ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಮಂಡಿಸಿರುವ ಬಜೆಟ್ ಬಿಜೆಪಿಯ ಚುನಾವಣಾ ಪ್ರಣಾಳಿಕೆಯಂತೆ ಇದೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಕಟಿಸಿದ್ದ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳಲ್ಲಿ ಶೇಕಡ 90ರಷ್ಟು ಅನುಷ್ಠಾನಕ್ಕೆ ಬಂದಿಲ್ಲ. ಈ ಬಜೆಟ್ ಕೂಡ ಅದೇ ರೀತಿ ಅನುಷ್ಠಾನದ ಬದ್ಧತೆ ಇಲ್ಲದ ಘೋಷಣೆಗಳ ಪುಸ್ತಕದಂತೆ ಕಾಣುತ್ತಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ.
ಚುನಾವಣೆಯಲ್ಲಿ ನಡೆದ ಸಾಲು ಸಾಲು ಅಕ್ರಮಗಳು,ಆಡಳಿತ ಯಂತ್ರದ ದುರ್ಬಳಕೆ,ಪ್ರಜಾತಂತ್ರ ವ್ಯವಸ್ಥೆಯನ್ನೇ ಬುಡಮೇಲು ಮಾಡಿದ ಕೇಂದ್ರದ ಪ್ರಭುತ್ವಕ್ಕೆ ಕಾಲ ಉತ್ತರಿಸಲಿದೆ ಎಂದು ವಿಧಾನಪರಿಷತ್ ವಿಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಅವರು ಅಭಿಪ್ರಾಯಪಟ್ಟಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ಎಲ್ಲಾ ಜಾತಿ ಧರ್ಮದವರನ್ನು ಅಧ್ಯಕ್ಷರನ್ನಾಗಿ ಮಾಡಿದೆ.ಹೀಗಾಗಿ ಬಿಜೆಪಿ, ಖಾಕಿ ಚಡ್ಡಿ ಹಾಗೂ ಕರಿ ಟೋಪಿ ಅವರಿಂದ ಆಂತರಿಕ ಪ್ರಜಾಪ್ರಭುತ್ವದ ನಾವು ಕಲಿಯುವ ಅಗತ್ಯವಿಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕರಾದ ಶ್ರೀ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ, ಆರ್ ಎಸ್ ಎಸ್ ನವರು ತಿನ್ನೋದು ಸೆಗಣಿ ಕುಡಿಯೋದು ಗಂಜಲ ಅದಕ್ಕೆ ಅವರ ತಲೆಯಲ್ಲಿ ಗೊಬ್ಬರ ತುಂಬಿಕೊಂಡಿದೆ ಎಂದು ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ಕಿಡಿಕಾರಿದರು.
ಕಾಂಗ್ರೆಸ್ ಪಕ್ಷ ಮೋದಿ ಹಾಗೂ ಗಡಿಪಾರ್ ಅಮಿತ್ ಶಾ ಅವರ ಧಮಕಿಗೆ ಹೆದರುವುದಿಲ್ಲ. ಸೋನಿಯಾ ಗಾಂಧಿ ಅವರನ್ನು ಮುಟ್ಟಿದರೆ ಸರ್ಕಾರ ಚೂರಾಗಲಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ನೆರೆ ಸಂತ್ರಸ್ತರ ಪರಿಹಾರದಲ್ಲೂ ಸರ್ಕಾರದಿಂದ ತಾರತಮ್ಯ ಅಮಾನವೀಯ ನಡೆಯಾಗಿದೆ, ಸರ್ಕಾರ ಈಗ ನಿರಾಶ್ರಿತರ ನೆರವಿಗೆ ಧಾವಿಸಬೇಕೆಂದು ವಿಧಾನಪರಿಷತ್ ವಿಪಕ್ಷದ ನಾಯಕ ಬಿಕೆ ಹರಿಪ್ರಸಾದ್ ಆಗ್ರಹಿಸಿದ್ದಾರೆ.
ದೇಶಕ್ಕೆ ಮಾದರಿಯಾಗಬೇಕಿದ್ದ ರಾಜ್ಯದ ಶಿಕ್ಷಣ ಇಲಾಖೆಯನ್ನ ವಿವಾದಿತ ಕೇಂದ್ರವನ್ನಾಗಿಸಿದ ಕೀರ್ತಿ ಶಿಕ್ಷಣ ಸಚಿವ ಬಿಸಿ ನಾಗೇಶ್ ಗೆ ಸಲ್ಲಬೇಕು ಎಂದು ವಿಧಾನಪರಿಷತ್ ವಿಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಕಿಡಿ ಕಾರಿದ್ದಾರೆ.
ಪಠ್ಯ ಪುಸ್ತಕದಲ್ಲಿ ಉದ್ದೇಶಪೂರ್ವಕವಾಗಿ ನಾಡಿನ ಸಾಂಸ್ಕೃತಿಕ ನಾಯಕರಿಗೆ ಬಿಜೆಪಿ ಸರ್ಕಾರ ಮಾಡಿರುವ ಘನಘೋರ ಅಪರಾಧಗಳಿಂದ ತಪ್ಪಿಸಿಕೊಳ್ಳಲು ಹೆಣಗಾಡುತ್ತಿದೆ. ಟಿಪ್ಪು ಸುಲ್ತಾನರ ವಿಷಯವನ್ನ ಮತ್ತೆ ಮುನ್ನಲೆಗೆ ತಂದು ವಿಷಯವನ್ನ ಡೈವರ್ಟ್ ಮಾಡಲು ಸಚಿವ ಆರ್ ಅಶೋಕ ಪ್ರಯತ್ನಿಸುತ್ತಿದ್ದಾರೆ. ಹೀಗಾಗಿಯೇ ಟಿಪ್ಪು ಸುಲ್ತಾನ್ ಎಂದರೆ ಸಿದ್ರಾಮಯ್ಯನವರಿಗೆ ಮೈಮೇಲೆ ಬಂದವರಂತೆ ಆಡುತ್ತಾರೆ ಎಂದಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಟೀಕಾ ಪ್ರಹಾರ ನಡೆಸಿದ್ದಾರೆ.
ಈ ನೆಲದ ಅಸ್ಮಿತೆಯಾಗಿರುವ ಬಸವಣ್ಣ, ನಾರಾಯಣ ಗುರು, ಕುವೆಂಪುರಾದಿಯಾಗಿ ಸ್ವಾತಂತ್ರ್ಯ ಹೋರಾಟಗಾರರು, ಸಾಮಾಜಿಕ ಸುಧಾರಕರ ಬಗ್ಗೆ ತುಚ್ಛಭಾವನೆಯಿಂದ ನೋಡಿದ್ದಲ್ಲದೇ, ಪಠ್ಯ ಪುಸ್ತಕದಲ್ಲಿ ನಾಗಪುರದ ಹಿಡನ್ ಅಜೆಂಡಾಗಳನ್ನು ತುರುಕಿರುವುದು ಜಗಜ್ಜಾಹೀರಾಗುತ್ತಿದೆ. ಒಬ್ಬ ಟ್ರೋಲರ್ ಕಡೆಯಿಂದ ಇಂತಹ ಕೆಲಸ ಮಾಡಿಸಿರುವ ಸರ್ಕಾರದ ದಾರಿದ್ರ್ಯತನಕ್ಕೆ ರಾಜ್ಯದ ಸಾಕ್ಷಿ ಪ್ರಜ್ಞೆಯಂತಿರುವ ಸಾಹಿತಿಗಳು, ಸ್ವಾಮೀಜಿಗಳು, ಬರಹಗಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ರಾಜ್ಯದ ಇತಿಹಾಸದಲ್ಲಿಯೇ ಈ ಮಟ್ಟದ ಆಕ್ರೋಶ ಎಂದೂ ಬಂದಿರಲಿಲ್ಲ ಎಂದರು.
ದ್ವೇಷ ರಾಜಕೀಯದ ವಿರುದ್ಧ, ನೆಹರೂ ಅವರು ಕಟ್ಟಿದ ಸೌಹಾರ್ದತೆಯ ಆಲೋಚನೆಯ ಪರವಾಗಿ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮನನ ಮಾಡಿಕೊಳ್ಳಬೇಕಿದೆ. ಈ ದೇಶದ ಬಹುತ್ವದ ಆಶಯವನ್ನ ಉಳಿಸಬೇಕಿದೆ ಎಂದು ವಿಧಾನ ಪರಿಷತ್ ವಿಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಅಭಿಪ್ರಾಯಪಟ್ಟಿದ್ದಾರೆ.
ಸಚಿವ ಬಿ.ಸಿ.ನಾಗೇಶ್ ಅವರ ವಿರುದ್ಧ ಟೀಕಾ ಪ್ರಹಾರ ನಡೆಸಿರುವ ವಿಧಾನ ಪರಿಷತ್ ವಿಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ 'ಇತಿಹಾಸದ ಬಗ್ಗೆ ನಂಬಿಕೆಯೂ ಇಲ್ಲದ, ಕನಿಷ್ಠ ಅದರ ತಿಳುವಳಿಕೆಯೂ ಇಲ್ಲದ ಶಿಕ್ಷಣ ಸಚಿವ ನಾಗೇಶ್ ಅವರು ಇತಿಹಾಸದ ಪಾಠ ಹೇಳಲು ಬರುತ್ತಿದ್ದಾರೆ.ಬಿ ಸಿ ನಾಗೇಶ್ ಅವರೇ ನಾನು ನಿಮ್ಮ ಹಾವಿನಪುರದಲ್ಲಿ ತರಬೇತಿ ಪಡೆದವನೂ ಅಲ್ಲ, ವಾಟ್ಸಪ್ ಫಾರ್ವರ್ಡ್ ಯುನಿವರ್ಸಿಟಿಯ ವಿದ್ಯಾರ್ಥಿಯೂ ಅಲ್ಲ' ಎಂದು ಹರಿಪ್ರಸಾದ್ ತಿರುಗೇಟು ನೀಡಿದ್ದಾರೆ.
ಹೆಗಡೆವಾರ್ ಅವರ ಲೇಖನವನ್ನು ಪಠ್ಯದಲ್ಲಿ ಸೇರಿಸಿರುವ ಸರ್ಕಾರದ ನಡೆಗೆ ವಿಧಾನ ಪರಿಷತ್ ನ ವಿಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಅವರು ಆದರ್ಶ ಪುರುಷರು ಸಂವಿಧಾನ, ಪ್ರಜಾಪ್ರಭುತ್ವದ ಬಗ್ಗೆ ಗೌರವ ಕೊಡುವುದಿಲ್ಲವೇಕೆ?" ಎಂದು ಪ್ರಶ್ನಿಸಿದ್ದಾರೆ.
ಬಸನಗೌಡ ಪಾಟೀಲ್ ಯತ್ನಾಳ್ ಅವರು ಹಿರಿಯ ಶಾಸಕರು ಹಾಗೂ ಕೇಂದ್ರದಲ್ಲಿ ಮಂತ್ರಿಯಾಗಿದ್ದಂತವರು ಈಗ ಅವರು ನೀಡಿರುವ ಹೇಳಿಕೆ ಬೇಜಾಬ್ದಾರಿ ಹೇಳಿಕೆಯಲ್ಲ,ಅದು ಜವಾಬ್ದಾರಿಯುತವಾಗಿ ನೀಡಿರುವ ಹೇಳಿಕೆ ಎಂದು ವಿಧಾನಪರಿಷತ್ ವಿಪಕ್ಷದ ನಾಯಕ ಬಿಕೆ ಹರಿಪ್ರಸಾದ್ ಅವರು ಅಭಿಪ್ರಾಯಪಟ್ಟಿದ್ದಾರೆ.
ವಿಧಾನ ಪರಿಷತ್ ಸಭಾಪತಿ ಸ್ಥಾನ ಸಾಂವಿಧಾನಿಕ ಹುದ್ದೆ.ಬಸವರಾಜ್ ಹೊರಟ್ಟಿಯವರು ಸಭಾಪತಿ ಸ್ಥಾನದಲ್ಲಿರುವಾಗಲೇ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆಂದು ಘೋಷಿಸಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರ ಎಂದು ವಿಧಾನ ಸೌಧದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಬಿ.ಕೆ ಹರಿಪ್ರಸಾದ್ ಕಿಡಿ ಕಾರಿದರು.
ಪಿಎಸೈ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಸರ್ಕಾರವೇ ಒಪ್ಪಿಕೊಂಡಾಯಿತು.ಹಾಗಾಗಿ ಈಗ ಅದಕ್ಷ ಗೃಹ ಸಚಿವ ಆರಗ ಜ್ಞಾನೇಂದ್ರ ಕೂಡಲೇ ರಾಜೀನಾಮೆ ನೀಡಬೇಕು ಎಂದು ವಿಧಾನ ಪರಿಷತ್ ವಿಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಆಗ್ರಹಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.