ರಾಜ್ಯದ ಇಂಧನ ಇಲಾಖೆ ತನ್ನ ದೈನಂದಿನ ಚಟುವಟಿಕೆಗಳಿಗೂ ಸಹ ಹಣವಿಲ್ಲವೆಂದು ಅಸಹಾಯಕತೆ ವ್ಯಕ್ತಪಡಿಸಿ, ಹೆಚ್ಚಿನ ಸಾಲ ಪಡೆಯಲು ಅನುಮತಿ ನೀಡಿ, ಇಲ್ಲವೇ ಸರ್ಕಾರದಿಂದ ಬರಬೇಕಿರುವ ಬಾಕಿಯನ್ನು ಪಾವತಿಸಿ ಎಂದು ಪತ್ರ ಬರೆದಿರುವುದು ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಎಷ್ಟರ ಮಟ್ಟಿಗೆ ಹದಗೆಡಿಸಿದೆ ಎಂಬುದರ ಸುಸ್ಪಷ್ಟ ನಿದರ್ಶನವೆಂದು ಬಿಜೆಪಿ ಟೀಕಿಸಿದೆ.
ರಾಜ್ಯದಲ್ಲಿ ಬರಗಾಲ ತಾಂಡವವಾಡುತ್ತಿದೆ. ಕೇಂದ್ರದ ಅಧಿಕಾರಿಗಳು ಬಂದು ವರದಿ ಸಲ್ಲಿಸಿದ್ದು ಕೂಡ ಹಳೆಯ ಮಾತಾಯಿತು. ಆದರೆ ಕೇಂದ್ರದ ಬಿಜೆಪಿ ಸರ್ಕಾರವು ಇಲ್ಲಿಯವರೆಗೂ ನಮಗೆ NDRF ಅಡಿಯಲ್ಲಿ ಒಂದು ಪೈಸೆಯನ್ನೂ ಕೊಟ್ಟಿಲ್ಲವೆಂದು ಸಚಿವ ಎಂ.ಬಿ.ಪಾಟೀಲ್ ಕಿಡಿಕಾರಿದ್ದಾರೆ.
ರಾಜ್ಯ ಬಿಜೆಪಿ ಪಕ್ಷದ ಪರವಾಗಿ ಇತರೆ ಪಕ್ಷಗಳು ಸಾಥ್ ನೀಡಲು ಮುಂದಾಗಿವೆ. ಬಿಜೆಪಿ ಅಭಿವೃದ್ಧಿ ಕೆಲಸಗಳನ್ನ ಗುರ್ತಿಸಿರುವ ಸಲುವಾಗಿ ರಾಷ್ಟ್ರೀಯ ಲೋಕಜನಶಕ್ತಿ ಪಕ್ಷ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಪರ ಬೆಂಬಲಕ್ಕೆ ನಿಂತಿದೆ.
51 ಸದಸ್ಯ ಬಲದ ಅಗರ್ತಲಾ ಮುನ್ಸಿಪಲ್ ಕಾರ್ಪೊರೇಷನ್ (AMC) ಯ ಎಲ್ಲಾ ಸ್ಥಾನಗಳನ್ನು ಗೆಲ್ಲುವುದರ ಜೊತೆಗೆ ಇತರ ನಗರ ಸಂಸ್ಥೆಗಳನ್ನು ಕೂಡ ಆಡಳಿತರೂಢ ಬಿಜೆಪಿ ಪಕ್ಷವು ಗೆದ್ದಿದೆ.ಇನ್ನೊಂದೆಡೆಗೆ ಪ್ರತಿಪಕ್ಷಗಳಾದ ಟಿಎಂಸಿ ಹಾಗೂ ಸಿಪಿಎಂ ತಮ್ಮ ಖಾತೆಯನ್ನು ತೆರೆಯಲು ವಿಫಲವಾಗಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.