ರಾಜ್ಯ ಪುನರ್ ರಚನಾ ಕಾಯ್ದೆ 1956 ರಲ್ಲಿ ರೂಪಿಸಿ ಇಷ್ಟು ವರ್ಷಗಳಾಗಿವೆ. ಎರಡೂ ಕಡೆ ಜನ ನೆಮ್ಮದಿಯಿಂದಿದ್ದಾರೆ. ಅವರ ರಾಜಕಾರಣಕ್ಕಾಗಿ ಈ ರೀತಿ ಯ ಹೇಳಿಕೆಗಳನ್ನು ಹಾಗೂ ನಿರ್ಣಯಗಳನ್ನು ನೀಡುತ್ತಿದ್ದಾರೆ. ನಮ್ಮ ನಿಲುವಿನಲ್ಲಿ ಸ್ಪಷ್ಟತೆ ಇದೆ.ಕರ್ನಾಟಕದ ಒಂದಿಂಚೂ ಜಾಗವನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ.
ಕರ್ನಾಟಕ ಮತ್ತು ಮಹಾರಾಷ್ಟ್ರದ ಮುಖ್ಯಮಂತ್ರಿಗಳು ದಶಕಗಳಿಂದ ನಡೆಯುತ್ತಿರುವ ರಾಜ್ಯ ಗಡಿ ವಿವಾದದ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಅಂತಿಮ ನಿರ್ಣಯ ನೀಡುವವರೆಗೆ ತಮ್ಮ ಹಕ್ಕುಗಳನ್ನು ಪ್ರತಿಪಾದಿಸದಿರಲು ಒಪ್ಪಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಉಭಯ ನಾಯಕರೊಂದಿಗಿನ ಸಭೆಯ ನಂತರ ಇಂದು ಹೇಳಿದ್ದಾರೆ.
ಎರಡು ರಾಜ್ಯಗಳ ಮಧ್ಯೆ ಇರುವ ಪರಿಸ್ಥಿತಿಯಲ್ಲಿ ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಬರುವುದು ಸೂಕ್ತವಲ್ಲ. ಅವರು ಇಲ್ಲಿಗೆ ಬರಬಾರದು ಎಂಬ ಸಂದೇಶವನ್ನು ಈಗಾಗಲೇ ನಮ್ಮ ಮುಖ್ಯ ಕಾರ್ಯದರ್ಶಿಗಳು ಅಲ್ಲಿನ ಮುಖ್ಯ ಕಾರ್ಯದರ್ಶಿಗಳಿಗೆ ಫ್ಯಾಕ್ಸ್ ಮೂಲಕ ಕಳುಹಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸರ್ವೋಚ್ಛ ನ್ಯಾಯಾಲಯದಲ್ಲಿ ಕರ್ನಾಟಕದ ವಾದವನ್ನು ಮಂಡಿಸಲು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ನಮ್ಮ ವಾದಕ್ಕೆ ಗಟ್ಟಿಯಾದ ಆಧಾರವೂ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.