Man wipes rain water off modi cutouts : ಬಿಜೆಪಿ ನಾಯಕರು ತಮ್ಮ ಅಭ್ಯರ್ಥಿಗಳ ಪರ ರೋಡ್ಶೋ ನಡೆಸಿ ಪ್ರಚಾರ ಮಾಡುತ್ತಿದ್ದಾರೆ. ಹಳ್ಳಿಗಳಿಂದ ಹಿಡಿದು ನಗರದ ರಸ್ತೆಗಳಲ್ಲಿ ಮೋದಿ ಸೇರಿದಂತೆ ಅನೇಕ ಬಿಜೆಪಿ ನಾಯಕರ ಕಟೌಟ್ಗಳು ರಾರಾಜಿಸುತ್ತಿವೆ. ಮೊನ್ನೆ ಏಕಾಎಕಿ ಸುರಿದ ಮಳೆಯಿಂದಾಗಿ ನೆನೆದಿದ್ದ, ಪ್ರಧಾನಿ ನರೇಂದ್ರ ಮೋದಿಯವರ ಕಟೌಟ್ನ್ನು ವ್ಯಕ್ತಿಯೊಬ್ಬ ಒರೆಸಿದ ವಿಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
Sharath babu Health : ಹಿರಿಯ ನಟ ಶರತ್ ಬಾಬು ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೊದಲಿಗೆ ಬೆಂಗಳೂರಿನ ಆಸ್ಪತ್ರೆಗೆ ಶರತ್ ಬಾಬು ಅವರನ್ನು ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಇದೀಗ, ಅವರ ಆರೋಗ್ಯ ಮತ್ತಷ್ಟು ಹದಗೆಟ್ಟ ಹಿನ್ನೆಲೆ ಹೈದರಾಬಾದ್ನ ಆಸ್ಪತ್ರೆಗೆ ರವಾನಿಸಲಾಗಿದೆ.
ಶಿಡ್ಲಘಟ್ಟ ಸ್ವಾಭಿಮಾನಿ ಪರ್ವ ಶುರುವಾಗಿದೆ.. ಶಿಡ್ಲಘಟ್ಟ ನಗರ ಮತ್ತು ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳ ಒಂದು ಸಾವಿರಕ್ಕೂ ಅಧಿಕ ಕಾಂಗ್ರೆಸ್ ಮತ್ತು ಬಿಜೆಪಿ ಮುಖಂಡರು ಬಿಜೆಪಿ ಪಕ್ಷ ತ್ಯಜಿಸಿ ಸ್ಥಳೀಯ ಜೆಡಿಎಸ್ ಅಭ್ಯರ್ಥಿ ಬಿ ಎನ್ ರವಿಕುಮಾರ್ ನೇತೃತ್ವದಲ್ಲಿ JDS ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಮಾಜಿ ಸಚಿವರು ಹಾಗೂ ಕಲಘಟಗಿ - ಅಳ್ನಾವರ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಂತೋಷ್ ಲಾಡ್ ಅವರು ಹುಲಗಿನಕೊಪ್ಪ, ಸಂಗಟಿಕೊಪ್ಪ ಹಾಗೂ ಜುಂಜನಬೈಲ್ನಲ್ಲಿ ಬಿರುಸಿನ ಪ್ರಚಾರ ಕೈಗೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಸಂತೋಷ್ ಲಾಡ್, ನನ್ನ ಅಧಿಕಾರಾವಧಿಯಲ್ಲಿ ಪ್ರತಿಯೊಂದು ತಾಂಡಾ ಹಾಗೂ ಗ್ರಾಮಗಳ ಅಭಿವೃದ್ಧಿಯಾಗಿದೆ. ಅಧಿಕಾರ ಇಲ್ಲದೇ ಇದ್ದಾಗಲೂ ಕ್ಷೇತ್ರದ ಜನರಿಗಾಗಿ ಹಲವಾರು ಸಾಮಾಜಿಕ ಸೇವಾ ಕಾರ್ಯ ಕೈಗೊಂಡಿದ್ದೆ ಅಂತಾ ಹೇಳಿದ್ದಾರೆ.
ಚುನಾವಣೆಯಲ್ಲಿ ಕಾಂಗ್ರೆಸ್ ಹಣಿಯಲು ಬಿಜೆಪಿ ರಣತಂತ್ರ ಹೆಣೆದಿದೆ. ಬಿಜೆಪಿ ಪ್ರಮುಖರ ಜೊತೆ ಅಮಿತ್ ಶಾ ಡಿನ್ನರ್ ಮೀಟಿಂಗ್ ನಡೆಸಿದ್ದಾರೆ. ಸಿಎಂ ಬೊಮ್ಮಾಯಿ, ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು.
ನನ್ನ ನಾಮಪತ್ರ ಕ್ರಮಬದ್ಧವಾಗಿದೆ. ಯಾವುದೇ ತೊಂದರೆ ಇಲ್ಲ. ಎಲ್ಲವನ್ನೂ ಚುನಾವಣಾ ಅಧಿಕಾರಿಗಳು ಪರಿಶೀಲನೆ ಮಾಡಿದ್ದಾರೆ. ಇಲ್ಲಸಲ್ಲದವರ ಆರೋಪಕ್ಕೆ ಉತ್ತರ ಕೊಡಲಾಗಿದೆ ಎಂದು ಹುಬ್ಬಳ್ಳಿಯಲ್ಲಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕ್ರಾಂತಿಕಿರಣ್ ಹೇಳಿದ್ದಾರೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.