2023ಕ್ಕೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತೇವೆ.. 150 ಸ್ಥಾನ ಟಾರ್ಗೆಟ್.. ಆದ್ರೆ 130ಕ್ಕೂ ಹೆಚ್ಚು ಸ್ಥಾನ ಗೆದ್ದು ಅಧಿಕಾರಕ್ಕೆ ಬರುತ್ತೇವೆ. ಹೀಗಂತ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ದಾವಣಗೆರೆಯಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.. ದಾವಣಗೆರೆಯಲ್ಲಿ ಈ ಹಿಂದೆ ಕುರುಬರ ಸಮಾವೇಶ ಮಾಡಲಾಗಿತ್ತು. ಇದೀಗ ಎಲ್ಲಾ ಜನಾಂಗ ಧರ್ಮದವರು ಸೇರಿ ʻಸಿದ್ದರಾಮೋತ್ಸವʼ ಕಾರ್ಯಕ್ರಮ ಮಾಡುತ್ತಿದ್ದಾರೆ. ನನ್ನನ್ನ ಕೋಲಾರ, ಬಾದಾಮಿ, ಹುಣಸೂರು ಜನ ಕರೆದು ಸ್ಪರ್ಧೆ ಮಾಡಿ ಅಂತ ಕೇಳ್ತಿದ್ದಾರೆ ಅಂತಲೂ ಸಿದ್ದರಾಮಯ್ಯ ಹೇಳಿದ್ರು
2023ರಲ್ಲಿ ಕ್ಷೇತ್ರ ಬದಲಾವಣೆ ಬಗ್ಗೆ ಮಾತನಾಡಿದ್ದ ಸಿದ್ದರಾಮಯ್ಯ ನನಗೆ ಐದಾರು ಕ್ಷೇತ್ರಗಳಲ್ಲಿ ಸ್ಪರ್ಧಿಸುವಂತೆ ಕರೆಯುತ್ತಿದ್ದಾರೆ ಅಂತಾ ಹೇಳಿದ್ದರು. ಈ ಹೇಳಿಕೆ ವಿಚಾರವಾಗಿ ಟ್ವೀಟ್ ಮಾಡಿರುವ ಬಿಜೆಪಿ ಸಿದ್ದರಾಮಯ್ಯರನ್ನು ಲೇವಡಿ ಮಾಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.