ಗುಜರಾತ್ನ ಬರೋಡಾ ಬ್ಯಾಂಕ್ ಜೊತೆಗೆ ನಮ್ಮ ಹೆಮ್ಮೆಯ ವಿಜಯಾ ಬ್ಯಾಂಕ್ಅನ್ನು ವಿಲೀನಗೊಳಿಸಲಾಯಿತು. ಬಂದರುಗಳು ಮತ್ತು ವಿಮಾನ ನಿಲ್ದಾಣಗಳನ್ನು ಗುಜರಾತ್ನ ಅದಾನಿಗೆ ಹಸ್ತಾಂತರಿಸಲಾಯಿತು ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
HD Kumaraswamy Slams on BJP Government: ಸ್ವಯಂ ಘೋಷಿತ ಧರ್ಮೋದ್ಧಾರಕರು, ಹಿಂದೂ ಧರ್ಮವನ್ನು ಗುತ್ತಿಗೆಗೆ ಪಡೆದುಕೊಂಡವರೆಂದು ಬೀಗುವವರಿಗೆ ಧರ್ಮವೆಂದರೆ ಅಧಿಕಾರಕ್ಕಿರುವ ರಾಜಮಾರ್ಗವಾಗಿದೆ ಎಂದು ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಸಾತನೂರು ಬಳಿ ಜಾನುವಾರು ವ್ಯಾಪಾರಿ ಹತ್ಯೆ ಆರೋಪಕ್ಕೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಾತನೂರು ಬಳಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ವಾಹನ ಅಡ್ಡಗಟ್ಟಿ 16 ಜಾನುವಾರುಗಳನ್ನ ರಕ್ಷಿಸಲಾಗಿತ್ತು. ಇದೇ ಸ್ಥಳದಲ್ಲಿ ದನದ ವ್ಯಾಪಾರಿ ಇದ್ರೀಸ್ ಪಾಷಾ ಎಂಬುವರ ಮೃತದೇಹ ಪತ್ತೆಯಾಗಿತ್ತು.
Bengaluru gang rape case: ಕೋರಮಂಗಲದ ಯುವತಿಯನ್ನು ನಾಲ್ವರು ರಾಕ್ಷಸರು ಅತ್ಯಾಚಾರಗೈದು ಅಟ್ಟಹಾಸ ಮೆರೆದಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಜೀವಂತವಾಗಿದೆ ಎಂಬ ನಂಬಿಕೆಯನ್ನೇ ಜನ ಕಳೆದುಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
Bengaluru-Mysuru expressway Toll hike: ಉದ್ಘಾಟನೆಯಾದ ಮರುದಿನವೇ ಟೋಲ್ ಸುಲಿಗೆ ಶುರುವಾಗಿತ್ತು, ಈಗ 20 ದಿನದಲ್ಲಿ ಸುಲಿಗೆಯ ದರ ಏರಿದೆ. #40PercentSarkaraದ ದರೋಡೆ 100% ಆಗಿದೆ! ಎಂದು ಕಾಂಗ್ರೆಸ್ ಟೀಕಿಸಿದೆ
ಮತದಾರರಿಗೆ ಸಾಧನೆ ತೋರಿಸಿ ಮತ ಕೇಳಲಾಗದ ಬಿಜೆಪಿ ಹೆಂಡದ ಮೊರೆ ಹೋಗಿರುವುದು ನಾಚಿಕೆಗೇಡು. ಹೆಂಡ ಹಂಚುವ ಕಾರ್ಯಸೂಚಿ RSS ಕಚೇರಿಯಿಂದ ಬಂದಿದ್ದೇ ಸಿಟಿ ರವಿಯವರೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
‘ಕರ್ನಾಟಕಕ್ಕೆ ಬರುವ ಪ್ರಧಾನಿ ಮೋದಿ, ಅಮಿತ್ ಶಾ ಅಪ್ಪಿತಪ್ಪಿಯೂ "ಬೊಮ್ಮಾಯಿ ಸರ್ಕಾರ" ಎಂದು ಸಂಬೋಧಿಸುವುದಿಲ್ಲ ಏಕೆ? ಬೊಮ್ಮಾಯಿ ಸರ್ಕಾರದ ಸಾಧನೆಗಳ ಪಟ್ಟಿ ಹೇಳುತ್ತಿಲ್ಲವೇಕೆ? ಬಿಜೆಪಿಗೆ ಬೊಮ್ಮಾಯಿ ಮುಗಿದ ಅಧ್ಯಾಯವೇ?
ಎಲ್ಲಾ ಸರ್ಕಾರಿ ನೇಮಕಾತಿಗಳಲ್ಲಿ ಅಕ್ರಮ ನಡೆಯಲು ಬಿಟ್ಟ ಸಿಎಂ ಬೊಮ್ಮಾಯಿಯವರು ಉದ್ಯೋಗಾಕ್ಷಾಂಕ್ಷಿಗಳ ನೋವು ಆಲಿಸದೆ ಅಹಂಕಾರದಿಂದ ವರ್ತಿಸಿದ್ದಾರೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
ರಾಜ್ಯದಲ್ಲಿ ನೂತನ ಶಿಕ್ಷಣ ನೀತಿ ಅನುಷ್ಠಾನ ಮಾಡಿದ್ದು, ಇದಕ್ಕೆ ಅವಕಾಶವಿದೆ. 3 ವರ್ಷದಲ್ಲಿ 2 ಪದವಿ ಪಡೆಯಬಹುದು. ವ್ಯಕ್ತಿತ್ವ ವಿಕಸನಕ್ಕೆ ಅಗತ್ಯ ಅವಕಾಶ, ನೆರವನ್ನು ನೀಡಲಾಗುತ್ತದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ರಾಹುಲ್ ಗಾಂಧಿ ರಾಜ್ಯಕ್ಕೆ ಭೇಟಿ ನೀಡಿರುವುದು ಯಾವುದೇ ಪರಿಣಾಮ ಬೀರಿಲ್ಲವೆಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿರುವ ಅವರು, ‘ರಾಹುಲ್ ಗಾಂಧಿ ‘ಭಾರತ್ ಜೋಡೋ ಯಾತ್ರೆ’ ಮಾಡಿದ್ದು, ಯಾವುದೇ ಪರಿಣಾಮ ಉಂಟಾಗಿಲ್ಲ. ಕಾಂಗ್ರೆಸ್ನ ಬೋಗಸ್ ಘೋಷಣೆಗಳಿಂದ ಯಾವುದೇ ಪರಿಣಾಮವಾಗುವುದಿಲ್ಲ’ವೆಂದು ಹೇಳಿದರು.
ರಾಹುಲ್ ಗಾಂಧಿಯವರು 46 ದಿನದ ಹಿಂದೆ ಹೇಳಿದ ಮಾತಿನ ಬಗ್ಗೆ ನಿನ್ನೆ ಪೊಲೀಸರು ಸಾಕ್ಷಿ ಕೇಳಿಕೊಂಡು ಅವರ ಮನೆ ಮುಂದೆ ಹೋಗಿದ್ದಾರೆ. ಆದರೆ ಕರ್ನಾಟಕದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ಸಾಕ್ಷಿ ನೀಡಿದರೂ ತನಿಖೆ ನಡೆಸುತ್ತಿಲ್ಲ! ಎಂದು ಖರ್ಗೆ ಕಿಡಿಕಾರಿದ್ದಾರೆ.
Bharat Jodo Yatra: ಮಹಿಳಾ ಪೀಡಕರ ಕೂಟಕ್ಕೆ ಮಹಿಳಾ ರಕ್ಷಕರೇ ಅಪರಾಧಿಗಳಾಗಿ ಕಾಣುತ್ತಾರೆ ಎನ್ನುವುದಕ್ಕೆ ನಮ್ಮ ನಾಯಕರಾದ ರಾಹುಲ್ ಗಾಂಧಿಯವರಿಗೆ ಪ್ರಧಾನಿ ಮೋದಿ ಸರ್ಕಾರ ಪೊಲೀಸರ ಮೂಲಕ ನೀಡುತ್ತಿರುವ ಕಿರುಕುಳವೇ ಸಾಕ್ಷಿ ಎಂದು ಕಿಡಿಕಾರಿದ್ದಾರೆ.
ಚುನಾವಣೆ ಆಗಲಿ, ಫಲಿತಾಂಶ ಬರಲಿ. ಓಡು ಮಗಾ, ಓಡು ಮಗಾ ಸರದಿ ಯಾರದ್ದೆನ್ನುವುದು ಜನಕ್ಕೇ ಗೊತ್ತಾಗುತ್ತದೆ. ಎಷ್ಟಾದರೂ ಓಡು ಮಗಾ ರೇಸ್ʼನಲ್ಲಿ ನಿಮ್ಮನ್ನು ಸರಿಗಟ್ಟುವ ವೀರರೂ ಶೂರರೂ ಕರ್ನಾಟಕದಲ್ಲಿ ಇದ್ದಾರೆಯೇ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಸುಳ್ಳುಗಳ ಮಹಾ ಕಾರ್ಖಾನೆಯನ್ನೇ ತೆರೆದು ‘ಸುಳ್ಳುಸೃಷ್ಟಿʼ ಮಾಡುತ್ತಿರುವ ಬಿಜೆಪಿಯ ವಕ್ರದೃಷ್ಟಿ ಈಗ ಸ್ವಾಭಿಮಾನದಿಂದ ಭೂಮಿತಾಯಿಯನ್ನು ನಂಬಿ ಬದುಕುತ್ತಿರುವ ಒಕ್ಕಲಿಗರ ಮೇಲೆ ಬಿದ್ದಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
Health Department : ಹೆಚ್ಚಿನ ಒಳಗುತ್ತಿಗೆ ನೌಕರರು ಕಳೆದ 15-20 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ.ಅವರನ್ನು ಖಾಯಂಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಲಾಗಿದೆ.ಆದರೂ ಅದರ ಬಗ್ಗೆ ತಲೆ ಕೆಡಿಸಿಕೊಳ್ಳದ ಸರ್ಕಾರ ವಿರುದ್ದ ಹಲವಡೆ ಪ್ರತಿಭಟನೆ ನಡೆಸಲಾಗುತ್ತಿದೆ.
H3N2 ವೈರಸ್ ಲಕ್ಷಣಗಳು: ಹೆಚ್ಚುತ್ತಿರುವ H3N2 ಪ್ರಕರಣಗಳು ಕೇಂದ್ರ ಸರ್ಕಾರದ ತಲೆನೋವನ್ನು ಹೆಚ್ಚಿಸಿವೆ. ಈ ಬಗ್ಗೆ ಆರೋಗ್ಯ ತಜ್ಞರು ನಿರಂತರವಾಗಿ ಎಚ್ಚರಿಕೆ ನೀಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಕೇಂದ್ರವು ರಾಜ್ಯಗಳಿಗೆ ಮಹತ್ವದ ಸೂಚನೆ ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.