ಬೆಂಗಳೂರಿನಲ್ಲಿ ಕಳೆದೊಂದು ವಾರದಿಂದ ಭಾರೀ ಮಳೆಯಾಗುತ್ತಿದ್ದು, ಇದರಿಂದಾಗಿ ನಗರವೆಲ್ಲಾ ಜಲಾವೃತವಾಗಿದೆ. ವರದಿಯ ಪ್ರಕಾರ, ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದಿಂದಾಗಿ ಈ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಉದ್ಯಾನನಗರಿಯಲ್ಲಿ ಅಕ್ಟೋಬರ್ 25ರವರೆಗೆ ಒಂದು ವಾರ ಮಳೆಯಾಗುವ ನಿರೀಕ್ಷೆಯಿದೆ.
Bengaluru Rain Updates: ಬೆಂಗಳೂರು, ಮಂಡ್ಯ, ರಾಮನಗರ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ & ಹಾವೇರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದು ಮತ್ತು ನಾಳೆ ನಗರದಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮಳೆ ಹಾಗೂ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಷ್ಟೇ ಅಲ್ಲದೆ, ದಕ್ಷಿಣ ಕನ್ನಡ, ಉಡುಪಿ, ಪಶ್ಚಿಮ ಘಟ್ಟದ ಜಿಲ್ಲೆಗಳಿಗೆ ಭಾರೀ ಮಳೆಯ ಮುನ್ಸೂಚನೆ ಇದ್ದು, ಗುಡುಗು ಹಾಗೂ ಸಿಡಿಲಿನ ಮುನ್ನೆಚ್ಚರಿಕೆ ನೀಡಲಾಗಿದೆ.
ವಾತಾವರಣದಲ್ಲಿ 50 ವರ್ಷಗಳ ದಾಖಲೆಯ ಅತ್ಯಂತ ಕಡಿಮೆ ಉಷ್ಣಾಂಶ ಇದಾಗಿದೆ. 1972ರ ನಂತರ ಇದೇ ಮೊದಲು ಇಷ್ಟು ಪ್ರಮಾಣದ ಚಳಿ ವಾತಾವರಣ ಇದ್ದು, ಇದು ಸಾಮಾನ್ಯಕ್ಕಿಂತ 10 ಡಿಗ್ರಿ ಕಡಿಮೆ ಉಷ್ಣಾಂಶ ಎಂದು ಹವಾಮಾನ ಇಲಾಖೆಯ ತಜ್ಞರಾದ ಸದಾನಂದ ಅಡಿಗ ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.