಎದೆ ನೋವು ಕಾಣಿಸಿಕೊಂಡಿತು. ಯಾವ ಆಸ್ಪತ್ರೆಗೆ ದಾಖಲಾಗುವುದು ಎಂದು ತಿಳಿಯದೆ ವಿಮಾನ ಟಿಕೆಟ್ ಬುಕ್ ಮಾಡಿಕೊಂಡು ಮುಂಬೈ ಬಂದೆ ಎಂದು ಶ್ರೀಮಂತ ಪಾಟೀಲ ಅವರು ವೀಡಿಯೋದಲ್ಲಿ ತಿಳಿಸಿದ್ದಾರೆ.
ಸಿದ್ದರಾಮಯ್ಯನವರು ಕೊಟ್ಟಿರುವ ಪತ್ರ ಹಾಗೂ ನೀಡಿರುವ ಪುರಾವೆಗಳ ಆಧಾರದ ಮೇಲೆ ಗೃಹ ಸಚಿವರು ಗಮನ ವಹಿಸುವಂತೆ ಹೇಳುತ್ತಿದ್ದೇನೆ. ಈಗಲೇ ಶ್ರೀಮಂತ ಪಾಟೀಲ್ ಅವರ ಆರೋಗ್ಯಕ್ಕೆ ಸಂಬಂಧಿಸಿದ ಪೂರ್ಣ ಮಾಹಿತಿ ಕಲೆ ಹಾಕಿ. ಇದು ನೈಸರ್ಗಿಕ ಅಲ್ಲ ಎಂದೇ ನನಗೆ ಅನಿಸುತ್ತದೆ. ಇದರ ಬಗ್ಗೆ ತನಿಖೆಯಾಗಬೇಕು ಎಂದು ಸ್ಪೀಕರ್ ಹೇಳಿದರು.
ಬೆಂಗಳೂರಿನ ವಿಂಡ್ ಫ್ಲವರ್ ಪ್ರಕೃತಿ ರೆಸಾರ್ಟ್ ನಲ್ಲಿ ಇತರ ಕಾಂಗ್ರೆಸ್ ಶಾಸಕರೊಂದಿಗೆ ತಂಗಿದ್ದ ಶ್ರೀಮಂತ ಪಾಟೀಲರಿಗೆ ಬುಧವಾರ ರಾತ್ರಿ ತೀವ್ರ ಎದೆನೋವು ಕಾಣಿಸಿಕೊಂಡ ಕಾರಣ ಮೊದಲು ಮುಂಬೈಗೆ ತೆರಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.