ಶುಕ್ರವಾರ ನಡೆದ ಚುನಾವಣಾ ರ್ಯಾಲಿಯಲ್ಲಿ ಬಹಿರಂಗವಾಗಿ ಕಪಾಳಮೋಕ್ಷವಾದ ನಂತರ ಈಗ ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ತಮ್ಮ ಜೀವಕ್ಕೆ ಬೆದರಿಕೆ ಇದೆ. ಆದ್ದರಿಂದ ಪೊಲೀಸರು ಸೂಕ್ತ ರಕ್ಷಣೆ ಒದಗಿಸಬೇಕೆಂದು ಕೇಳಿಕೊಂಡಿದ್ದಾರೆ.
2015ರಲ್ಲಿ ಗುಜರಾತ್ನಲ್ಲಿ ಪಾಟೀದಾರ್ ಸಮುದಾಯದ ಮೀಸಲಾತಿಗಾಗಿ ಹೋರಾಟ ನಡೆಸುತ್ತಿದ್ದ ವೇಳೆ ಮೆಹಸಾನಾದಲ್ಲಿ ನಡೆದ ದೊಂಬಿ ಪ್ರಕರಣದಲ್ಲಿ ಹಾರ್ದಿಕ್ಗೆ ಮೆಹಸಾನಾ ನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ.
2015 ರಲ್ಲಿನ ಹಿಂಸಾಚಾರದ ಪ್ರಕರಣಕ್ಕೆ ಸಂಬಂಧಿಸಿದಂತೆ ತಡೆ ನೀಡಬೇಕೆಂದು ಹಾರ್ದಿಕ್ ಪಟೇಲ್ ಸಲ್ಲಿಸಿದ್ದ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ತಿರಸ್ಕರಿಸಿದೆ.ಈ ಹಿನ್ನಲೆಯಲ್ಲಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಇಚ್ಚಿಸಿದ್ದ ಹಾರ್ದಿಕ್ ಪಟೇಲ್ ಗೆ ಹಿನ್ನಡೆಯಾಗಿದೆ.
ಅಶ್ಲೀಲ ಚಿತ್ರಗಳನ್ನು ಮಾಡಿದ್ದಾರೆ ಎನ್ನುವ ಕಾರಣಕ್ಕೆ ಇಂದಿಗೂ ಹಿಂದಿ ಚಿತ್ರ ತಾರೆ ಸನ್ನಿ ಲಿಯೋನ್'ಳನ್ನು ಅದೇ ದೃಷ್ಟಿಯಿಂದ ನೋಡುವುದು ಸರಿಯಲ್ಲ ಎಂದು ಹಾರ್ದಿಕ್ ಪಟೇಲ್ ಅಭಿಪ್ರಾಯ ಪಟ್ಟಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ನನ್ನ ನಾಯಕರಲ್ಲ, ಅವರ ಸಹೋದರಿ ಪ್ರಿಯಾಂಕಾ ಗಾಂಧಿ ರಾಜಕೀಯ ಪ್ರವೇಶಿಸುವುದನ್ನು ತಾವು ಕಾಯುತ್ತಿರುವುದಾಗಿ ಪಾಟಿದಾರ್ ಅನಾಮತ್ ಆಂದೋಲನ ಸಮಿತಿ ನಾಯಕ ಹಾರ್ದಿಕ್ ಪಟೇಲ್ ಹೇಳಿದ್ದಾರೆ.
ನಮಗಿನ್ನೂ ಇವಿಎಂಗಳ ಬಗ್ಗೆ ನಂಬಿಕೆ ಬಂದಿಲ್ಲ ಎಂದು ಹೇಳಿರುವ ಹಾರ್ದಿಕ್ ಪಟೇಲ್, ನಾನು ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿಲ್ಲದ ಕಾರಣ ನನ್ನ ಹೋರಾಟ ಸದಾ ಮುಂದುವರಿಯಲಿದೆ ಎಂದು ಗುಡುಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.