ಹಿಮಾಚಲ ಪ್ರದೇಶದಲ್ಲಿ ಬಿಜೆಪಿಯ ವಿಜಯದ ಬಗ್ಗೆ ಸಂತೋಷವನ್ನು ವ್ಯಕ್ತಪಡಿಸುತ್ತಿದ್ದ ಠಾಕೂರ್, ಬಿಜೆಪಿ ಸರ್ಕಾರವು ಕಾನೂನು ಸುವ್ಯವಸ್ಥೆ ಸೇರಿದಂತೆ ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ, ಕೆಲಸ ಮಾಡಲಿದೆ ಎಂದು ಭರವಸೆ ನೀಡಿದರು.
ಗುಜರಾತ್ ನಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ಮೊದಲೇ ತಿಳಿದಿತ್ತು. ಹಾಗಾಗಿ ಇದೊಂದು ಸಮಾಧಾನಕರವಾದ ಗೆಲುವಾಗಿದೆ ಎಂದು ಕೇಂದ್ರ ಕಾನೂನು ಸಚಿವ ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ.
ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆ 2017ರ ಮತ ಎಣಿಕೆ ಆರಂಭವಾಗಿದೆ. 68 ಕ್ಷೇತ್ರಗಳ ಮತಎಣಿಕೆಯು 48 ಮತ ಕೇಂದ್ರಗಳಲ್ಲಿ ಏಕಕಾಲದಲ್ಲಿ ಪ್ರಾರಂಭವಾಯಿತು. ಆರಂಭದಲ್ಲಿ ಬಿಜೆಪಿ 26 ಕ್ಷೇತ್ರಗಳಲ್ಲಿ ಮತ್ತು ಕಾಂಗ್ರೆಸ್ 21 ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದೆ.
ಗುಜರಾತ್ ಚುನಾವಣಾ ಪ್ರಧಾನಿ ನರೇಂದ್ರ ಮೋದಿಗೆ ಪ್ರತಿಷ್ಠೆಯ ಪ್ರಶ್ನೆಯಾದರೂ, ಕಾಂಗ್ರೆಸ್ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ರಾಹುಲ್ ಗಾಂಧಿ ಈ ಪರೀಕ್ಷೆಯಲ್ಲಿ ಸಫಲರಾಗುವರೇ ಎಂಬುದು ಸಹ ಕುತೂಹಲಕಾರಿಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.