ಮತಾಂತರ ನಿಷೇಧ ಕಾಯ್ದೆ ಆರ್.ಎಸ್.ಎಸ್ ಮತ್ತು ಬಿಜೆಪಿ ಸರ್ಕಾರದ ಕೂಸು.ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಆರ್.ಎಸ್.ಎಸ್ ಬೆಂಬಲಿಗರ ತಂಡ ಮತಾಂತರ ನಿಷೇಧ ಕರಡುಕಾಯ್ದೆ ರೂಪಿಸುವಂತೆ ಕಾನೂನು ಆಯೋಗಕ್ಕೆ ಮನವಿ ನೀಡಿತ್ತು.ನಮ್ಮ ಸರ್ಕಾರ ಆ ಕರಡನ್ನು ತಿರಸ್ಕರಿಸಿತ್ತು. ಈಗ ಮತ್ತೆ ಬಿಜೆಪಿ ಅದಕ್ಕೆ ಜೀವ ನೀಡುತ್ತಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
"ಭೂ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆ ಎದುರಿಸುತ್ತಿರುವ ಬೈರತಿ ಬಸವರಾಜು ಅವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಮತ್ತು ಸದನದಲ್ಲಿ ಈ ವಿಚಾರದ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕು ಎಂದು ಆಗ್ರಹಿಸುತ್ತೇನೆ" ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ.
ಕೈಗಾರಿಕಾ ಪ್ರದೇಶ ಅಭಿವೃದ್ಧಿಗೆ ಭೂಮಿ ಕಳೆದುಕೊಂಡ ರೈತರ ಮಕ್ಕಳಿಗೆ ಉದ್ಯಮಗಳಲ್ಲಿ ಈಗಾಗಲೇ ಡಾ.ಸರೋಜಿನಿ ಮಹಿಷಿ ವರದಿ ಅನುಸಾರ ಉದ್ಯೋಗಗಳನ್ನು ಒದಗಿಸಲಾಗುತ್ತಿದೆ.ಉದ್ಯೋಗ ದೊರೆಯದ ಅಭ್ಯರ್ಥಿಗಳ ಪಟ್ಟಿ ನೀಡಿದರೆ ವಿವಿಧ ಕೈಗಾರಿಕೆಗಳಲ್ಲಿ ಉದ್ಯೋಗ ನೀಡಲು ಸೂಚಿಸಿ ಶಿಫಾರಸ್ಸು ಮಾಡಲಾಗುವುದು ಎಂದು ಬೃಹತ್ ಮತ್ತು ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಹೇಳಿದರು.
ಬಿಜೆಪಿಯವರಿಗೆ ಜಾತಿ ಭೇದ,ಧರ್ಮಭೇದದಲ್ಲಿ ನಂಬಿಕೆ ಹೆಚ್ಚು. ಹೀಗಾಗಿಯೇ ಮತಾಂತರ ನಿಷೇಧದಂತಹ ಕಾಯಿದೆಗಳ ಜಾರಿಗೆ ಮುಂದಾಗಿದೆ.ಇದರಲ್ಲಿ ಆರ್ ಎಸ್ ಎಸ್ ನ ಹುನ್ನಾರವೂ ಅಡಗಿದೆ ಎಂದು ಪ್ರತಿಪಕ್ಷದ ಸಿದ್ಧರಾಮಯ್ಯ ಟೀಕಾ ಪ್ರಹಾರ ನಡೆಸಿದ್ಧಾರೆ.
2016 ರ ಬೆಳಗಾವಿ ಅಧಿವೇಶನಕ್ಕೆ 20 ಕೋಟಿ ರೂ. ಹಾಗೂ 2017 ರ ಅಧಿವೇಶನಕ್ಕೆ 21.57 ಕೋಟಿ ರೂ. ಖರ್ಚು ಮಾಡಿ ದುಂದು ವೆಚ್ಚ ಮಾಡಲಾಗಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಎಸ್.ಮೂರ್ತಿ ಅವರನ್ನು ಅಮಾನತು ಮಾಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.