ಮಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದವರ ಕೈಯಲ್ಲಿ ಮಾರಾಕಾಸ್ತ್ರಗಳಿರಲಿಲ್ಲ. ಅವರು ಯಾವುದೇ ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟ ಮಾಡಿರಲಿಲ್ಲ. ಅವರನ್ನು ಘೋಷಣೆ ಕೂಗುವುದಕ್ಕೆ ಬಿಡಬೇಕಿತ್ತು. ಆದರೆ ಅಲ್ಲಿ ಪೊಲೀಸರೇ ಹಿಂಸಾಚಾರಕ್ಕೆ ಕುಮ್ಮಕ್ಕು ಕೊಟ್ಟಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗಷ್ಟೇ ಆಂಜಿಯೋ ಪ್ಲಾಸ್ಟ್ ಸರ್ಜರಿಗೆ ಒಳಗಾಗಿದ್ದ ಸಿದ್ದರಾಮಯ್ಯ ಸದ್ಯ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದರು. ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿಯಲ್ಲಿದ್ದ ಸಿದ್ದರಾಮಯ್ಯ ಶಸ್ತ್ರಚಿಕಿತ್ಸೆಯ ಬಳಿಕ ಇದೇ ಮೊದಲ ಬಾರಿಗೆ ಹೊರಗಡೆ ಹೋಗುತ್ತಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಕೇಂದ್ರ-ರಾಜ್ಯ ಸರ್ಕಾರಗಳು ಪ್ರತಿಭಟನೆಗೆ ನಿರ್ಬಂಧ ಹೇರ ತೊಡಗಿರುವುದು ತುರ್ತುಪರಿಸ್ಥಿತಿಯ ಮುನ್ಸೂಚನೆ ಎಂಬಂತಿದೆ- ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ
ಗುರುವಾರ, ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ದೇಶಾದ್ಯಂತ ನಡೆದ ಭಾರಿ ಪ್ರತಿಭಟನೆಯಲ್ಲಿ ಕನಿಷ್ಠ ಮೂರು ಜನರು ಸಾವನ್ನಪ್ಪಿದರು, ಹಲವಾರು ಮಂದಿ ಗಾಯಗೊಂಡರು ಮತ್ತು ನೂರಾರು ಜನರನ್ನು ಬಂಧಿಸಲಾಯಿತು. ಅನೇಕ ಸ್ಥಳಗಳಲ್ಲಿ ಪ್ರತಿಭಟನಾ ಮೆರವಣಿಗೆಗಳು ಮತ್ತು ಸಭೆಗಳನ್ನು ಆಯೋಜಿಸಲಾಗಿದ್ದರಿಂದ ವ್ಯಾಪಕವಾದ ಸಾಮಾಜಿಕ ಮತ್ತು ರಾಜಕೀಯ ನಾಯಕರೂ ಕೂಡ ಪ್ರತಿಭಟನೆಯಲ್ಲಿ ಸೇರ್ಪಡೆಗೊಂಡರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.