ಇಂದಿನಿಂದ 3 ದಿನ ಸದನದಲ್ಲಿ ಉತ್ತರ ಕರ್ನಾಟಕದ ಚರ್ಚೆ
ಮಹದಾಯಿ, ಕೃಷ್ಣಾ ಮೇಲ್ದಂಡೆ ಯೋಜನೆಗಳ ಬಗ್ಗೆ ಧ್ವನಿ
ಭದ್ರಾ ಮೇಲ್ದಂಡೆ ಯೋಜನೆ ನಿರ್ಲಕ್ಷ್ಯದ ಬಗ್ಗೆ ಆಕ್ರೋಶ ಸಾಧ್ಯತೆ
ಕೃಷಿ, ಬೆಳೆಹಾನಿ, ಜನರ ಸಾಮಾನ್ಯರ ಸಮಸ್ಯೆಗಳ ಕುರಿತು ಚರ್ಚೆ
ಮೊದಲ ದಿನದಲ್ಲಿ ಪ್ರಥಮ ಬಾರಿಗೆ ಆಯ್ಕೆಯಾದ ಶಾಸಕರಿಂದ ಚರ್ಚೆ
ಮಧ್ಯ ಕರ್ನಾಟಕದ ಬಯಲು ಸೀಮೆ ಪ್ರದೇಶಗಳಿಗೆ ನೀರುಣಿಸುವ ಮಹತ್ವದ ಭದ್ರಾ ಮೇಲ್ದಂಡೆ ಯೋಜನೆ ಶೀಘ್ರ ಕಾರ್ಯಾನುಷ್ಠಾನಕ್ಕೆ ಆಗ್ರಹಿಸಿ ಜಿಲ್ಲಾ ನೀರಾವರಿ ಅನುಷ್ಟಾನ ಹೋರಾಟ ಸಮಿತಿ ಮಂಗಳವಾರ ಕರೆ ನೀಡಿದ್ದ ಚಿತ್ರದುರ್ಗ ಬಂದ್ ಬಹುತೇಕ ಯಶಸ್ವಿಯಾಗಿದೆ. ಭದ್ರಾ ಮೇಲ್ದಂಡೆ ಕಾಮಗಾರಿ ವಿಚಾರದಲ್ಲಿ ಸರ್ಕಾರಗಳು ತೋರುತ್ತಿರುವ ನಿರ್ಲಕ್ಷ್ಯವನ್ನು ವಿರೋಧಿಸಿ ಜಿಲ್ಲಾ ನೀರಾವರಿ ಅನುಷ್ಟಾನ ಹೋರಾಟ ಸಮಿತಿ ಮಂಗಳವಾರ ಕರೆ ನೀಡಿದ್ದ ಬಂದ್ ಹಿನ್ನೆಲೆಯಲ್ಲಿ ಸುಮಾರು 20ಕ್ಕೂ ಹೆಚ್ಚು ಸಂಘಟನೆಗಳು ರಸ್ತೆಗಿಳಿದು ಅಂಗಡಿ ಮುಂಗಟ್ಟುಗಳನ್ನು ತೆರೆಯದಂತೆ ಮಾಲೀಕರಿಗೆ ಮನವಿ ಮಾಡಿದರು.
Bhadra Upper Bank Project: ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಫಲಾನುಭವಿಗಳ ಸೌಲಭ್ಯ ಮತ್ತು ಸಲಕರಣೆಗಳ ವಿತರಣೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದರು.
ಧಾರವಾಡ ಕಸೂತಿ ಸೀರೆಯುಟ್ಟು ನಿರ್ಮಲಾ ಬಜೆಟ್ ಮಂಡನೆ. ಕರ್ನಾಟಕಕ್ಕೆ ಭರ್ಜರಿ ಗಿಫ್ಟ್ ನೀಡಿದ ನಿರ್ಮಲಾ ಸೀತಾರಾಮನ್. ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಅನುದಾನ ಘೋಷಣೆ. ಬಜೆಟ್ನಲ್ಲಿ ರೈಲ್ವೆ ಇಲಾಖೆಗೆ 2.4 ಲಕ್ಷ ಕೋಟಿ ರೂ. ಮೀಸಲು.
ನಮೋ ಲೆಕ್ಕಾಚಾರದಿಂದ ರೈತರ ಬಾಳಲ್ಲಿ ಬೆಳಕು. ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ಖುಷಿ ತಂದಿದೆ. ಈ ಯೋಜನೆಯನ್ನು ರಾಷ್ಟೀಯ ಯೋಜನೆಯಾಗಿ ಘೋಷಣೆ ಮಾಡಲಾಗಿದೆ. ಇದು ರೈತರ ಬಾಳಿನಲ್ಲಿ ಗುಣಾತ್ಮಕ ಬದಲಾವಣೆ ತರಲು ಪರಿಣಾಮಕಾರಿಯಾಗಿದೆ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದ್ರು.
ಚುನಾವಣೆ ಹೊಸ್ತಿಲಲ್ಲಿ ಇರುವ ಕರ್ನಾಟಕಕ್ಕೆ ಚುನಾವಣೆ ನೆಪದಲ್ಲಾದರೂ ಏನಾದರೂ ಸಿಗಬಹುದು ಎನ್ನುವ ನಿರೀಕ್ಷೆ ಇತ್ತು. ಆದರೆ, ತುಟಿಗೆ ತುಪ್ಪ ಸವರುವ ಬದಲು ಹಣೆಗೆ ತುಪ್ಪ ಸವರುವ ಕೆಲಸವನ್ನು ಕೇಂದ್ರ ಬಜೆಟ್ ನಲ್ಲಿ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಅಭಿಪ್ರಾಯಪಟ್ಟರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.