ಗುತ್ತಿಗೆದಾರ ಸಂಘದ ಅಧ್ಯಕ್ಷ ಕೆಂಪಣ್ಣ ಆರೋಪಕ್ಕೆ ಮತ್ತಷ್ಟು ಪುಷ್ಟಿ ಸಿಕ್ಕಿದೆ. ಚಿಕ್ಕೋಡಿ ಉಪವಿಭಾಗದ ಅಥಣಿಯಲ್ಲಿ 1 ವರ್ಷದಲ್ಲಿ 2 ಬಾರಿ ರಸ್ತೆ ನಿರ್ಮಾಣ ಮಾಡಲಾಗಿದೆ.. ಆದ್ರೆ ಎರಡು ಬಾರಿಯೂ ಕಳಪೆ ಕಾಮಗಾರಿ ನಡೆದಿದೆ. ರಸ್ತೆ ನಿರ್ಮಾಣದಲ್ಲಿ ಭಾರೀ ಗೋಲ್ಮಾಲ್ ಆರೋಪ ಕೇಳಿ ಬಂದಿದೆ.
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಹೊರವಲಯದಲ್ಲಿನ ಕೃಷ್ಣಾ ಬಡಾವಣೆಯಲ್ಲಿ ಚಿರತೆಯ ಮರಿಯನ್ನು ಹೋಲುವಂತ ಪ್ರಾಣಿಯೊಂದು ಸೆರೆ ಸಿಕ್ಕಿದೆ. ಸ್ಥಳೀಯರು ಚಿರತೆ ಮರಿ ಎಂದು ಆತಂಕ ವ್ಯಕ್ತಪಡಿಸುತ್ತಿದ್ದಂತೆ ಸ್ಥಳಕ್ಕೆ ಅಥಣಿ ವಲಯ ಅರಣ್ಯಾಧಿಕಾರಿಗಳು ಬಂದು ಪರಿಶೀಲಿಸಿದಾಗ ಇದೊಂದು ಪುನುಗು ಬೆಕ್ಕು(ಸಿವೆಟ್ ಕ್ಯಾಟ್) ತಿಳಿಸುತ್ತಿದ್ದಂತೆ ಸ್ಥಳಿಯರು ನಿಟ್ಟುಸಿರು ಬಿಟ್ಟಿದ್ದಾರೆ.
ವಾಯುವ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣಾ ಪ್ರಕ್ರಿಯೆ ಚಾಲ್ತಿಯಲ್ಲಿದ್ದು ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ, ಅಥಣಿ ತಹಶಿಲ್ದಾರ ದುಂಡಪ್ಪ ಕೋಮಾರ್ ಅವರ ವಿರುದ್ಧ ಚುನಾವಣಾ ಇಲಾಖೆ ಕಠಿಣ ಕ್ರಮ ಕೈಗೊಂಡಿದೆ. 2022 ರ ಪರಿಷತ್ ಚುನಾವಣೆ ಪೂರ್ವದಲ್ಲಿ ಪದವೀಧರ ಹಾಗೂ ಶಿಕ್ಷಕರ ಕ್ಷೆತ್ರಕ್ಕೆ ಶಿಕ್ಷಕರು ಹಾಗೂ ಪದವೀಧರು ಮತದಾರ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಾಯಿಸಲು ಸಲ್ಲಿಸಿದ್ದ ಅರ್ಜಿಗಳನ್ನು ನೀಡಿದ್ದರು ಆ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರಿಸದೆ ಕರ್ತವ್ಯಲೋಪ ಎಸಗಿದ ಆರೋಪದಲ್ಲಿ ಅವರನ್ನು ತಕ್ಷಣವೇ ಜಾರಿಯಾಗುವಂತೆ ಚುನಾವಣಾ ಅಧಿಕಾರಿ ಕಠಿಣ ಕ್ರಮ ಕೈಗೊಂಡಿದ್ದಾರೆ. ಜೊತೆಗೆ ಅಥಣಿ ತಹಶೀಲ್ದಾರ್ ಹುದ್ದೆಗೆ ಗೋಠೆಕರ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಝುಂಜರವಾಡ ಗ್ರಾಮದಲ್ಲಿ ಈ ಜಾತ್ರೆ ಪ್ರತೀ ವರ್ಷ ನಡೆಯುತ್ತೆ. ಪ್ರತೀ ವರ್ಷ ಬುದ್ದ ಪೌರ್ಣಿಮೆಯಂದು ಗ್ರಾಮದಲ್ಲಿ ಜಾತ್ರೆ ಆಚರಿಸಲಾಗುತ್ತದೆ. ಮಹಾತಪಸ್ವಿ ತ್ರಿಕಾಲ ಜ್ಞಾನಿಗಳಾದ ಅಪ್ಪಯ್ಯ ಹಾಗೂ ಚಂದ್ರಯ್ಯ ಸ್ವಾಮೀಜಿಗಳ ಜಾತ್ರಾ ಮಹೋತ್ಸವ ಅತೀ ವಿಜೃಂಭಣೆಯಿಂದ ಜರುಗುತ್ತದೆ. ಮೂರು ದಿನಗಳ ಕಾಲ ನಡೆಯುವ ಅದ್ದೂರಿ ಜಾತ್ರೆಗೆ ರಾಜ್ಯವಲ್ಲದೆ ಹೊರರಾಜ್ಯಗಳಿಂದ ಸಾವಿರಾರು ಭಕ್ತರು ಆಗಮಿಸುತ್ತಾರೆ.
ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಜನವಾಡ ಗ್ರಾಮದಲ್ಲಿ ಬೃಹತ್ ಮೊಸಳೆಯೊಂದು ಪ್ರತ್ಯಕ್ಷಗೊಂಡಿದ್ದು, ಜನ ಭಯಭೀತರಾಗಿದ್ದಾರೆ. ಮೊಸಳೆ ಸರಿ ಸುಮಾರು 15 ಅಡಿಯಷ್ಟು ಉದ್ದವಾಗಿದ್ದು, ಅಥಣಿ ಅರಣ್ಯ ಇಲಾಖೆ ಅಧಿಕಾರಿ ಸಿಬ್ಬಂದಿ ಹಾಗೂ ಸ್ಥಳಿಯರು ಮೊಸಳೆ ರಕ್ಷಣೆ ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.