ಯುಪಿಎ ಸರ್ಕಾರದ ಅವಧಿಯಲ್ಲಿ ನಡೆಸಲಾಗಿದ್ದ ಸರ್ಜಿಕಲ್ ಸ್ಟ್ರೈಕ್ ಗಳನ್ನು ವೀಡಿಯೋ ಗೇಮ್ ಎಂದು ಹೇಳುವ ಮೂಲಕ ಪ್ರಧಾನಿ ಮೋದಿ ಭಾರತೀಯ ಸೇನೆಯನ್ನು ಅವಮಾನಿಸಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಯುಪಿಎ ಸರ್ಕಾರದ ಅವಧಿಯಲ್ಲಿ 6 ಬಾರಿ ಸರ್ಜಿಕಲ್ ಸ್ಟ್ರೈಕ್ ನಡೆಸಲಾಗಿದೆ. ಆದರೆ ಕಾಂಗ್ರೆಸ್ ಎಂದಿಗೂ ಇದರ ಕ್ರೆಡಿಟ್ ತೆಗೆದುಕೊಳ್ಳಲು ಪ್ರಯತ್ನಿಸಿಲ್ಲ. ಆದರೆ ಕೇವಲ ಒಂದು ಸರ್ಜಿಕಲ್ ಸ್ಟ್ರೈಕ್ ನಡೆಸಿದವರು ತಮ್ಮ ಬೆನ್ನನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ಟೀಕಿಸಿದೆ.
ಭಯೋತ್ಪಾದನೆಯನ್ನು ಬೆಂಬಲಿಸುತ್ತಿರುವ ನೆರೆಯ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆಯನ್ನು ರವಾನಿಸಿದ್ದೇವೆ. ನಮ್ಮ ಸೈನಿಕರು ಮತ್ತು ವಾಯು ಸೇನೆಯ ಪೈಲಟ್ ಗಳು ಧೈರ್ಯವಾಗಿ ಉಗ್ರರನ್ನು ಹೊಡೆದುರುಳಿಸುತ್ತಿದ್ದಾರೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಎರಡು ವರ್ಷಗಳ ಹಿಂದೆ ಭಾರತೀಯ ಸೈನ್ಯದ ಸರ್ಜಿಕಲ್ ಸ್ಟ್ರೈಕ್ ನಿಂದ ಈಗ ಹಲವಾರು ರೋಚಕ ಕಥನಗಳು ಹೊರಬರುತ್ತಿವೆ.ಅದರಲ್ಲಿ ಪ್ರಮುಖವಾಗಿ ಚಿರತೆಯ ಮೂತ್ರವು ಸಹ ಭಾರತದ ಸೈನ್ಯಕ್ಕೆ ನೆರವಾಗಿತ್ತು ಎನ್ನುವ ಕೂತುಹಲಕಾರಿ ಸಂಗತಿಯು ಈಗ ಬೆಳಕಿಗೆ ಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.