ಕಾಂಗ್ರೆಸ್ ಸರ್ಕಾರ ನೂರು ದಿನಗಳಲ್ಲಿ ಜನರ ವಿಶ್ವಾಸ ಗಳಿಸುವುದು ದೂರದ ಮಾತು ಅವರ ಶಾಸಕರ ವಿಶ್ವಾಸವನ್ನೇ ಕಳೆದುಕೊಂಡಿದೆ.ಎಲ್ಲ ರಂಗದಲ್ಲಿ ವೈಫಲ್ಯವೇ ಇವರ ಸಾಧನೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.
ರೈತರು ಬರಗಾಲದ ಬವಣೆಯಲ್ಲಿ ಸಿಕ್ಕರೂ ಕೂಡ ಸರ್ಕಾರ ಆ ಕಡೆ ತಿರುಗಿ ನೋಡಿಲ್ಲ. ರೈತರ ಆತ್ಮಹತ್ಯೆ ಮತ್ತೆ ಪ್ರಾರಂಭವಾಗಿದೆ. ಕೃಷಿ ಉತ್ಪಾದನೆಗೆ ಪೆಟ್ಟು ಬೀಳುವ ಎಲ್ಲಾ ಲಕ್ಷಣಗಳು ಕಾಣುತ್ತಿದೆ. ಪೂರ್ಣ ಪ್ರಮಾಣದ ಗ್ಯಾರಂಟಿ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಮಾಜಿ ಸಿಎಂ ಬೊಮ್ಮಾಯಿ ಟೀಕಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.