PSI ಅಕ್ರಮ ನೇಮಕಾತಿ ಪ್ರಕರಣದ ಆರೋಪಿ ಎಡಿಜಿಪಿ ಅಮೃತ್ ಪೌಲ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಂಪಾಟ ಮಾಡಿದ್ದಾರೆ. ಖಿನ್ನತೆಗೊಳಗಾಗಿ ಜೈಲಿನಲ್ಲಿ ಕೂಗಾಡುತ್ತಿದ್ದಾರೆ. ಅಧಿಕಾರಿಗಳು ಅಮೃತ್ ಪೌಲ್ಗೆ ಪ್ರತ್ಯೇಕ ಕೊಠಡಿ ನೀಡಿದ್ದಾರೆ. ಖಿನ್ನತೆಗೊಳಗಾದ ಪೌಲ್ಗೆ ನಿಮ್ಹಾನ್ಸ್ನಲ್ಲಿ ತಜ್ಞ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.
ಜಕ್ಕೂರಿನ ಶಂಭುಲಿಂಗ ಹಾಗೂ ಬೊಮ್ಮಸಂದ್ರದ ಹೂಸ್ಕೂರ್ ನಿವಾಸಿ ಆನಂದ್ ಎಂಬುವರ ಮನೆಗಳ ಮೇಲೆ ಸಿಐಡಿ ತನಿಖಾಧಿಕಾರಿಗಳು ದಾಳಿ ನಡೆಸಿದ್ದಾರೆ.
ದಾಳಿ ವೇಳೆ ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿಪತ್ರಗಳು ದೊರೆತಿದೆ ಎಂದು ಹೇಳಲಾಗುತ್ತಿದ್ದು ಅವುಗಳನ್ನು ಸೀಜ್ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಅಮೃತ್ ಪೌಲ್ ಸೆಕ್ಷನ್ 164 ಅಡಿ ಮ್ಯಾಜಿಸ್ಟ್ರೇಟ್ ನ್ಯಾಯಾಧೀಶದ ಮುಂದೆ ಹೇಳಿಕೆ ನೀಡುತ್ತೇನೆ ಎಂದು ಹಠ ಹಿಡದಿದ್ದಾರೆ. ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿದರೆ ಸರ್ಕಾರದ ಸಚಿವರು, ಹಿಂದಿನ ಗೃಹ ಸಚಿವರು, ಮಾಜಿ ಸಿಎಂ ಪುತ್ರನ ಬಣ್ಣ ಬಯಲಾಗಲಿದೆ ಎಂಬ ಭೀತಿ ಇದೆ ಎಂದು ಹೇಳಲಾಗುತ್ತಿದೆ.
ಈ ಹಿಂದಿನ ಎಫ್ಡಿಎ, ತೋಟಗಾರಿಕೆ, ಪಶು ಸಂಗೋಪನೆ, ಲೋಕೋಪಯೋಗಿ ಹಾಗೂ ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳಿಗೆ ನಡೆದ ನೇಮಕಾತಿ ಪ್ರಕ್ರಿಯೆಯೂ ನ್ಯಾಯಬದ್ಧವಾಗಿ, ಕ್ರಮಬದ್ಧವಾಗಿ ನಡೆದಿಲ್ಲವೆಂಬ ಆರೋಪವಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯದಲ್ಲಿ ಸಂಚಲನ ಸೃಷ್ಟಿಸಿರುವ ಪಿಎಸ್ಐ ಅಕ್ರಮಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಅಧಿಕಾರಿ ಅಮೃತ್ ಪುಲ್ ಅವರನ್ನು ಅರೆಸ್ಟ್ ಮಾಡಲಾಗಿದೆ. ಅಮೃತ್ ಪೌಲ್ ಬಂಧನವಾಗ್ತಿದ್ದಂತೆ ಅಮಾನತು ಮಾಡಿ ಸರ್ಕಾರ ಆರ್ಡರ್ ಹೊರಡಿಸಿದೆ.
ಕೆಳ ಮತ್ತು ಹಿರಿಯ ಹಂತದ ಅಧಿಕಾರಿಗಳ ಜೊತೆಗೆ ಸರ್ಕಾರದ ಮಟ್ಟದಲ್ಲಿ ಅತ್ಯಂತ ಪ್ರಭಾವೀ ಸ್ಥಾನಗಳಲ್ಲಿರುವ ಕಿಂಗ್ಪಿನ್ಗಳನ್ನು ಸಿಐಡಿ ಅಧಿಕಾರಿಗಳು ಹಿಡಿಯಬೇಕಿದೆ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.