ಮಂಡ್ಯ ಜಿಲ್ಲೆಯಲ್ಲಿಯ ಪಾಂಡವಪುರ ಹಾಗೂ ಮದ್ದೂರು ತಾಲೂಕಿನಲ್ಲಿ ಇಂದು ನಡೆಯಲಿರುವ ಜನಸಂಕಲ್ಪ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರನ್ನು ಅಬಕಾರಿ ಸಚಿವ ಹಾಗೂ ಮಂಡ್ಯ ಮತ್ತು ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಚಿವರಾದ ಡಾ. ಕೆ.ಸಿ.ನಾರಯಣ ಗೌಡ ಅವರು ಆಹ್ವಾನಿಸಿದರು.
ಈಶ್ವರಪ್ಪ ಅವರನ್ನು ಮಂತ್ರಿಮಂಡಲದಿಂದ ವಜಾ ಮಾಡುವವರೆಗೂ ಅಹೋರಾತ್ರಿ ಧರಣಿಯನ್ನು ಕೈಬಿಡುವುದಿಲ್ಲ ಎಂಬ ಸ್ಪಷ್ಟ ನಿಲುವನ್ನು ತಾಳಿದೆ. ಈ ಹಿನ್ನಲೆಯಲ್ಲಿ ಸರ್ಕಾರ ಸೋಮವಾರದ ಬಳಿಕ ಸದನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲು ತೀರ್ಮಾನಿಸಿದೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಮಧ್ಯಾಹ್ನ ಕಲಬುರಗಿ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದರು. ವಿಮಾನ ನಿಲ್ದಾಣವು ಇಂದು ಬೆಂಗಳೂರಿನಿಂದ ಕಲಬುರಗಿಗೆ ವಿಮಾನ ಸೇವೆಯನ್ನು ಪ್ರಾರಂಭಿಸಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.