ಯುವತಿ ಅಂಜಲಿ ಕೊಲೆ ಪ್ರಕರಣದ ಆರೋಪಿಯನ್ನು ಬಂಧಿಸಲಾಗಿದೆ. ಕಾನೂನು ಪ್ರಕಾರ ಏನು ಕಠಿಣ ಶಿಕ್ಷೆ ಆಗಬೇಕು,ಅದನ್ನು ಮಾಡುತ್ತೇವೆ. ಇದರಲ್ಲಿ ಯಾವುದೇ ಮುಲಾಜಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಖಂಡಿಸಿ ಪ್ರತಿಭಟನೆ. ಎಬಿವಿಪಿ ಕಾರ್ಯಕರ್ತರಿಂದ ರಸ್ತೆ ತಡೆದು ಪ್ರತಿಭಟನೆ. ಚನ್ನಮ್ಮ ಸರ್ಕಲ್ನಲ್ಲಿ ರಸ್ತೆ ತಡೆ, ಸಂಚಾರ ಅಸ್ತವ್ಯಸ್ತ. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ. ಕೊಲೆ ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹ.
ಗದಗನಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ನೇಹಾ ಹಾಗೂ ಅಂಜಲಿ ಹತ್ಯೆ ಪ್ರಕರಣ ಕುರಿತು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು. ಈ ಪ್ರಕರಣದಲ್ಲಿ ಸಂಪೂರ್ಣವಾಗಿ ಪೊಲೀಸರ ವೈಫಲ್ಯವಿದೆ.
ನಸುಕಿನ ಜಾವ ನಸುನಿದ್ದೆಯಲ್ಲಿದ್ದ ಯುವತಿಯನ್ನು ವ್ಯಕ್ತಿಯೊಬ್ಬ ಚೂರಿಯಿಂದ ಇರಿದು ಹತ್ಯೆ ಮಾಡಿದ ಭೀಕರ ಘಟನೆಗೆ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ವೀರಾಪುರ ಓಣಿ ಸಾಕ್ಷಿಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.