ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್ಯು) ವಿದ್ಯಾರ್ಥಿ ಸಂಘದ ಮುಖ್ಯಸ್ಥೆ ಆಯಿಷೆ ಘೋಷ್ ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸಿಪಿಐ (ಎಂ) ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಆ ಮೂಲಕ ಚುನಾವಣೆಯಲ್ಲಿ ಸ್ಪರ್ಧಿಸಿದ ಜೆಎನ್ಯು ವಿದ್ಯಾರ್ಥಿ ಸಂಘದ ಮೊದಲ ಹಾಲಿ ಅಧ್ಯಕ್ಷೆ ಎನ್ನುವ ಖ್ಯಾತಿಗೆ ಪಾತ್ರರಾಗಿದ್ದಾರೆ.
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಇಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ ವಿದ್ಯಾರ್ಥಿ ಸಂಘದ (ಜೆಎನ್ಯುಎಸ್ಯು) ಅಧ್ಯಕ್ಷೆ ಐಶೆ ಘೋಷ್ ಅವರನ್ನು ದೆಹಲಿಯಲ್ಲಿ ಭೇಟಿಯಾದರು. ನಂತರ ಫೇಸ್ಬುಕ್ ಪೋಸ್ಟ್ನಲ್ಲಿ, ಸಂಘ ಪರಿವಾರ್ ದ ವಿರುದ್ಧ ರಾಜಿಯಾಗದ ಹೋರಾಟವನ್ನು ಹುಟ್ಟು ಹಾಕಿದ್ದಕ್ಕಾಗಿ ಅವರು ವಿದ್ಯಾರ್ಥಿಗಳನ್ನು ಶ್ಲಾಘಿಸಿದರು.
ಜೆಎನ್ಯು ಕ್ಯಾಂಪಸ್ ಜನಸಮೂಹ ದಾಳಿಯಲ್ಲಿ ದೆಹಲಿ ಪೊಲೀಸರು ಅವಳನ್ನು ಹೆಸರಿಸಿದ ಕೆಲವೇ ಕ್ಷಣಗಳಲ್ಲಿ, ಆಕೆಯ ಮೇಲೆ ಹಲ್ಲೆ ನಡೆದಿರುವುದನ್ನು ತೋರಿಸಲು ತನ್ನ ಬಳಿ ಪುರಾವೆಗಳಿವೆ ಎಂದು ಜವಾಹರಲಾಲ್ ನೆಹರು ವಿದ್ಯಾರ್ಥಿಗಳ ಸಂಘದ ಅಧ್ಯಕ್ಷೆ ಐಶೆ ಘೋಷ್ ಶುಕ್ರವಾರ ಹೇಳಿದ್ದಾರೆ.
ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ (ಜೆಎನ್ಯು) ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಮೇಲೆ ಹಲ್ಲೆ ನಡೆಸಿ ಸಾರ್ವಜನಿಕ ಮತ್ತು ಖಾಸಗಿ ಆಸ್ತಿಯನ್ನು ಧ್ವಂಸ ಮಾಡಿದ ಕೆಲವು ಮುಖವಾಡ ಧರಿಸಿದ್ದ ದುಷ್ಕರ್ಮಿಗಳನ್ನು ದೆಹಲಿ ಪೊಲೀಸರು ಗುರುತಿಸಿದ್ದಾರೆ ಎಂದು ಸರ್ಕಾರಿ ಮೂಲಗಳು ಬುಧವಾರ ತಿಳಿಸಿವೆ.
ಜೆಎನ್ಯು ವಿದ್ಯಾರ್ಥಿ ಸಂಘದ ಮುಖ್ಯಸ್ಥೆ ಐಶೆ ಘೋಷ್,ಎರಡು ಎಫ್ಐಆರ್ ಗೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಯಾವುದೇ ಪೊಲೀಸ್ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂಬ ವಿಶ್ವಾಸವಿದೆ, ಏಕೆಂದರೆ ತಾವು ಯಾವುದೇ ಹಿಂಸಾಚಾರದಲ್ಲಿ ಭಾಗಿಯಾಗಿಲ್ಲ ಎಂದು ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.