ಕೋನದಾಸಪುರದ ವಸತಿ ಯೋಜನೆಯಲ್ಲಿ ಅಕ್ರಮ ಎಸಗಿದ ಕಳಂಕ ಹೊತ್ತಿರುವ ಸಚಿವ ಎಸ್.ಟಿ.ಸೋಮಶೇಖರ್ರವರಿಗೆ ಮೈಸೂರಿನ ದಸರಾ ಉತ್ಸವದಲ್ಲಿ ರಾಷ್ಟ್ರಪತಿಯವರ ಜೊತೆ ವೇದಿಕೆ ಹಂಚಿಕೊಳ್ಳಲು ಅವಕಾಶ ನೀಡಬಾರದು ಎಂದು ಕೋರಿ ಆಮ್ ಆದ್ಮಿ ಪಾರ್ಟಿಯ ರಾಜ್ಯ ವಕ್ತಾರ ಹಾಗೂ ಮಾಜಿ ಕೆಎಎಸ್ ಅಧಿಕಾರಿ ಕೆ.ಮಥಾಯಿ ನೇತೃತ್ವದ ನಿಯೋಗವು ರಾಜ್ಯಪಾಲರಿಗೆ ಮನವಿ ಸಲ್ಲಿಸಿತು.
ನಟ ಶರಣ್ ಅಭಿನಯದ ಅಧ್ಯಕ್ಷ ಸಿನಿಮಾದಲ್ಲಿ ಚಿಕ್ಕಣ್ಣನಿಗೆ ಜೊತೆಯಾಗಿ ನಟಿಸಿದ್ದ ನಟಿ ಆರೋಹಿತ ಗೌಡ ಆಮ್ ಆದ್ಮಿ ಪಕ್ಷಕ್ಕೆ ಇಂದು ಸೇರ್ಪಡೆಗೊಂಡರು. ಆಪ್ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿಯವರು ಆರೋಹಿತ ಅವರನ್ನು ಪಕ್ಷಕ್ಕೆ ಸ್ವಾಗತಿಸಿದರು.
ಯೋಜನೆಗೆ ಪರಿಸರ ಅನುಮತಿ ನೀಡುವಂತೆ ದೆಹಲಿ ತಜ್ಞರ ಮೌಲ್ಯಮಾಪನ ಸಮಿತಿ (ಎಸ್ಇಎಸಿ) ಕಳೆದ ವಾರ ಎಸ್ಇಐಎಎಗೆ ಶಿಫಾರಸು ಮಾಡಿತ್ತು. ಎಸ್ಇಐಎಎ ಬುಧವಾರ ನಡೆದ ಸಭೆಯಲ್ಲಿ ಯೋಜನೆ ಕುರಿತು ಚರ್ಚಿಸಿ ಅನುಮೋದನೆ ನೀಡಿದೆ.
ಬಿಜೆಪಿ ಸರ್ಕಾರದ ಅವ್ಯಾಹತ 40 % ಕಮಿಷನ್ ದಂಧೆಯ ಬಗ್ಗೆ ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತನಾಡಲು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿರೆಡ್ಡಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಸವಾಲು ಹಾಕಿದರು.
ಶಿವಾನಂದ ಸರ್ಕಲ್ ಸ್ಟೀಲ್ ಬ್ರಿಡ್ಜ್ ಇನ್ನೇನು ಉದ್ಘಾಟನೆಗೆ ಸಜ್ಜಾಗಿ ನಿಂತಿದೆ. ಆದ್ರೆ ಕಳಪೆ ಕಾಮಗಾರಿ ಆರೋಪಿಸಿ ಆಮ್ ಆದ್ಮಿ ಪಕ್ಷ ಇಂದು "40% ಕಮಿಷನ್ ಮೇಲ್ಸೇತುವೆ" ಎಂದು ನಾಮಕರಣ ಮಾಡಿದೆ. ಅಲ್ಲದೆ ಉದ್ಘಾಟನೆಗೆಂದು ಕೇಕ್ ಕೂಡಾ ತರಿಸಲಾಗಿತ್ತು. ಈ ವೇಳೆ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರನ್ನು ತಡೆದ ಪೊಲೀಸರು ವಶಕ್ಕೆ ಪಡೆದು ಪ್ರತಿಭಟನೆಯನ್ನು ತಡೆದರು.
ರಾಜ್ಯ ಸರ್ಕಾರವು ವ್ಯಾಪಕ ಭ್ರಷ್ಟಾಚಾರಕ್ಕೆ ಕಾರಣವಾಗಿದ್ದ ಜಿ ಕೆಟಗರಿ ಸೈಟು ಹಂಚಿಕೆ ಯನ್ನು ಸಂಪೂರ್ಣವಾಗಿ ನಿಷೇಧಗೊಳಿಸಿದ್ದರೂ ಸಹ ಬದಲಿ ನಿವೇಶನ ಹಂಚಿಕೆ ಎಂಬ ವಾರ್ಮ ವಾಮಮಾರ್ಗವನ್ನು ಹುಡುಕಿಕೊಂಡು ಗೃಹಸಚಿವ ಅರಗ ಜ್ಞಾನೇಂದ್ರ ಹಾಗೂ ಇನ್ನಿತರ ಪ್ರಭಾವಿಗಳಿಗೆ ಕೋಟ್ಯಂತರ ₹ ಬೆಲೆಬಾಳುವ ನಿವೇಶನ ಗಳನ್ನು ಹಂಚಿಕೆ ಮಾಡಿರುವ ಸರ್ಕಾರದ ನೀತಿಯನ್ನು ಸರ್ವೋಚ್ಚ ನ್ಯಾಯಾಲಯ ಛೀಮಾರಿ ಹಾಕಿದೆ. ಈ ಕೂಡಲೇ ಈ ಬಿಡಿಎ ಆಯುಕ್ತರನ್ನು ವರ್ಗಾವಣೆಗೊಳಿಸಬೇಕೆಂದು ಮೌಖಿಕ ಆದೇಶ ನೀಡಿದೆ.
ಸರ್ಕಾರದ ಅನೇಕ ಅಕ್ರಮಗಳ ಬಗ್ಗೆ ನನ್ನ ಬಳಿ ಸಂಗ್ರಹವಿದೆ. ಸಮಯ ಬಂದಾಗ ಅವೆಲ್ಲವನ್ನೂ ಬಹಿರಂಗ ಪದೆಸುತ್ತೇನೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಪ್ರಕರಣದಲ್ಲಿ ಸಿಬಿಐ 15 ಮಂದಿಯನ್ನು ಆರೋಪಿಗಳನ್ನಾಗಿ ಮಾಡಿದೆ. ಮನೀಶ್ ಸಿಸೋಡಿಯಾ ಅವರನ್ನು ನಂಬರ್ ಒನ್ ಆರೋಪಿಯನ್ನಾಗಿ ಮಾಡಲಾಗಿದೆ. ಪಿಸಿ ಆಕ್ಟ್ 1988, 120 ಬಿ, 477 ಎ ಅಡಿಯಲ್ಲಿ ಸಿಬಿಐ ಪ್ರಕರಣ ದಾಖಲಿಸಿದೆ.
ಚುನಾವಣೆಯಲ್ಲಿ ಉಚಿತ ಸೌಲಭ್ಯಗಳ ಭರವಸೆ ನೀಡುವ ರಾಜಕೀಯ ಪಕ್ಷಗಳ ಮಾನ್ಯತೆ ರದ್ದು ಕೋರಿ ಸಲ್ಲಿಸಿರುವ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ನಲ್ಲಿ ಮುಂದಿನ ವಿಚಾರಣೆಯನ್ನು ಆಗಸ್ಟ್ 17 ರಂದು ನಡೆಸಲಾಗುವುದು ಎಂದು ತಿಳಿಸಿದೆ.
ದೇಶದ ರೈತರು, ಸಣ್ಣ ಮತ್ತು ಅತೀ ಸಣ್ಣ ಉದ್ಯಮಿದಾರರು, ವ್ಯಾಪಾರಸ್ಥರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ರಾಷ್ಟ್ರೀಯ ಸಂಖ್ಯಾಶಾಸ್ತ್ರ ಕಚೇರಿ (NSO)ಯ ವರದಿ ಪ್ರಕಾರ ದೇಶದ ರೈತರ ಋಣದ ಪ್ರಮಾಣ ಕಳೆದ ಐದು ವರ್ಷದಲ್ಲಿ 60% ಅಧಿಕವಾಗಿದ್ದು, ಇದರಲ್ಲಿ ಕರ್ನಾಟಕ ರಾಜ್ಯದ ಕುಟುಂಬದ ಸರಾಸರಿ ಋಣದಭಾದೆ ಶೇಕಡ 1.25 ಲಕ್ಷದಷ್ಟು ಇದೆ.
ಆಮ್ ಆದ್ಮಿ ಪಕ್ಷವನ್ನು ಹುಟ್ಟು ಹಾಕಿ ದೆಹಲಿಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದು ಜನಪರ ಕೆಲಸ ಮಾಡುತ್ತಿರುವ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅರವಿಂದ್ ಕೇಜ್ರಿವಾಲ್ ಇದೀಗ ಮಹತ್ವದ ಘೋಷಣೆ ಒಂದನ್ನು ಮಾಡಿದ್ದಾರೆ.
ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ವಿತರಿಸುವ ಟೂಲ್ಕಿಟ್ ಖರೀದಿ ಹಗರಣಕ್ಕೆ ಸಂಬಂಧಿಸಿ ರಾಜ್ಯದ ಜನರನ್ನು ವಂಚಿಸುತ್ತಿರುವ ಸಚಿವ ಅಶ್ವಥ್ ನಾರಾಯಣ್ ರವರನ್ನು ತಕ್ಷಣವೇ ವಜಾಗೊಳಿಸಬೇಕೆಂದು ಮುಖ್ಯಮಂತ್ರಿಗಳಿಗೆ ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಆಗ್ರಹಿಸಿದರು.
ಕಮಲೇಶ್ ರಾಮನ್ ಅವರು ಮಹಾನಗರ ಪಾಲಿಕೆ ಅಧ್ಯಕ್ಷರಿಂದ ರಾಜ್ಯ ಉಪಾಧ್ಯಕ್ಷರ ವರೆಗೆ ಕಾಂಗ್ರೆಸ್ ಪಕ್ಷದ ಮಹಿಳಾ ವಿಭಾಗದ ಜವಾಬ್ದಾರಿಯನ್ನು ನಿಭಾಯಿಸಿದ್ದಾರೆ. ಇಬ್ಬರೂ ನಾಯಕರ ನಿರ್ಗಮನ ಉತ್ತರಾಖಂಡ ಕಾಂಗ್ರೆಸ್ಗೆ ಭಾರಿ ಹಿನ್ನಡೆಯಾಗಿದೆ.
ಎಸಿಬಿ ಕಾರ್ಯವೈಖರಿ ಕುರಿತು ಹೈಕೋರ್ಟ್ ನ್ಯಾಯಮೂರ್ತಿಗಳ ಇತ್ತೀಚಿನ ಹೇಳಿಕೆ ಅನುಮೋದಿಸಿ ಟ್ವೀಟ್ ಮಾಡಿರುವ ಭಾಸ್ಕರ್ ರಾವ್, ನ್ಯಾಯಮೂರ್ತಿ ಹೆಚ್.ಪಿ ಸಂದೇಶ್ ಅವರ ಅಭಿಪ್ರಾಯ 100% ಸತ್ಯವಾಗಿದ್ದು, ಹಿಂದಿನ ಕಾಂಗ್ರೆಸ್ ಸರ್ಕಾರ ಲೋಕಾಯುಕ್ತವನ್ನು ನಿಯಂತ್ರಿಸಲು ಭ್ರಷ್ಟಾಚಾರ ನಿಗ್ರಹದಳ (ಎಸಿಬಿ) ವನ್ನ ರಚಿಸಿತು ಎಂದು ಆರೋಪಿಸಿದ್ದಾರೆ.
ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಭಗವಂತ ಮಾನ್ ಅವರ ಮಕ್ಕಳಿಬ್ಬರೂ ಬಂದಿದ್ದರು. 2014ರ ಲೋಕಸಭೆ ಚುನಾವಣೆಯಲ್ಲಿ ಭಗವಂತ್ ಮಾನ್ ಅವರ ಪತ್ನಿ ಇಂದರ್ ಪ್ರೀತ್ ಕೌರ್ ಕೂಡ ಅವರೊಂದಿಗೆ ಪ್ರಚಾರ ಮಾಡಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.