ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಧಾರವಾಡ (ಗ್ರಾಮೀಣ), ಕಲಘಟಗಿ, ಕುಂದಗೋಳ ಹಾಗೂ ನವಲಗುಂದ ಶಿಶು ಅಭಿವೃದ್ಧಿ ಯೋಜನೆಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಬಳ್ಳಾರಿ ತಾಲ್ಲೂಕಿನ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 18 ಅಂಗನವಾಡಿ ಕಾರ್ಯಕರ್ತೆ, 34 ಅಂಗನವಾಡಿ ಸಹಾಯಕಿ. ಕುರುಗೋಡು ತಾಲ್ಲೂಕಿನ ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ 04 ಅಂಗನವಾಡಿ ಕಾರ್ಯಕರ್ತೆ, 21 ಅಂಗನವಾಡಿ ಸಹಾಯಕಿರ ಹುದ್ದೆಗಳಿಗೆ ಗೌರವ ಸೇವೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು.
ರಾಜ್ಯ ಸರ್ಕಾರ 4000 ಅಂಗನವಾಡಿಗಳನ್ನು ಹೆಚ್ಚುವರಿಯಾಗಿ ನಿರ್ಮಿಸಲು ಅನುದಾನ ಬಿಡುಗಡೆ ಮಾಡಲಾಗಿದ್ದು, ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಶಿಗ್ಗಾಂವಿ ಕ್ಷೇತ್ರದಲ್ಲಿ ಸ್ಥಳ ಲಭ್ಯವಿರುವ ಕಡೆಗಳಲ್ಲಿ ಅಂಗನವಾಡಿ ಕೇಂದ್ರಗಳನ್ನು ಇನ್ನು ಆರು ತಿಂಗಳಲ್ಲಿ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ 4 ಅಂಗನವಾಡಿ ಕಾರ್ಯಕರ್ತೆಯರು ಮತ್ತು 19 ಸಹಾಯಕಿಯರ ಹುದ್ದೆಗೆ ಅರ್ಜಿ ಅಹ್ವಾನಿಸಲಾಗಿದೆ.
ಕೋಲಾರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 06 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ತಗಳಲ್ಲಿ ಖಾಲಿ ಇರುವ 50 ಅಂಗನವಾಡಿ ಕಾರ್ಯಕರ್ತೆಯರ ಮತ್ತು 171 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ದಾವಣಗೆರೆ, ಜಗಳೂರು, ಹೊನ್ನಾಳಿ ಮತ್ತು ಚನ್ನಗಿರಿ ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 13 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 46 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.