Rudra garuda purana: 2025 ರ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾದ, ಟೀಸರ್ ಮೂಲಕ ಈಗಾಗಲೇ ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ ರಿಷಿ ನಾಯಕನಾಗಿ ನಟಿಸಿರುವ `ರುದ್ರ ಗರುಡ ಪುರಾಣ’ ಚಿತ್ರಕ್ಕಾಗಿ ಪ್ರಮೋದ್ ಮರವಂತೆ ಬರೆದಿರುವ "ಅದೇನೇನೋ ಖುಷಿ ತಂದೆ, ಅದೇನೇನೋ ನಶೇ ತಂದೆ" ಎಂಬ ಹಾಡು ಇತ್ತೀಚಿಗೆ ಬಿಡುಗಡೆಯಾಗಿದೆ. ಕೃಷ್ಣಪ್ರಸಾದ್ ಸಂಗೀತ ನೀಡಿರುವ ಈ ಹಾಡನ್ನು ತಮ್ಮ ಅಮೋಘ ಗಾಯನದ ಮೂಲಕ ಹೆಸರಾಗಿರುವ ಸಂಜಿತ್ ಹೆಗ್ಡೆ ಹಾಗೂ ದೀಪಿಕಾ ವರದರಾಜನ್ ಹಾಡಿದ್ದಾರೆ. ಈಗಾಗಲೇ ಹಾಡುಗಳು ಹಾಗೂ ಟೀಸರ್ ಮೂಲಕ ಮೆಚ್ಚುಗೆ ಪಡೆದುಕೊಂಡಿರುವ ಈ ಚಿತ್ರ ಜನವರಿ 24ರಂದು ತೆರೆಕಾಣಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.