ಬೆಳಗಾವಿ ಸುವರ್ಣಸೌಧದ ಬಳಿ ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ನಮ್ಮ ಹಳ್ಳಿಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂಬ ಮಹಾರಾಷ್ಟ್ರದ ನಿರ್ಣಯವನ್ನು ಕಾಂಗ್ರೆಸ್ ಪಕ್ಷ ಹಾಗೂ ಇಡೀ ಕರ್ನಾಟಕ ತೀವ್ರವಾಗಿ ಖಂಡಿಸಿ ವಿರೋಧಿಸುತ್ತದೆ ಎಂದು ಹೇಳಿದರು.
ಸಿಎಂ ಬಸವರಾಜ ಬೊಮ್ಮಾಯಿ ಸುಳ್ಳಿನ ರಾಜ, ಸುವರ್ಣ ಸೌಧದ ಅಸೆಂಬ್ಲಿ ಹಾಲ್ ನಲ್ಲಿ ಸಾವರ್ಕರ್ ಫೋಟೋ ಹಾಕಿದ್ದು ನನಗೆ ಗೊತ್ತೇ ಇಲ್ಲ ಎನ್ನುತ್ತಾರೆ ಎಂದು ಮುಖ್ಯಮಂತ್ರಿಗಳ ನಡೆಗೆ ಆಕ್ರೋಶ ವ್ಯಕ್ತಪಡಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸ್ವಾತಂತ್ರ ಹೋರಾಟಕ್ಕೆ ಸಾವರ್ಕರ್ ಕೊಡುಗೆ ಇಲ್ಲ ಎಂದರು.
ಅಪ್ಪ ಅಂದ್ರೇ ಆಕಾಶ, ಅಮ್ಮ ತನ್ನ ಮಗುವನ್ನ ಕಂಕಳಲ್ಲಿ ಕೂರಿಸಿ ಜೋಪಾನ ಮಾಡಿದ್ರೇ ಅಪ್ಪ ಮಗನನ್ನ ತನ್ನ ಹೆಗಲ ಮೇಲೆ ಕೂರಿಸಿಕೊಂಡು ತಾನು ನೋಡಲಾರದ್ದನ್ನೂ ತನ್ನ ಮಗ ನೋಡಲಿ ಎಂದು ಬಯಸುವ ಹೃದಯ ಅಂತಾರೆ. ಆದ್ರೇ ಇಲ್ಲೊಬ್ಬ ಪಾಪಿ ತಂದೆ ಮಾಡಿದ ಕೆಲಸ ಕೇಳಿದ್ರೆ ಎಂಥವರ ರಕ್ತವೂ ಕುದಿಯುತ್ತೆ.
ಮುಂಬರುವ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಗೆ ರಾಜಕೀಯ ಪಕ್ಷಗಳ ಚುನಾವಣೆ ತಯಾರಿ ಜೋರಾಗಿದೆ. ಅದರಲ್ಲೂ ಬೆಳಗಾವಿ ಜಿಲ್ಲೆಯ 18 ಕ್ಷೇತ್ರಗಳಲ್ಲೂ ಗೆಲುವಿನ ಪಣ ತೊಟ್ಟಿರುವ ಕಾಂಗ್ರೆಸ್ ಪಕ್ಷ ಭರ್ಜರಿ ತಯಾರಿಯಲ್ಲಿ ತೊಡಗಿದೆ.
ಬೆಳಗಾವಿಯಲ್ಲಿ ಮರಾಠಿ ಮಾತನಾಡಲು ಬರೋದಿಲ್ಲ ಎಂಬ ಕಾರಣಕ್ಕೆ ಹಲ್ಲೆ ಮಾಡಿದ್ದಾರೆ ಎಂದು ಯುವಕನೊಬ್ಬ ಆರೋಪ ಮಾಡಿದ್ದಾನೆ.. ಬೆಳಗಾವಿ ತಾಲೂಕಿನ ನಾವಗೆ ಗ್ರಾಮದಲ್ಲಿ ಹುಚ್ಚಾನಟ್ಟಿ ಗ್ರಾಮದ ಶಂಕರ ಪಾಟೀಲ ಎಂಬಾತನ ಮೇಲೆ ಹಲ್ಲೆ ನಡೆದಿದೆ. ಮೊದಲಿಗೆ ನಾವಗೆ ಗ್ರಾಮದ ಕೆರೆಯಲ್ಲಿ ಮೀನು ಹಿಡಿಯುವ ವಿಚಾರಕ್ಕೆ ಗಲಾಟೆ ನಡೆದಿದೆ. ಬಳಿಕ ಮರಾಠಿ ಮತ್ತು ಕನ್ನಡ ಮಾತನಾಡುವ ವಿಚಾರಕ್ಕೆ ಶಂಕರ್ನೊಂದಿಗೆ ಗಲಾಟೆ ಆರಂಭಿಸಿದ ಮರಾಠಿ ಪುಂಡರು ಹಲ್ಲೆ ನಡೆಸಿದ್ದಾರೆ ಎನ್ನಲಾಗ್ತಿದೆ. ಆದರೆ ಡಿಸಿಪಿ ರವೀಂದ್ರ ಗಡಾದಿ ಸಬೂಬ್, ಭಾಷಾ ವಿಚಾರವಾಗಿ ಗಲಾಟೆ ನಡೆದಿಲ್ಲ, ಮೀನು ಹಿಡಿಯುವ ವಿಚಾರಕ್ಕೆ ಗಲಾಟೆ ಆಗಿದೆ ಎಂದಿದ್ದಾರೆ..
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಝುಂಜರವಾಡ ಗ್ರಾಮದಲ್ಲಿ ಈ ಜಾತ್ರೆ ಪ್ರತೀ ವರ್ಷ ನಡೆಯುತ್ತೆ. ಪ್ರತೀ ವರ್ಷ ಬುದ್ದ ಪೌರ್ಣಿಮೆಯಂದು ಗ್ರಾಮದಲ್ಲಿ ಜಾತ್ರೆ ಆಚರಿಸಲಾಗುತ್ತದೆ. ಮಹಾತಪಸ್ವಿ ತ್ರಿಕಾಲ ಜ್ಞಾನಿಗಳಾದ ಅಪ್ಪಯ್ಯ ಹಾಗೂ ಚಂದ್ರಯ್ಯ ಸ್ವಾಮೀಜಿಗಳ ಜಾತ್ರಾ ಮಹೋತ್ಸವ ಅತೀ ವಿಜೃಂಭಣೆಯಿಂದ ಜರುಗುತ್ತದೆ. ಮೂರು ದಿನಗಳ ಕಾಲ ನಡೆಯುವ ಅದ್ದೂರಿ ಜಾತ್ರೆಗೆ ರಾಜ್ಯವಲ್ಲದೆ ಹೊರರಾಜ್ಯಗಳಿಂದ ಸಾವಿರಾರು ಭಕ್ತರು ಆಗಮಿಸುತ್ತಾರೆ.
3 ಜಿಲ್ಲೆ ಆಗಬೇಕು ಎಂದು ನಮ್ಮ ಪಕ್ಷಾತೀತ ಬೆಂಬಲ ಇದೆ. ಈಗಾಗಲೇ ಬೆಳಗಾವಿ ತಾಲೂಕು ವಿಭಜನೆಗೆ ಮನವಿ ಮಾಡಿದ್ದೇನೆ. ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಪ್ರತ್ಯೇಕ ತಾಲೂಕು ಮಾಡುತ್ತೇನೆ ಅಂತ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ರು.
ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿವಾದ ನಿನ್ನೆಯೇ ಸುಖಾಂತ್ಯವಾಗಿರುವುದು ಒಳ್ಳೆಯ ಬೆಳವಣಿಗೆ. ಸಂಗೊಳ್ಳಿ ರಾಯಣ್ಣ ಮತ್ತು ಛತ್ರಪತಿ ಶಿವಾಜಿ ಇಬ್ಬರೂ ದೇಶದ ಮಹಾಪುರುಷರು- ಸಚಿವ ರಮೇಶ್ ಜಾರಕಿಹೊಳಿ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.