ಬಿಜೆಪಿ ಸರ್ಕಾರದ ವೈಫಲ್ಯವೇ ಕಾಂಗ್ರೆಸ್ ಪಕ್ಷದ ಯಶಸ್ಸಾಗುತ್ತದೆ. ನುಡಿದಂತೆ ನಡೆಯಲು ಬಿಜೆಪಿಗೆ ಆಗಲಿಲ್ಲ. ಕೊರೊನಾ ಸಂದರ್ಭದಲ್ಲಿ ಕೊಟ್ಟ ಮಾತಿನಂತೆ ನಡೆಯಲಿಲ್ಲ. 20 ಲಕ್ಷ ಕೋಟಿ ಕೊಟ್ಟಿದ್ದೇವೆ ಅಂತಾರೆ. ಆದರೆ ಒಬ್ಬರಿಗೂ ಅದು ತಲುಪಲಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.
ಭೂಸುಧಾರಣಾ ತಿದ್ದುಪಡಿ ಕಾಯ್ದೆ ವಿಚಾರದಲ್ಲಿ ಜೆಡಿಎಸ್ ಪಕ್ಷವು ರಾಜ್ಯ ಸರ್ಕಾರಕ್ಕೆ ಬೆಂಬಲ ನೀಡಿದೆ. ಇಂತಹ ಸಂದರ್ಭದಲ್ಲಿ ಜೆಡಿಎಸ್ ನ ಈ ನಿಲುವಿನ ವಿಚಾರವಾಗಿ ತೀವ್ರ ಟೀಕೆಗಳು ವ್ಯಕ್ತವಾಗುತ್ತಿವೆ. ಇಂತಹ ಸಂದರ್ಭದಲ್ಲಿ ಜೆಡಿಎಸ್ ನಾಯಕ ಹಾಗೂ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಈ ಇಲ್ಲ ಟೀಕೆಗಳಿಗೆ ಉತ್ತರಿಸುವ ಪ್ರಯತ್ನ ಮಾಡಿದ್ದಾರೆ.
ರೈತರ ಆದಾಯ ದುಪ್ಪಟ್ಟುಗೊಳಿಸ್ತೀವಿ ಅಂತ ಭರವಸೆ ನೀಡಿ, ಈಗ ಭತ್ತ, ಮೆಕ್ಕೆಜೋಳ ಮುಂತಾದ ಬೆಳೆಗಳಿಗೆ ಸರ್ಕಾರ ಬೆಂಬಲ ಬೆಲೆಯನ್ನೂ ನೀಡದೆ ರೈತರನ್ನು ಕಷ್ಟಕ್ಕೆ ತಳ್ಳಿ ಕೈತೊಳೆದುಕೊಂಡಿದೆ ಎಂದು ರಾಜ್ಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಬಿಜೆಪಿ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದ್ದಾರೆ.
ಉದ್ಯಮಿಗಳು, ಬಹುರಾಷ್ಟ್ರೀಯ ಕಂಪೆನಿಗಳು ಮತ್ತು ರಿಯಲ್ ಎಸ್ಟೇಟ್ ವ್ಯಾಪಾರಿಗಳು ಅಸಹಾಯಕ ರೈತರಿಗೆ ವಂಚಿಸಿ ಸುಲಭದಲ್ಲಿ ಭೂಮಿ ಖರೀದಿ ಮಾಡಲು ನೆರವಾಗುವ ಉದ್ದೇಶದಿಂದಲೇ ಈ ತಿದ್ದುಪಡಿಯನ್ನು ತರಲಾಗಿದೆ. ಇದರಲ್ಲಿ ಯಾವ ರೈತರ ಹಿತದೃಷ್ಟಿಯೂ ಇಲ್ಲ 'ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಕಿಡಿ ಕಾರಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ ಪೊಲೀಸರು ಜೀವದ ಹಂಗು ತೊರೆದು ಹೋರಾಟ ಮಾಡುವ ಪರಿಸ್ಥಿತಿಯಲ್ಲಿ ಅವರ ಆತ್ಮಾಭಿಮಾನ, ಸ್ವಾಭಿಮಾನಕ್ಕೆ ಧಕ್ಕೆ ತರುವಂತೆ ಹಿರಿಯ ಅಧಿಕಾರಿಗಳು ಕಿರುಕುಳ ನೀಡಿದ್ದೇ ಪಿಎಸ್ಐ ಆತ್ಮಹತ್ಯೆಗೆ ಕಾರಣ ಎಂದು ಮೇಲ್ನೋಟಕ್ಕೆ ಗೊತ್ತಾಗಿದೆ ಎಂದಿದ್ದಾರೆ.
ಲೋಕಸಭಾ ಚುನಾವಣೆ ನಂತರ ಬಂಗಾಳಕ್ಕೆ ಮೊದಲ ಬಾರಿಗೆ ಭೇಟಿ ನೀಡಿದ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಎನ್ಆರ್ಸಿ ಬಗ್ಗೆ ಭೀತಿ ಹರಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿರುವ ಹೈಕೋರ್ಟ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ, ವಿಚಾರಣೆಯನ್ನು ಸೆಪ್ಟೆಂಬರ್ 18ಕ್ಕೆ ಮುಂದೂಡಿದೆ.
ಗಂಭೀರ ಆರ್ಥಿಕ ಕುಸಿತವನ್ನು ಮರೆಮಾಡಲು ಬಿಜೆಪಿ ಸರ್ಕಾರವು ಆರ್ಬಿಐನಿಂದ 1,76 ಲಕ್ಷ ಕೋಟಿ ರೂ.ಗಳನ್ನು ಬಲವಂತವಾಗಿ ತೆಗೆದುಕೊಂಡಿದೆ ಎಂದು ಕಾಂಗ್ರೆಸ್ ಆರೋಪಿಸಿದೆ ಮತ್ತು ಇದು ದೇಶವನ್ನು ಆರ್ಥಿಕ ತುರ್ತುಸ್ಥಿತಿಗೆ ತಳ್ಳಿದೆ ಎಂದು ಹೇಳಿದೆ.
ಆಮ್ ಆದ್ಮಿ ಪಕ್ಷದ ಸರಕಾರ ಕಳೆದ 12 ವರ್ಷಗಳಲ್ಲಿ ಮೋದಿ ಸರ್ಕಾರ ಗುಜರಾತಿನಲ್ಲಿ ಮಾಡಿದ್ದಕಿಂತ ಅಧಿಕ ಕೆಲಸವನ್ನು ದೆಹಲಿಯಲ್ಲಿ ಮಾಡಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.
ಟ್ಯುಟಿಕ್ಯೂರಿನ್ ವಿಮಾನ ನಿಲ್ದಾಣದಲ್ಲಿ ಲೋಯಿಸ್ ಸೋಫಿಯಾ ಎನ್ನುವ ಸಂಶೋಧನಾ ವಿದ್ಯಾರ್ಥಿನಿ ವಿಮಾನದಲ್ಲೇ ಫ್ಯಾಸಿಸ್ಟ್ ಬಿಜೆಪಿ ಸರ್ಕಾರ ಎಂದು ಧಿಕ್ಕಾರ ಕೂಗಿದ್ದಕ್ಕೆ ಅವಳನ್ನು ಬಂಧನ ಮಾಡಿ ಜಾಮೀನು ಮೇಲೆ ಬಿಡುಗಡೆ ಮಾಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.