ನಾನೇನಾದ್ರು ತಪ್ಪು ಮಾಡಿದ್ರೆ ಚೌಡೇಶ್ವರಿ ನನಗೆ ಶಿಕ್ಷೆ ನೀಡಲಿ.. ಮತ್ತೆ ಸಂಪುಟಕ್ಕೆ ಸೇರಿಸೋದು ಬಿಡೋದು ಹೈಕಮಾಂಡ್ಗೆ ಬಿಟ್ಟಿದ್ದು ಎಂದು ಮಾಜಿ ಸಚಿವ ಈಶ್ವರಪ್ಪ ಹೇಳಿದ್ದಾರೆ. ಕೇಂದ್ರದ ನಾಯಕರ ನಿರ್ಧಾರಕ್ಕೆ ಬದ್ಧ ಎಂದಿದ್ದಾರೆ.
ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರೇ ತಪ್ಪು ಮಾಡಿದ್ರೂ ಅವರಿಗೆ ಶಿಕ್ಷೆ ಕೊಟ್ಟೇ ಕೊಡ್ತೀವಿ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಪೊಲೀಸ್ ಠಾಣೆ ಮೇಲೆ ದಾಳಿ ಮಾಡೋದು ಅಕ್ಷಮ್ಯ ಅಪರಾಧ ಅಂತಾ ಸಿಎಂ ಹೇಳಿದ್ದಾರೆ. ಇನ್ನು ಸಂಪುಟ ವಿಸ್ತರಣೆ ವಿಚಾರವಾಗಿ ಹೈಕಮಾಂಡ್ ಕರೆದ ಕೂಡ್ಲೇ ದೆಹಲಿಗೆ ತೆರಳೋದಾಗಿ ಸಿಎಂ ಹೇಳಿದ್ದಾರೆ.
BS Yadiyurappa Resignation - ರಾಜ್ಯದ ಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ಅವರ 4ನೇ ಕಾರ್ಯಕಾಲ ಕೂಡ ಬೇಗನೆ ಮುಕ್ತಾಯಗೊಂಡಿದೆ. ಇಂತಹ ಪ್ರಬಲ ನಾಯಕ 'ರಾಜಾಹುಲಿ' ಎಂದೇ ಖ್ಯಾತ BSY ಕೇವಲ ಎರಡು ವರ್ಷಗಳಲ್ಲಿ ಕರ್ನಾಟಕದ ಮುಖ್ಯಮಂತ್ರಿ ಹುದ್ದೆಗೆ ಏಕೆ ರಾಜೀನಾಮೆ ನೀಡಿದರು? ಆ ವಿಶೇಷ ಕಾರಣಗಳು ಯಾವುವು? ಯಾವ ಕಾರಣದಿಂದ ಹೈ ಕಮಾಂಡ್ಅವರಿಗೆ ರಾಜೀನಾಮೆಯನ್ನು ನೀಡಲು ಸೂಚಿಸಿದೆ ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.
ಇಲ್ಲಿಯವರೆಗೆ ನನ್ನನ್ನು ರಾಜೀನಾಮೆ ನೀಡುವಂತೆ ಕೇಳಿಲ್ಲ. ಜುಲೈ 25 ರ ನಂತರವೇ ನಾನು ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ. ಬಿಜೆಪಿ ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ ಮತ್ತು ಪಕ್ಷವನ್ನು ಬಲಪಡಿಸಲು ಮತ್ತು ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ತರುವ ಕೆಲಸ ಮಾಡುತ್ತೇನೆ ಎಂದು ಹೇಳಿದರು.
ಮೂಲಗಳ ಪ್ರಕಾರ ಸಭೆಯಲ್ಲಿ ಮಸ್ಕಿ ಕ್ಷೇತ್ರಕ್ಕೆ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್, ಬಸವಕಲ್ಯಾಣಕ್ಕೆ ಮಾಜಿ ಶಾಸಕ ಮಲ್ಲಿಕಾರ್ಜುನ ಕೂಬಾ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಮಾಜಿ ಸಚಿವ ಸುರೇಶ್ ಅಂಗಡಿಯವರ ಪುತ್ರಿ ಶ್ರದ್ಧಾ ಶೆಟ್ಟರ್ ಹೆಸರುಗಳ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.