ಡಿ.ಕೆ. ಶಿವಕುಮಾರ್ ಅವರು ತಂಗಿದ್ದ ಸಂಸದ ಹಾಗೂ ಅವರ ಸಹೋದರ ಡಿ.ಕೆ. ಸುರೇಶ್ ಅವರ ನಿವಾಸಕ್ಕೆ ರಾಜ್ಯಸಭಾ ಸದಸ್ಯ ಡಾ. ಎಲ್. ಹನುಮಂತಯ್ಯ, ಆನೆಕಲ್ ಶಾಸಕ ಶಿವಣ್ಣ, ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ, ಮಾಜಿ ಸಚಿವ ಪಿ.ಎಂ. ನರೇಂದ್ರಸ್ವಾಮಿ, ಬೆಂಗಳೂರಿನ ಮಾಜಿ ಮೇಯರ್ ಗಳಾದ ಪದ್ಮಾವತಿ, ಸಂಪತ್ ರಾಜ್ ಹಾಗೂ ಮತ್ತಿತರ ಬೆಂಬಲಿಗರು, ಆಪ್ತರು ಭೇಟಿ ನೀಡಿ ಡಿ.ಕೆ. ಶಿವಕುಮಾರ್ ಅವರ ಕುಶಲೋಪಹರಿ ನಡೆಸಿದರು.
ಪಿಎಂಎಲ್ ಅಡಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ ಒಳಗಾಗಿ 48 ದಿನಗಳ ಕಾಲ ತಿಹಾರ್ ಕೇಂದ್ರ ಕಾರಾಗೃಹದಲ್ಲಿದ್ದ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅವರಿಗೆ ಬುಧವಾರ ದೆಹಲಿ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.
ತಮಗೆ ಎರಡನೇ ಭಾರಿಗೆ ವಿಧಾನ ಪರಿಷತ್ತಿನ ಪ್ರತಿಪಕ್ಷದ ನಾಯಕ ಸ್ಥಾನ ನೀಡಿದ್ದಕ್ಕೆ ಗುರುವಾರ ಎಸ್. ಆರ್. ಪಾಟೀಲ್ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿ ಧನ್ಯವಾದ ಹೇಳಿದರು.
ಗಾಂಧೀಜಿ ಹೆಸರು ಬಳಸಿಕೊಂಡು ಎಲ್ಲರನ್ನೂ ತಮ್ಮತ್ತ ಸೆಳೆಯಲು ಪ್ರಯತ್ನಿಸುತ್ತಿರುವುದು ಇದೇ ಮೊದಲಲ್ಲ. ಆದರೆ ಅವರು ನಡೆದ ಹಾದಿ, ತತ್ವಗಳನ್ನು ಅನುಸರಿಸುವುದು ಸುಲಭವಲ್ಲ. ಆರ್ಎಸ್ಎಸ್ ದೇಶದ ಸಂಕೇತವಾಗಬೇಕೆಂದು ಬಯಸುವವರು ಗಾಂಧೀಜಿಯ ಹಾದಿಯಲ್ಲಿ ನಡೆಯಲು ಎಂದಿಗೂ ಸಾಧ್ಯವಿಲ್ಲ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.
ಈ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸುಧಾರಿಸಲು ಸೋನಿಯಾ ಗಾಂಧಿ ಪ್ರಯತ್ನಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ, ಇಂದು ಸಂಜೆ, ತಮ್ಮ ನಿವಾಸ 10 ಜನಪಥದಲ್ಲಿ ಕಾಂಗ್ರೆಸ್ ಆಡಳಿತವುಳ್ಳ ರಾಜ್ಯಗಳ ಮುಖ್ಯಮಂತ್ರಿಗಳ ಪ್ರಮುಖ ಸಭೆ ಕರೆಯಲಾಗಿದೆ.
ಯಾವುದೇ ನಾಯಕ ಅಥವಾ ಸರ್ಕಾರದೊಂದಿಗೆ ಯಾರಿಗಾದರೂ ಸಮಸ್ಯೆ ಇದ್ದರೆ ಅದನ್ನು ಅವರು ಪಕ್ಷದೊಳಗಿನ ಸೂಕ್ತ ವೇದಿಕೆಗೆ ಕೊಂಡೊಯ್ಯಬೇಕು, ಅವರ ಸಮಸ್ಯೆಗಳಿಗೆ ಖಂಡಿತವಾಗಿಯೂ ಪರಿಹಾರ ಸಿಗುತ್ತದೆ ಎಂದು ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದರು.
ಶಿಕ್ಷಕರ ದಿನದಂದು, ನಾನು ಎಲ್ಲಾ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ನನ್ನ ಶುಭಾಶಯಗಳನ್ನು ಕೋರುತ್ತೇನೆ. ನಮ್ಮ ಶಿಕ್ಷಕರು ನಿಜವಾದ ರಾಷ್ಟ್ರ ನಿರ್ಮಾಣಕಾರರು ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.
ರಾಹುಲ್ ಗಾಂಧಿ ರಾಜೀನಾಮೆಯಿಂದಾಗಿ ತೆರುವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನೂತನ ವ್ಯಕ್ತಿಗಳನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ಶನಿವಾರದಂದು ಸಭೆ ಸೇರಿದ್ದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ, ಈಗ ಸೋನಿಯಾ ಗಾಂಧಿಯವರನ್ನು ಸರ್ವಾನುಮತದಿಂದ ಹಂಗಾಮಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ.
ಸೋಮವಾರ ದೆಹಲಿಯಲ್ಲಿ ಮಹಾರಾಷ್ಟ್ರದ ನಾಯಕ ರಾಜ್ ಠಾಕ್ರೆ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ, ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ ಮೈತ್ರಿ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಬುಧವಾರದಂದು ಗಾಂಧಿ ಕುಟುಂಬದ ಸದಸ್ಯರ ಅನುಪಸ್ಥಿತಿಯಲ್ಲಿ ಹಿರಿಯ ಕಾಂಗ್ರೆಸ್ ಮುಖಂಡರು ಅನೌಪಚಾರಿಕವಾಗಿ ರಾಜಕೀಯ ಪರಿಸ್ಥಿತಿ ಬಗ್ಗೆ ಚರ್ಚಿಸಲು ಭೇಟಿಯಾಗಿರುವುದು ಸಾಕಷ್ಟು ಕೂತುಹಲ ಕೆರಳಿಸಿದೆ.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ರಾಜ್ಯಸಭೆಯಲ್ಲಿ ಪ್ರತಿಪಕ್ಷ ನಾಯಕ ಗುಲಾಮ್ ನಬಿ ಆಜಾದ್ರನ್ನು ಭೇಟಿಯಾಗಿದ್ದರು ಮತ್ತು ಲೋಕಸಭೆಯಲ್ಲಿ ಡಿಎಂಕೆ ನಾಯಕ ಟಿ.ಆರ್. ಬಾಲು ಅವರನ್ನು ಭೇಟಿ ಮಾಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.