ಈ ವಾರವಿಡೀ ಬಿಗ್ಬಾಸ್ ಮನೆ ಪ್ರಕ್ಷುಬ್ದವಾಗಿಯೇ ಇತ್ತು. ರಕ್ಕಸರು-ಗಂಧರ್ವರ ನಡುವಿನ ಜಿದ್ದಾಜಿದ್ದಿ ವೈಯಕ್ತಿಕ ಮಟ್ಟಕ್ಕೆ ಇಳಿದು, ದೈಹಿಕವಾಗಿ ಗಾಯಗೊಳ್ಳುವ ಅತಿರೇಕಕ್ಕೂ ಹೋಯಿತು. ಪರಿಣಾಮವಾಗಿ ಸಂಗೀತಾ ಮತ್ತು ಪ್ರತಾಪ್ ಇಬ್ಬರೂ ಆಸ್ಪತ್ರೆ ಸೇರಿಕೊಳ್ಳುವಂತಾಗಿತ್ತು. ಅದೆಲ್ಲದ ಪರಿಣಾಮವಾಗಿ ಈ ವಾರದ ‘ಕಿಚ್ಚನ ಪಂಚಾಯ್ತಿ’ಯಲ್ಲಿ ಸುಂಟರಗಾಳಿಯೇ ಏಳುವ ಸಂಭವವಿದೆ. ಇದರ ಸೂಚನೆ JioCinema ಬಿಡುಗಡೆ ಮಾಡಿರುವ ಪ್ರೋಮೊದಲ್ಲಿ ಸಿಕ್ಕಿದೆ.
Bigg Boss Kannada Season 10: ತನಿಷಾ ಪರ ಕಾರ್ತಿಕ್ ವಾದ ಮಾಡಿದ್ದಾರೆ. ಅದಕ್ಕೆ ವಿರುದ್ಧವಾಗಿ ವರ್ತೂರು ಸಂತೋಷ್, ‘ನಾವಿಲ್ಲಿ ತ್ಯಾಗಮೂರ್ತಿಗಳಾಗೋಕೆ ಬಂದಿಲ್ಲ. ತನಿಷಾನ ನಾನು ಬೇಕಂತ ಹೋಗಿ ತಳ್ಳಿಲ್ಲ. ಹಾಗಾಗಿ ಅವ್ರಿಗೆ ಇನ್ನೊಂದು ಚಾನ್ಸ್ ಸಿಗಲಿ ಎಂದೂ ಹೇಳಲ್ಲ’ ಎಂದು ಖಡಕ್ಕಾಗಿ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.