ಹಿಂದೂ ಯುವಕನಿಗೆ ಮತಾಂತರ ಮಾಡಿದ ಆರೋಪದ ಮೇಲೆ ಹುಬ್ಬಳ್ಳಿಯಲ್ಲಿ ದಾಖಲಾಗಿದ್ದ ಪ್ರಕರಣ ಬೆಂಗಳೂರಿನ ಬನಶಂಕರಿ ಠಾಣೆಗೆ ವರ್ಗಾವಣೆಯಾಗಿದೆ. ಶ್ರೀಧರ್ ಎಂಬಾತನನ್ನ ಬಲವಂತವಾಗಿ ಮುಸ್ಲಿಂ ಧರ್ಮಕ್ಕೆ ಮತಾಂತರಕ್ಕೆ ಮುಂದಾಗಿದ್ದ, ಆರೋಪಿಗಳು ಬಲವಂತವಾಗಿ ಇಸ್ಲಾಂ ಧರ್ಮದಂತೆ 'ಕತ್ನಾ'ಮಾಡಿಸಿದ್ದರು.
ಮತಾಂತರ ನಿಷೇಧ ಕಾಯ್ದೆ ಆರ್.ಎಸ್.ಎಸ್ ಮತ್ತು ಬಿಜೆಪಿ ಸರ್ಕಾರದ ಕೂಸು.ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಆರ್.ಎಸ್.ಎಸ್ ಬೆಂಬಲಿಗರ ತಂಡ ಮತಾಂತರ ನಿಷೇಧ ಕರಡುಕಾಯ್ದೆ ರೂಪಿಸುವಂತೆ ಕಾನೂನು ಆಯೋಗಕ್ಕೆ ಮನವಿ ನೀಡಿತ್ತು.ನಮ್ಮ ಸರ್ಕಾರ ಆ ಕರಡನ್ನು ತಿರಸ್ಕರಿಸಿತ್ತು. ಈಗ ಮತ್ತೆ ಬಿಜೆಪಿ ಅದಕ್ಕೆ ಜೀವ ನೀಡುತ್ತಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ಬಿಜೆಪಿ ಮತ್ತು ಜೆಡಿಎಸ್ ನವರು ಮತಾಂತರ ನಿಷೇಧ ಕಾಯ್ದೆ ಕಾಂಗ್ರೆಸ್ ಸರ್ಕಾರದ ಕೂಸು ಎಂದು ಹೇಳಿ ತಮ್ಮ ಪಾಪವನ್ನು ನಮ್ಮ ತಲೆಗೆ ಕಟ್ಟುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ಯತೀಂದ್ರ ಸಿದ್ಧರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.