ಅಗ್ನಿಪಥ್ ಹಿಂಸಾತ್ಮಕ ಹೋರಾಟದ ಹಿಂದೆ ಪ್ರತಿಪಕ್ಷಗಳ ಪಿತೂರಿ ಇದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ ನೀಡಿದ್ದಾರೆ. ಕೆಲವರು ಈ ಯೋಜನೆ ಬಗ್ಗೆ ತಪ್ಪು ತಿಳುವಳಿಕೆ ಹೊಂದಿದ್ದಾರೆ. ಅಂಥವರಿಗೆ ಮನವರಿಕೆ ಮಾಡುವ ಪ್ರಯತ್ನ ಮಾಡ್ತೇವೆ . ಕೆಲವರು ಅಗ್ನಿಪಥ್ ಬಗ್ಗೆ ಅಪ ಪ್ರಚಾರ ಮಾಡ್ತಿದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ.
ರೈಲು ಸುಟ್ಟಿದ್ದಷ್ಟೇ ಅಲ್ಲ, ಇಡೀ ದೇಶಕ್ಕೆ ಬೆಂಕಿ ಹಚ್ಚಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.. ಅಗ್ನಿಪಥ್ ಯೋಜನೆ ಗಲಭೆ ವಿಚಾರ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ಅಧಿಕಾರದ ಲಾಲಸೆಗೆ ಕಾಂಗ್ರೆಸ್ ಪಕ್ಷ ಗೂಂಡಾಗಳ ಕೈಗೆ ಸಿಲುಕಿದೆ. ನಿರುದ್ಯೋಗಿ ಯುವಕರನ್ನು ಏಕೆ ದಾರಿ ತಪ್ಪಿಸುತ್ತೀರಾ..? ಎಂದು ಪ್ರಶ್ನಿಸಿದ್ದಾರೆ..
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಅಗ್ನಿಪಥ ಯೋಜನೆಗೆ ಸಂಬಂಧಿಸಿದಂತೆ ಮೂರು ಸೇನಾ ಮುಖ್ಯಸ್ಥರ ಜೊತೆ ಚರ್ಚೆ ನಡೆಸಿದರು. ಅದರ ನಂತರ ಇದೀಗ ಸೇನಾ ಅಧಿಕಾರಿಗಳು ಯೋಜನೆಗೆ ಸಂಬಂಧಿಸಿದ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.
ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (CAPF) ಮತ್ತು ಅಸ್ಸಾಂ ರೈಫಲ್ಸ್ ನೇಮಕಾತಿಯಲ್ಲಿ ಅಗ್ನಿಪಥ್ ಯೋಜನೆಯಡಿಯಲ್ಲಿ 4 ವರ್ಷಗಳನ್ನು ಪೂರೈಸಿದ ಅಗ್ನಿವೀರರಿಗೆ ಗೃಹ ವ್ಯವಹಾರಗಳ ಸಚಿವಾಲಯವು ಶೇ.10 ರಷ್ಟು ಮೀಸಲಾತಿಯನ್ನು ಪ್ರಕಟಿಸಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಮತ್ತು ಮಾಜಿ ಸೇನಾ ಮುಖ್ಯಸ್ಥ ಜನರಲ್ ವಿಕೆ ಸಿಂಗ್, ಹಿಂಸಾಚಾರದ ಹಿಂದೆ ಪ್ರತಿಪಕ್ಷಗಳ ಕೈವಾಡವಿದೆ. ಇದರಿಂದ ರಾಹುಲ್ ಗಾಂಧಿಯನ್ನು ಉಳಿಸುವ ಪ್ರಯತ್ನ ಇದಾಗಿದೆ ಎಂದು ಹೇಳಿದ್ದಾರೆ.
ಬಿಹಾರದಿಂದ ತೆಲಂಗಾಣದವರೆಗೆ ಜನ ಈ ಯೋಜನೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ತೆಲಂಗಾಣದ ಸಿಕಂದರಾಬಾದ್ನಲ್ಲಿ ನಡೆದ ಪ್ರತಿಭಟನೆ ವೇಳೆ ಪೊಲೀಸರು ನಡೆಸಿದ ಗುಂಡಿನ ದಾಳಿಗೆ ಯುವಕನೊಬ್ಬ ಬಲಿಯಾಗಿದ್ದಾನೆ.
ಅಗ್ನಿಪಥ ಯೋಜನೆಯನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಹಾಜಿಪುರ ಬರೌನಿ ರೈಲ್ವೆ ವಿಭಾಗದ ಮೊಹಿಯುದ್ದೀನ್ನಗರ ನಿಲ್ದಾಣದಲ್ಲಿ ಇಂದು ರೈಲಿನ ಕೆಲ ಬೋಗಿಗಳಿಗೆ ಬೆಂಕಿ ಹಚ್ಚಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.