ತನ್ನ ಸೋಲಿಗೆ ರುದ್ರೇಶ್ ಕಾರಣ ಎಂಬ ಸೋಮಣ್ಣ ಪರೋಕ್ಷ ಆರೋಪಕ್ಕೆ ಕೆಆರ್ಐಡಿಎಲ್ ಮಾಜಿ ಅಧ್ಯಕ್ಷ, ವಿಜಯೇಂದ್ರ ಆಪ್ತ ರುದ್ರೇಶ್ ಪ್ರತಿಕ್ರಿಯೆ ಕೊಟ್ಟು ತಾನು ಪಕ್ಷ ವಿರೋಧಿ ಕಾರ್ಯ ಮಾಡಿಲ್ಲ ಎಂದಿದ್ದಾರೆ.
D.K. Shivakumar statement on Congress-BJP clash in Karnataka: ಬಿಜೆಪಿ ಗೂಂಡಾಗಳು ಕೈಯಲ್ಲಿ ಮಂತ್ರಾಕ್ಷತೆ ಹಿಡಿದಿದ್ದರೆ, ಬಗಲಲ್ಲಿ ದೊಣ್ಣೆ ಸಿಕ್ಕಿಸಿಕೊಂಡಿದ್ದಾರೆ ಹಿಡಿದಿದ್ದಾರೆ. ಈ ಗೂಂಡಾಗಳ ಗೊಡ್ಡು ಬೆದರಿಕೆಗೆ ಯಾವುದೇ ಕಾಂಗ್ರೆಸಿಗ ಹೆದರುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.
ಅಯೋಧ್ಯೆ ರಾಮ ಮಂದಿರ ಉದ್ಘಾಟನೆ, ಪ್ರಾಣ ಪ್ರತಿಷ್ಥಾಪನೆ ಸಮಾರಂಭದಲ್ಲಿ ಪಾಲ್ಗೊಳ್ಳುವಲ್ಲೂ ರಾಜಕಾರಣ ಮಾಡುವ ನಿಮ್ಮದು ನೀಚ ರಾಜಕಾರಣ ಎಂದು ಸಚಿವ ಪ್ರಹ್ಲಾದ್ ಜೋಶಿ ಅವರು ಜರಿದಿದ್ದಾರೆ.
Actress Meena Entry to Politics: ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರಾ ಹಿರಿಯ ನಾಯಕಿ ಮೀನಾ..? ಇತ್ತೀಚಿಗೆ ಈ ವಿಚಾರದಲ್ಲಿ ಸುಳಿವು ಕೊಟ್ಟಿದ್ದೀರಾ..? ಮೀನಾ ಯಾವ ಪಕ್ಷ ಸೇರಲಿದ್ದಾರೆ? ಇನ್ನು ಸಿನಿಮಾದಲ್ಲಿ ಕಾಣಿಸಿಕೊಳ್ಳುವುದಿಲ್ಲವೇ? ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ..
ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿಯ ಪರಿಶೀಲನೆ ನಡೆಸಲು ಕೇಂದ್ರ ಸರ್ಕಾರ ಸಂಪುಟ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಿರುವುದು ‘‘ದಲಿತ ಸಮುದಾಯದ ದಾರಿ ತಪ್ಪಿಸುವ ಕುತಂತ್ರವಷ್ಟೇ ಆಗಿದ್ದು ಇದರ ಹಿಂದೆ ಯಾವುದೇ ಪ್ರಾಮಾಣಿಕವಾದ ಕಾಳಜಿ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.
ಬಿಜೆಪಿ ನಾಯಕರು ದೊಡ್ಡ ನಾಯಕರಿಗೆ ಕೆಳಮಟ್ಟದ ಭಾಷೆಯಲ್ಲಿ ಮಾತನಾಡಿ ನಾಯಕರಾಗುವ ಆಸೆ ಬಿಡಬೇಕು. ನೀವು ಹೀಗೆ ಟೀಕೆ ಮಾಡಿದರೆ ನಾವು ನಿಮ್ಮನ್ನು ಕೆಳ ಮಟ್ಟದ ಭಾಷೆಯಲ್ಲಿ ಟೀಕೆ ಮಾಡುವ ಅನಿವಾರ್ಯತೆಯೂ ಇಲ್ಲ ಅವಶ್ಯಕತೆಯೂ ಇಲ್ಲ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷರಾದ ರಮೇಶ್ ಬಾಬು ಕಿಡಿ ಕಾರಿದ್ದಾರೆ.
ಅಯೋಧ್ಯೆಯಲ್ಲಿ ರಾಮದೇವರ ಪ್ರಾಣಪ್ರತಿಷ್ಠೆ ನಂತರ ಕ್ಷೇತ್ರ ಹಂಚಿಕೆ ನಿರ್ಧಾರ ಕೈಗೊಳ್ಳಲಾಗುವುದು. ಬಿಜೆಪಿ-ಜೆಡಿಎಸ್ ರಾಜ್ಯ ನಾಯಕರ ವಿಶ್ವಾಸಕ್ಕೆ ತೆಗೆದುಕೊಂಡು ನಿರ್ಣಯ ತೆಗೆದುಕೊಳ್ಳುವುದಾಗಿ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ದೇಶಭಕ್ತಿ ಎಂದರೆ ದೇಶದ ಜನರನ್ನು ಪ್ರೀತಿಸುವುದು. ಜಾತಿ-ಧರ್ಮದ ಹೆಸರಲ್ಲಿ ದೇಶದ ಜನರನ್ನೇ ದ್ವೇಷಿಸುವವರು ದೇಶಭಕ್ತರಾಗಿರಲು ಸಾಧ್ಯವೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರೋಕ್ಷವಾಗಿ ಬಿಜೆಪಿ ವಿರುದ್ಧ ಗುಡುಗಿದರು.
ನಕಲಿ ಮೈಸೂರು ಸ್ಯಾಂಡಲ್ ಸೋಪ್ ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ಹೊರಬಂದ ಅಚ್ಚರಿ ಹಾಗೂ ಮುಖ್ಯ ಸಂಗತಿ ಎಂದರೆ ಈ ಇಬ್ಬರು ವ್ಯಕ್ತಿಗಳು ಬಿಜೆಪಿಯ ಸಕ್ರಿಯ ಕಾರ್ಯಕರ್ತರು. ಇವರು ಯೋಗಿ ಆದಿತ್ಯನಾಥ್ ತೆಲಂಗಾಣ ಶಾಸಕ ರಾಜಾ ಸಿಂಗ್ ಅವರ ಒಡನಾಡಿಗಳಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.