ವಿಧಾನಸಭಾ ಚುನಾವಣೆ ಸೋಲು ಹಿನ್ನೆಲೆ ಬಿಜೆಪಿಯಲ್ಲಿ ಬದಲಾವಣೆ ಪರ್ವ. ಮತ್ತಷ್ಟು ಬಿರುಸುಗೊಂಡ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಚೆರ್ಚೆ. ಅವಧಿ ಪೂರ್ಣಗೊಂಡಿರುವ ಕಟೀಲ್ ಬದಲಾವಣೆಗೆ ಪಕ್ಷದಲ್ಲೇ ಭಾರೀ ಒತ್ತಾಯ. ರಾಜ್ಯಾಧ್ಯಕ್ಷ ಸ್ಥಾನದ ರೇಸ್ನಲ್ಲಿ ಶೋಭಾ ಕರಂದ್ಲಾಜೆ, ಡಾ. ಅಶ್ವಥ್ ನಾರಾಯಣ್. ಜಾತಿ ಸಮೀಕರಣದ ಮೇಲೆ ಬಿಜೆಪಿ ರಾಜ್ಯಾಧ್ಯಕ್ಷ ನೇಮಕ ಸಾಧ್ಯತೆ.
ಬಿಜೆಪಿ ರಾಜ್ಯಾಧ್ಯಕ್ಷರ ಎದುರಿಗೆ ಟಿಕೆಟ್ಗಾಗಿ ಕಾರ್ಯಕರ್ತರ ಜಟಾಪಟಿ ನಡೆಸಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿಯಲ್ಲಿ ನಡೆದಿದೆ. ಮಂಡಲ ಕಾರ್ಯಕಾರಣಿ ಸಭೆಯಲ್ಲಿ ಒಂದೇ ಪಕ್ಷದ ಇಬ್ಬರು ನಾಯಕರು ಟಿಕೆಟ್ ನೀಡುವಂತೆ ಆಗ್ರಹಿಸಿದ್ದಾರೆ.
BJP ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸುನಿಲ್ ಕುಮಾರ್ ಹೆಸರು ಕೇಳಿ ಬರುತ್ತಿದ್ದು, ಪಕ್ಷ ಯಾವ ಜವಾಬ್ದಾರಿ ಕೊಟ್ಟರೂ ನಿಭಾಯಿಸುತ್ತೇನೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿಕೆ ನೀಡಿದ್ದಾರೆ. ಇವತ್ತು ತಕ್ಷಣ ಬದಲಾವಣೆ ಆಗುತ್ತೆ ಎಂದು ಅನಿಸುತ್ತಿಲ್ಲ. ರಾಜ್ಯಾಧ್ಯಕ್ಷರಾಗಲು ನನ್ನಂಥಾ ಹತ್ತಾರು ಜನರಿಗೆ ಯೋಗ್ಯತೆ ಇದೆ ಎಂದಿದ್ದಾರೆ.
ರಾಜಸ್ಥಾನದಲ್ಲಿ ಹಿಂದೂ ಟೈಲರ್ ಹತ್ಯೆ ನಾಚಿಕೆಗೇಡು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ.. ಇದೊಂದು ವ್ಯವಸ್ಥಿತ ಸಂಚು, ದೇಶದಲ್ಲಿ ಮತ್ತೆ ಭಯೋತ್ಪಾದಕ ಚಟುವಟಿಕೆ ಶುರುವಾಗಿದೆ. ರಾಜಸ್ಥಾನ ಘಟನೆ ಮತ್ತು ಗಲಭೆ ಹಿಂದೆ ವಿದೇಶಿ ಕೈವಾಡವಿದೆ. ಕಾಂಗ್ರೆಸ್ ಈಗ ಮೌನವಾಗಿರೋದ್ರ ಹಿನ್ನೆಲೆ ಏನು? ಎಂದು ಕಟೀಲ್ ಪ್ರಶ್ನಿಸಿದ್ದಾರೆ.
ಚಾಮರಾಜನಗರದಲ್ಲಿ ಪರಿಷತ್ ಚುನಾವಣಾ ಫಿಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ಚುನಾವಣೆಗಳು ಯಾವತ್ತೂ ಯಾವುದೇ ಚುನಾವಣೆಗೆ ದಿಕ್ಸೂಚಿ ಆಗುವುದಿಲ್ಲ ಅಂತಾ ಹೇಳಿದ್ರು.
ಡಾ.ಶಿವರಾಂ ಕಾರಂತ್ ಬಡಾವಣೆ ಡಿನೋಟಿಫೈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರನ್ನು ಸೆಪ್ಟೆಂಬರ್ 4ರವರೆಗೆ ಬಂಧಿಸದಂತೆ ಎಸಿಬಿ ತನಿಖಾಧಿಕಾರಿಗಳಿಗೆ ರಾಜ್ಯ ಹೈಕೋರ್ಟ್ ಸೂಚನೆ ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.