ನಮ್ಮ ಅಕ್ಕಿ ಬಳಸಿಕೊಂಡು ಜನತೆಗೆ ಬಿಜೆಪಿ ಮಂತ್ರಾಕ್ಷತೆ ಹಂಚುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ನೀಡಿರುವ ಹೇಳಿಕೆಗೆ ತಿರುಗೇಟು ಕೊಟ್ಟ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಇವರ ಅಕ್ಕಿ ಎಂದರೆ ದೊಡ್ಡ ಆಲದಹಳ್ಳಿಯ ಅವರ ತೋಟದಲ್ಲಿ ಬೆಳೆದಿರುವುದಾ? ಎಂದು ಟಾಂಗ್ ಕೊಟ್ಟರು.
ನಾವು ಶ್ರದ್ಧೆ, ಭಕ್ತಿಯಿಂದ ರಾಮನನ್ನ ಪೂಜೆ ಮಾಡ್ತೇವಿ. ಕಾಂಗ್ರೆಸ್ನವರು ನಿಜವಾದ ಹಿಂದುಗಳು. ನಾವು ಯಾವತ್ತೂ ಕೂಡ ರಾಜಕಾರಣಕ್ಕೆ ಹಿಂದುತ್ವ ಮತ್ತು ಶ್ರೀರಾಮನನ್ನ ತೆಗೆದುಕೊಂಡು ಬಂದಿಲ್ಲ ಎಂದು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಲೋಕಸಭೆ ಚುನಾವಣೆಗೆ ಬಿಜೆಪಿ ನಾಯಕರ ತಯಾರಿ
ಇಂದು ರಾಜ್ಯ ಬಿಜೆಪಿ ನಾಯಕರ ಮಹತ್ವದ ಮೀಟಿಂಗ್
ಯಲಹಂಕದ ರಮಡ ರೆಸಾರ್ಟ್ನಲ್ಲಿ ನಡೆಯುವ ಸಭೆ
ಮಹತ್ವದ ಸಭೆಯಲ್ಲಿ ಉಸ್ತುವಾರಿ ಅರುಣ್ ಸಿಂಗ್ ಭಾಗಿ
ವಾಸ್ತವ ಅರಿಯದೇ, ಕೇಂದ್ರ ಸರ್ಕಾರದ ಲೋಪಗಳನ್ನು ಮುಚ್ಚಿಕೊಳ್ಳಲು ಬಿಜೆಪಿಗರು ರಾಜ್ಯ ಕಾಂಗ್ರೆಸ್ ಸರ್ಕಾರದ ಮೇಲೆ ಇಲ್ಲದ ಆರೋಪ ಮಾಡುತ್ತಿದ್ದಾರೆ. ಈ ಬರಗಾಲದ ಮಧ್ಯೆ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಮೂಲಕ ಜನಸಾಮಾನ್ಯರ ದೈನಂದಿನ ಖರ್ಚುಗಳಿಗೆ ಆಸರೆಯಾಗಿ ಕಾಂಗ್ರೆಸ್ ನಿಂತಿದೆ ಎಂಬ ಸತ್ಯವನ್ನು ಮರೆಮಾಚಲು ಪ್ರಯತ್ನ ಮಾಡುತ್ತಿದೆ ಎಂದು ವಿಧಾನ ಪರಿಷತ್ ಶಾಸಕ, ಕೆಪಿಸಿಸಿ ಮಾಧ್ಯಮ ಘಟಕದ ಉಪಾಧ್ಯಕ್ಷರಾದ ದಿನೇಶ ಗೂಳಿಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅವರು ಮಹಾರಾಷ್ಟ್ರದ ಸಂಗಮನೇರ್ ನಲ್ಲಿ ಇಂದು ಆಯೋಜಿಸಿದ್ದ ಸಹಕಾರ ಚಳವಳಿಯ ಹಿರಿಯ ಧುರೀಣ ಭಾವು ಸಾಹೇಬ್ ಥೋರಟ್ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಡಾ. ಅಣ್ಣಾ ಸಾಹೇಬ್ ಶಿಂಧೆ ಅವರ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಅಯೋಧ್ಯೆಗೆ ಹೋಗುವವರಿಗೆ ರಾಜ್ಯ ಕಾಂಗ್ರೆಸ್ ಗೋಧ್ರಾ ಘಟನೆಯನ್ನು ನೆನಪಿಸಿ, ಅದೇ ರೀತಿಯ ಬೆದರಿಕೆ ಹಾಕಿದೆ. ಈ ಸಂಭ್ರಮದ ಶುಭ ಘಳಿಗೆ ವೇಳೆ ಕಾಂಗ್ರೆಸ್ ಸುಳ್ಳು ಸುದ್ಧಿ ಹಬ್ಬಿಸುವುದರಲ್ಲಿ ನಿರತವಾಗಿದೆ. ರಾಮಭಕ್ತರು ಸಂಭ್ರಮಿಸದಂತೆ ರಾಜ್ಯ ಸರ್ಕಾರ ತಂತ್ರ ರೂಪಿಸಿದೆ ಎಂದು BJP ಕಿಡಿಕಾರಿದೆ.
"ನನಗೆ ಕಿರುಕುಳ ನೀಡುವ ಉದ್ದೇಶದಿಂದಲೇ ದ್ವೇಷ ರಾಜಕಾರಣ ಮಾಡಲಾಗುತ್ತಿದ್ದು, ಅಧಿಕಾರಿಗಳೂ ರಾಜಕೀಯ ಮಾಡುತ್ತಿದ್ದಾರೆ, ಮಾಡಲಿ. ಭಗವಂತ ಹಾಗು ನ್ಯಾಯಾಲಯದ ಮೇಲೆ ನನಗೆ ನಂಬಿಕೆಯಿದೆ. ಕಾಲಚಕ್ರ ಉರುಳಲಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ರಿಂದ ಪ್ರೊಟೆಸ್ಟ್. ನಾನು ಕರ ಸೇವಕ ಬಂಧಿಸಿ ಎಂದು ಮುಂದಾದ ಬಿಜೆಪಿ ನಾಯಕರು. ಶ್ರೀಕಾಂತ್ ಪೂಜಾರಿ ಬಿಡುಗಡೆಗೆ ಆಗ್ರಹಿಸಿ ಸುನೀಲ್ ಕುಮಾರ್ ಧರಣಿʼ.
Prasad Abbayya: ಹುಬ್ಬಳ್ಳಿಯ ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ವಿಷಯವನ್ನು, ಬಿಜೆಪಿ ಮುಂಬರುವ ಲೋಕಸಭಾ ಚುನಾವಣೆಗೆ ಇದನ್ನು ಬೇರೆ ರೀತಿಯಲ್ಲಿ ಬಿಂಬಿಸುವ ಮಾಡ್ತಿದ್ದಾರೆಂದು ಶಾಸಕ ಪ್ರಸಾದ್ ಅಬ್ಬಯ್ಯ ಗಂಭೀರವಾಗಿ ಆರೋಪಿಸಿದರು.
Basavaraja Bommai: ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗ ರಾಮಮಂದಿರ ನಿರ್ಮಾಣವಾಗುತ್ತಿರುವ ಸಂದರ್ಭದಲ್ಲಿ ಇಡೀ ದೇಶದಲ್ಲಿ ಸಂಭ್ರಮಾಚರಣೆ ನಡೆಯುತ್ತಿದೆ. ರಾಮಜನ್ಮ ಭೂಮಿಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿರುವುದರಿಂದ ಅದನ್ನು ತಡೆದುಕೊಳ್ಳಲಾಗದೇ ಹತಾಶರಾಗಿ ಕಾಂಗ್ರೆಸ್ ನಾಯಕರು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ.
ರಾಮಭಕ್ತ, ಕರಸೇವಕ ಎಂದು ಸಮಾಜದೆದುರು ನಕಲಿ ವೇಷ ತೊಟ್ಟು ಮೆರೆಯುವ ಶ್ರೀಕಾಂತ ಪೂಜಾರಿ ಕಾನೂನಿನ ದೃಷ್ಟಿಯಲ್ಲಿ ಒಬ್ಬ ಸಮಾಜಘಾತುಕ ವ್ಯಕ್ತಿ. ತನ್ನ ಅಪರಾಧ ಕೃತ್ಯಗಳಿಂದ ರಕ್ಷಣೆ ಸಿಗಲಿ ಎಂಬ ಕಾರಣಕ್ಕೆ ಧರ್ಮರಕ್ಷಣೆ ನಾಟಕವಾಡುವ ಇಂಥವರನ್ನು ಬಂಧಿಸದೆ, ರಾಜಾರೋಷವಾಗಿ ತಿರುಗಾಡಲು ಬಿಟ್ಟರೆ ಶ್ರೀರಾಮಚಂದ್ರನೂ ಕ್ಷಮಿಸಲಾರ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.